ವಿಜಯಪುರ ಜಿಲ್ಲೆಯಾದ್ಯಂತ ನಕಲಿ ವೈದ್ಯರ ಹಾವಳಿ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ವಿಜಯಪುರ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ದಾಳಿ ನಡಿಸಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಕಲಿ ವೈದ್ಯರಿಗೆ ಕಾರಣ ಕೆಳಿ ನೋಟಿಸ್ ಜಾರಿ ಮಾಡಿದ್ದಾರೆ.
ಜಿಲ್ಲೆಯ ಅರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ 22 ನಕಲಿ ವೈದ್ಯರನ್ನು ಪತ್ತೆ ಮಾಡಿ, ಕ್ಲಿನಿಕ್ ಬಂದ್ ಮಾಡಿ, ಬೀಗ ಹಾಕಿದ್ದಾರೆ.
ತಾಲೂಕಿನ 4, ಬಸವನಬಾಗೇವಾಡಿ ತಾಲೂಕಿನ 9, ಮುದ್ದೇಬಿಹಾಳ ತಾಲೂಕಿನ 3, ಇಂಡಿ ತಾಲೂಕಿನಲ್ಲಿ 4 ಹಾಗೂ ಸಿಂದಗಿ ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 22 ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದೆ.
ಇದನ್ನೂ ಓದಿ: ವಿಜಯಪುರ | ನಾವು ಬೇಡ ಅಂದ್ರೂ ಸರ್ಕಾರ ಉಳಿಯುತ್ತೆ: ಸಚಿವ ಶಿವನಾಂದ ಪಾಟೀಲ
ಜಿಲ್ಲೆಯಲ್ಲಿ ನಕಲಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ತಾಲೂಕು ಅರೋಗ್ಯಾಧಿಕಾರಿಗಳಿಗೆ ದೂರು ಸಲ್ಲಿಸಬಹುದಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹತ್ತಿರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ/ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ತ ಗುಣಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





