ವಿಜಯಪುರ | ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಕಾಪಾಡಿ, ಪರಿಸರ ಸಂರಕ್ಷಿಸಿ: ಸಂಸದ ರಮೇಶ ಜಿಗಜಿಣಗಿ

Date:

ಜನಸಂಖ್ಯೆ ಹೆಚ್ಚಳದಿಂದಾಗಿ, ಅಭಿವೃದ್ಧಿ ಕಾರ್ಯಗಳ ನೆಪದಲ್ಲಿ ಅನೇಕ ಗಿಡ ಮರಗಳು ನಾಶವಾಗುತ್ತಿದ್ದು, ಇದನ್ನು ಸರಿದೂಗಿಸಲು ಪ್ರತಿಯೊಬ್ಬರೂ ಒಂದೊಂದು ಗಿಡಮರಗಳನ್ನು ನೆಟ್ಟು ಪಾಲನೆ, ಪೋಷಣೆ ಮಾಡಿ ಪರಿಸರ ಸಂರಕ್ಷಿಸಬೇಕು ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದರು.

ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಪ್ರಕೃತಿ ಕಾಲೋನಿಯಲ್ಲಿ ಜರುಗಿದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಪರಿಸರ ನಾಶದಿಂದಾಗಿ, ಸರಿಯಾಗಿ ಮಳೆಯಾಗುತ್ತಿಲ್ಲ, ಬೆಳೆಗಳು ಬರುತ್ತಿಲ್ಲ, ಬಂದರೂ ಸರಿಯಾಗಿ ಇಳುವರಿ ಕೊಡುತ್ತಿಲ್ಲ. ಹವಾಮಾನ ವೈಪರೀತ್ಯದಿಂದಾಗಿ, ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಹೀಗೆ ಮುಂದುವರೆದರೆ, ಮುಂದೊಂದು ದಿನ ಮನುಷ್ಯರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಬೇಕು, ಪ್ರಕೃತಿ ಸಮತೋಲನ ಕಾಪಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಮಾತನಾಡಿ, “ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸಬೇಕು. ಅರಣ್ಯ ಕೃಷಿ ಮಾಡಬೇಕು, ಅರಣ್ಯ ಕೃಷಿ ಮಧ್ಯದಲ್ಲಿ ಅಂತರ ಬೇಸಾಯ ಮಾಡಬೇಕು. ಹಣ್ಣಿನ ಗಿಡ ಮರಗಳನ್ನು ಹೆಚ್ಚೆಚ್ಚು ಬೆಳಸಬೇಕು, ಸಾವಯವ, ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಲೋಟಸ್ ಕಾಲೇಜಿನಿಂದ ವಿಶ್ವ ತಂಬಾಕುರಹಿತ ದಿನ; ಜನ ಜಾಗೃತಿ ಜಾಥಾ

ಚಂದ್ರಶೇಖರ್ ಜಮಖಂಡಿ, ಮಹಾನಗರ ಪಾಲಿಕೆ ಸದಸ್ಯ ಮುಳಗೌಡ ಬಿರಾದಾರ ಮಾತನಾಡಿದರು. ಬಿಕೆ ಶೋಭಾ ಸ್ವಾಗತಿಸಿದರು. ಗಿರೀಶ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಬಿಕೆ ಶೈಲಾ ವಂದಿಸಿದರು.

ಕಾರ್ಯಕ್ರಮದಲ್ಲಿ ಬಿಕೆ ಸರೋಜಾ, ಸುವರ್ಣ, ಜಯಶ್ರೀ ಕನ್ನೂರ, ಶ್ರೀಪತಿರಾವ ಪಾಟೀಲ, ಕೆಎಸ್ ದೊಡ್ಡಮನಿ, ಬಸವರಾಜ, ರವೀಂದ್ರ ಬದ್ನಿಮಠ ಸೇರಿದಂತೆ ಬಡಾವಣೆಯ ನಾಗರಿಕರು, ವಿವಿಧ ಕೇಂದ್ರಗಳಿಂದ ಅಗಮಿಸಿದ ಈಶ್ವರಿಯ ವಿದ್ಯಾಲಯದ ಪದಾಧಿಕಾರಿಗಳು, ಆಮಂತ್ರಿತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...