ವಿಜಯಪುರ | ಪರಿಸರ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್‌ಗೆ ಸೀಮಿತವಾಗದಿರಲಿ: ನಟ ವಿಶ್ವಪ್ರಕಾಶ

Date:

ಪರಿಸರದ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್‌ಗೆ ಸೀಮಿತವಾಗಬಾರದು. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರೂ ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ನಟ, ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಹೇಳಿದರು.

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಯುವ ಸಂಗಮ ಯುವ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮಿಣ ಅಭಿವೃದ್ಧಿ ಕೇಂದ್ರ ಜಂಟಿಯಾಗಿ ಹಮ್ಮಿಕೊಂಡಿದ್ದ ʼವೃಕ್ಷಥಾನ್ ಜಾಥಾʼದಲ್ಲಿ ಮಾತನಾಡಿದ ಅವರು, “ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ ನೀಡುತ್ತವೆ. ನೆರಳು, ಹಣ್ಣು ನೀಡಿ ನೆರವಾಗುತ್ತಿವೆ. ಆದರೆ ಮನುಷ್ಯ ದುರಾಸೆಯಿಂದ ಪರಿಸರವನ್ನು ಹಾಳುಮಾಡಿ ನಾಶ ಮಾಡುತ್ತಿದ್ದಾನೆ. ಪ್ರಕೃತಿ ಇದ್ದರೆ ಜೀವ ಸಂಕುಲ ಬದುಕಲು ಸಾಧ್ಯ. ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ಬೆಳಕು, ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದರು.

ದೇವರ ಹಿಪ್ಪರಗಿ ಜೆಎಮ್‌ಜೆ ನಿರ್ದೇಶಕಿ ಸಿಸ್ಟರ್ ಹೃದಯಾ ಮಾತನಾಡಿ, “ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಆಸಕ್ತಿ ವಹಿಸಬೇಕಿದೆ. ಒಬ್ಬರೇ ಮಾಡುವುದಕ್ಕಿಂತ ಒಬ್ಬೊಬ್ಬರೂ ಸೇರಿ ಮಾಡುವ ಕೆಲಸ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಇಂಗಳಗಿ-ಚಟ್ಟರಕಿ ಗ್ರಾಮ, ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸುವಂತೆ ಆಗ್ರಹ

ಈ ವೇಳೆ ಸಂಗಮ ಸಂಸ್ಥೆ ನಿರ್ದೇಶಕ ಫಾ. ಸಂತೋಷ, ಸಹ ನಿರ್ದೇಶಕಿ ಸಿಸ್ಟರ್ ಸಿಂತಿಯಾ ಡಿ ಮೆಲ್ಲೊ, ಪೊಲೀಸ್ ಹವಾಲ್ದಾರ ವಿ ಪಿ ಜೋಗಿ, ರಾಜೀವ ಕುರಿಮನಿ, ಫಾ. ಜೀವನ, ಸಂಗಮ ಸಮಗ್ರ ಅಭಿವೃದ್ಧಿ ಕೇಂದ್ರದ ಸಿಬ್ಬಂದಿಗಳು, ಯುವ ಸಂಗಮ ಯುವ ಒಕ್ಕೂಟದ ಯುವಕರು, ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು ಸೇರಿದಂತೆ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...