ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

Date:

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಾಗಬೇಕಿದೆ. ಪರಿಸರಕ್ಕೆ ಹಾನಿಯಾಗುವಂತಹ ಚಟುವಟಿಕೆಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪೇಪರ್ ಪುನರುತ್ಪಾದನಾ ಘಟಕದಿಂದ ಇತ್ತೀಚಿಗೆ ಆಯೋಜಿಸಿದ್ದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ಅಡಿಯಲ್ಲಿ ‘ಪೇಪರ್ ಪುನರುತ್ಪಾದನಾ ತಂತ್ರಜ್ಞಾನ’ದ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹುಬ್ಬಳ್ಳಿಯ ಕೀರ್ತಿ ಪೇಪರ್ಸ್ ಪ್ರೈವೇಟ್ ಲಿಮಿಟೆಡ್‌ನ ತಾಂತ್ರಿಕ ಸಿಬ್ಬಂದಿ ನಿಂಗಪ್ಪ ಗೊಂಡಿ ಮಾತನಾಡಿ, “ಇಂದು ಪುನರುತ್ಪಾದನಾ ತಂತ್ರಜ್ಞಾನದಿಂದ ತಯಾರಿಸಲ್ಪಟ್ಟ ವಸ್ತುಗಳಿಗೆ ಉತ್ತಮ ಬೇಡಿಕೆ ಇದೆ. ಈ ವಸ್ತುಗಳನ್ನು ತಯಾರಿಸಲು ಬೃಹತ್ ಯಂತ್ರೋಪಕರಣಗಳ ಅಗತ್ಯವಿಲ್ಲ. ಕಾರ್ಖಾನೆಗಳ ಅಗತ್ಯವೂ ಇಲ್ಲ. ಸಣ್ಣ ಪ್ರಮಾಣದ ಯಂತ್ರಗಳನ್ನು ಅಳವಡಿಸಿ ಈ ವಸ್ತುಗಳನ್ನು ತಯಾರಿಸಲು ಸಾಧ್ಯವಿದೆ. ಸರ್ಕಾರವೂ ಇಂತಹ ಉದ್ಯಮಗಳನ್ನು ಆರಂಭಿಸಲು ಆರ್ಥಿಕ ಬೆಂಬಲ ನೀಡುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವಿಯ ಮಹಿಳಾ ತಂತ್ರಜ್ಞಾನ ಪಾರ್ಕಿನ ವಿಶೇಷ ಅಧಿಕಾರಿ ಪ್ರೊ. ರಾಜು ಬಾಗಲಕೋಟ ಮಾತನಾಡಿ, “ಪೇಪರ್ ಪುನರುತ್ಪಾದನಾ ತಂತ್ರಜ್ಞಾನ ಪರಿಸರಕ್ಕೆ ಪೂರಕವಾದ ತಂತ್ರಜ್ಞಾನ. ಈ ತಂತ್ರಜ್ಞಾನವನ್ನು ಬಳಸಿ ವಿವಿಧ ಬಗೆಯ ವಸ್ತುಗಳನ್ನು ತಯಾರಿಸಲು ಸಾಧ್ಯವಿದೆ. ಈ ವಸ್ತುಗಳು ಪ್ಲಾಸ್ಟಿಕ್‌ಗೆ ಪರ್ಯಾಯವಾದ ವಸ್ತುಗಳು ಮತ್ತು ಪರಿಸರಕ್ಕೂ ಯಾವುದೇ ರೀತಿಯ ಹಾನಿ ಉಂಟುಮಾಡುವುದಿಲ್ಲ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೇಪರ್ ಪುನರುತ್ಪಾದನಾ ಘಟಕದ ಸಿಬ್ಬಂದಿ ಗೀತಾ ಗಂಗಾಧರ ದಲಾಲ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಕಡತ ನಿರ್ಮಾಣ ಪ್ರಕ್ರಿಯೆಯನ್ನು ತೋರಿಸಿ ತರಬೇತಿ ನೀಡಿದರು. ಪೇಪರ್ ಪುನರುತ್ಪಾದನಾ ಘಟಕದ ಸಂಯೋಜಕ ಡಾ. ಅಕ್ಷಯ ಯಾರ್ದಿ ಸ್ವಾಗತಿಸಿದರು. ಕಾರ್ಯಾಗಾರದಲ್ಲಿ ಒಟ್ಟು ನೂರು ಮಂದಿ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...