ವಿಜಯಪುರ | ಕಾನೂನು ಅಡಿಯಲ್ಲಿ ಸಮಾನತೆ ನ್ಯಾಯ ಪಡೆಯಬೇಕು: ಫಾದರ್ ಸುಮನ್ ಬಾಲು‌

Date:

ಕಾನೂನು ಎಲ್ಲರಿಗೂ ಸಮಾನವಾಗಿದೆ. ಅದು ಮಹಿಳೆಯರೇ ಇರಲಿ, ಪುರುಷರೇ ಇರಲಿ ನಾವು ಯಾವುದೇ ಹಕ್ಕು ಸೌಲಭ್ಯ ಪಡೆಯಬೇಕಾದರೆ ಕಾನೂನು ಅಡಿಯಲ್ಲಿ ಸಮಾನತೆ ನ್ಯಾಯ ಪಡೆಯಬೇಕು ಎಂದು ಫಾದರ್ ಸುಮನ್ ಬಾಲು‌ ಹೇಳಿದರು.

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಹಾಗೂ ಸಂತ ಜೋಸೆಫ್ ಆರೋಗ್ಯ ಮತ್ತು ಸಮುದಾಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಎಚ್‌ಐವಿ ಭಾದಿತರ ಬೆಂಬಲ ಸಭೆಯಲ್ಲಿ ಸಂವಿಧಾನ ಪ್ರಸ್ತಾವನೆ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮುಖ್ಯವಾಗಿ ಎಲ್ಲ ರಂಗಗಳಲ್ಲೂ ನಮಗೆ ಸಮಾನವಾದ ಅವಕಾಶಗಳು ಬೇಕೇ ಹೊರತು ಅನುಕಂಪವಲ್ಲ. ಅದಕ್ಕೆ ನಾವು ಸಮಾನ ನ್ಯಾಯ ಕಾನೂನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಕೆಲವು ಸಮಯಗಳಲ್ಲಿ ಆಸ್ತಿ ವಿಚಾರ ಬಂದಾಗ ನೀವು ಎಚ್‌ಐವಿ ಭಾದಿತರು, ನಿಮಗೆ ಆಸ್ತಿ ಯಾಕೆ ಕೋಡಬೇಕೆಂದು ಮನೆಯಿಂದ ಹೊರಗೆ ಹಾಕಿರುವ ಉದಾಹರಣೆಗಳು ನಮ್ಮ ಮುಂದಿವೆ. ಅದಕ್ಕೆ ನಾವು ಹೇಗೆ ಇರಲಿ ನಮಗೂ ಎಲ್ಲರ ಹಾಗೆ ಸಮಾನವಾದ ನ್ಯಾಯ ಮತ್ತು ಹಕ್ಕುಗಳಿವೆ. ಅದು ನಮ್ಮ ಕಾನೂನಿನಲ್ಲಿದೆ. ಇಂತಹ ಸಮಯದಲ್ಲಿ ಕೆಲವು ಬಾರಿ ನಾವು ನ್ಯಾಯಾಲಯಕ್ಕೆ ಹೋಗುವ ಅನಿವಾರ್ಯತೆಯೂ ಬರಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನುಗಳಿಗೆ ಸಂಬಂಧಿಸಿದಂತೆ ಸಲಹೆ, ಮಾರ್ಗದರ್ಶನ, ಸಹಾಯ, ಸಹಕಾರ ಬೇಕಾದಾಗ ವೈಯಕ್ತಿಕವಾಗಿ ಭೇಟಿಯಾಗಿ ಸಹಾಯ ಪಡೆಯಬಹುದು ಹಾಗೂ ಎಲ್ಲ ವಿಚಾರಗಳನ್ನು ಗೌಪ್ಯವಾಗಿ ಇಡಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ‘ಟೋಲ್’ ಶನಿಯಿಂದ ಮುಕ್ತಿ ನೀಡಲು ಒಂದಾದ ಸಾಸ್ತಾನದ ನಾಗರಿಕರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಸ್ಟರ್ ಅಮಲಾ ರಾಣಿ ಮಾತನಾಡಿ, “ಸಮಾಜದಲ್ಲಿ ನಾವು ಎಲ್ಲರ ಹಾಗೆ ಸಮಾನರಾಗಿ ಗೌರವದಿಂದ ಬದುಕುವ ಹಕ್ಕು ಕಾನೂನಿನಲ್ಲಿದೆ. ನಮಗೂ ಸಮಾನವಾದ ನ್ಯಾಯ ಪಡೆಯುವ ಹಕ್ಕಿದೆ. ಅದಕ್ಕೆ ನಾವು ಎಚ್‌ಐವಿ ಬಾಧಿತರು ನಮ್ಮನ್ನು ಎಲ್ಲರೂ ತಾರತಮ್ಯದಿಂದ ನೋಡುತ್ತಾರೆಂಬ ಭಾವನೆಯನ್ನು ನಮ್ಮ ತಲೆಯಿಂದ ತೆಗೆಯಬೇಕು. ನಮ್ಮಲ್ಲಿರುವ ಹಿಂಜರಿಕೆ ಭಯ ತೊರೆದು ಸಮಾಜದಲ್ಲಿ ಘನತೆ ಗೌರವದ ಬದುಕು ಬದಕಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 60ಕ್ಕಿಂತ ಹೆಚ್ಚು ಮಂದಿ ಎಚ್‌ಐವಿ ಬಾಧಿತರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...