ವಿಜಯಪುರ | ಆದ್ಯತೆ ಮೇರೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿ: ಹಿರಿಯ ಪತ್ರಕರ್ತ ಅನಿಲ ಹೊಸಮನಿ

Date:

ವಿಜಯಪುರ ಜಿಲ್ಲೆಯು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿದ್ದು, ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಶ್ರಮಪಟ್ಟು ಅಭ್ಯಾಸ ಮಾಡಬೇಕೆಂದರೆ, ಅವರಿಗೆ ವೈದ್ಯಕೀಯ ಶಿಕ್ಷಣ ಪಡೆಯಲು, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ಇದೆ. ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಕೊಟ್ಟು ಶಿಕ್ಷಣ ಪಡೆಯುವುದಂತೂ ಬಡ ವಿದ್ಯಾರ್ಥಿಗಳು, ರೈತ, ಕೂಲಿ-ಕಾರ್ಮಿಕರ ಮಕ್ಕಳಿಗೆ ಸಾಧ್ಯವಾಗುವುದಿಲ್ಲ. ಈ ಕಾರಣ ಸರ್ಕಾರವು ವಿಶೇಷ ಮುತುವರ್ಜಿವಹಿಸಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನೂ ಸ್ಥಾಪನೆ ಮಾಡಬೇಕೆಂದು ಹಿರಿಯ ಪತ್ರಕರ್ತ ಅನಿಲ ಹೊಸಮನಿ ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯನ್ನು ಕೈ ಬಿಟ್ಟು, ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಎ ಐ ಡಿ ಎಸ್ ಒ ನಗರದ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.

ಅಲ್ ಅಮೀನ್ ಮೆಡಿಕಲ್ ಕಾಲೇಜಿನ ಅಧೀಕ್ಷಕ ಡಾ. ಜಿಲಾನಿ ಅವಟಿ ಮಾತನಾಡಿ, “ಖಾಸಗಿ ಆಸ್ಪತ್ರೆಯಲ್ಲಿ ಕೆಲವು ಸಣ್ಣ ಚಿಕಿತ್ಸೆಗೂ 30 ರಿಂದ 40 ಸಾವಿರ ಖರ್ಚಾಗುತ್ತದೆ. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲವು ಉಚಿತವಾಗಿ ಸಿಗುತ್ತದೆ. ಬಡವರಿಗೆ ಆರೋಗ್ಯ ಸೌಲಭ್ಯ ಖಾತ್ರಿಯಾಗುವುದರ ಜೊತೆಗೆ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗಬೇಕಾದರೆ, ಸರ್ಕಾರವು ವೈದ್ಯಕೀಯ ಕಾಲೇಜಿನ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಪಿಪಿಪಿ ಮಾದರಿಯನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ರಸ್ತೆ ಅಗಲೀಕರಣ ವಿರೋಧಿಸಿ ಪ್ರತಿಭಟನೆ; ಆಪ್‌ ಬೆಂಬಲ

ಎಐಡಿಎಸ್‌ಒ ರಾಜ್ಯ ಸೆಕ್ರೆಟರಿಯೆಟ್ ಸದಸ್ಯ ಕಂಬಳಿ ಮಂಜುನಾಥ ಮಾತನಾಡಿ,”ಕಳೆದ 20 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ, ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹೋರಾಟವನ್ನು ಬಳಸಲಾಗುತ್ತಿದೆ. ರಾಜ್ಯದ 7 ಕೋಟಿ ಜನ ಸಂಖ್ಯೆಗೆ, ಕೇವಲ 1,14,000 ಡಾಕ್ಟರ್ ಗಳ ಲಭ್ಯತೆ ಇರುವುದು ರಾಜ್ಯದ ಆರೋಗ್ಯ ಕ್ಷೇತ್ರದ ಶೋಚನೀಯ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ. ಇಂತಹ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣವನ್ನು ಖಾಸಗಿ ಸಹಭಾಗಿತ್ವದೊಂದಿಗೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆಯು ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಿ, ಬಡ-ಪ್ರತಿಭಾವಂತ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ವಂಚಿತರನ್ನಾಗಿಸುತ್ತದೆ. ಈ ಹಿನ್ನೆಯಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನು ತೆರೆಯದೇ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು, ಈ ಮೂಲಕ ಬಡ-ಪ್ರತಿಭಾವಂತರ ಪರವಾಗಿ ಕಾರ್ಯಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದರು.

ರೈತ ಮುಖಂಡರಾದ ಅರವಿಂದ ಕುಲಕರ್ಣಿ, ಭರತ ಕುಮಾರ ಹೆಚ್ ಟಿ ಮಾತನಾಡಿದರು.

ಈ ವೇಳೆ ಎಐಡಿಎಸ್ಒ ಸಂಘಟನಾಕಾರರಾದ ಗೋವಿಂದ ಯಳವಾರ, ಕಾವೇರಿ ರಜಪೂತ್, ಹಾಗೂ ವಿವಿಧ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...