ವಿಜಯಪುರ | ಬೆಳೆವಿಮೆ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

Date:

ವಿಮೆಯಲ್ಲಿ ಆಗಿರುವ ಮೋಸವನ್ನು ಸರಿಪಡಿಸಿ, 2023-24ರಲ್ಲಿ ವಿಜಯಪುರ ಜಿಲ್ಲೆಯ ನಷ್ಟಗೊಂಡ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ ನೀಡಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಫಸಲ್ ಭೀಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ಆಗಿರುವದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಜಯಪುರ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಡಳಿತವರೆಗೆ ಜಾಥಾ ನಡೆಸಿ, ಸಂಖ್ಯಾ ಸಂಗ್ರಹಣಾಧಿಕಾರಿ‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು, ಬಳಿಕ ಮನವಿ ಸಲ್ಲಿಸಿ ಮಾತನಾಡಿದರು.

“ಕಳೆದ 3 ತಿಂಗಳಿಂದ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಿ ಸರ್ಕಾರಕ್ಕೂ ಮನವಿ ಮಾಡಿದ್ದಾಗ್ಯೂ ಈವರೆಗೆ ಮಾಹಿತಿ ನೀಡಿಲ್ಲ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಂಟಿ ಇಲಾಖೆಗಳಿಂದ ಕೈಗೊಂಡ ಬೆಳೆಸಮೀಕ್ಷೆ ಹಾಗೂ ಬೆಳೆ ಕಟಾವೂ ಮಾಡಿರುವ ವರದಿ, ಫೋಟೊ ಹಾಗೂ ವಿಡಿಯೋ ನೀಡಬೇಕು. ಫಸಲ್ ಭೀಮಾ ಯೋಜನೆ ಎನ್ನುವುದು ಅವೈಜ್ಞಾನಿಕ ಹಾಗೂ ಅಪಾರದರ್ಶಕವಾಗಿದೆ. ಇವುಗಳ ಸಂಪೂರ್ಣ ಮಾಹಿತಿ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಬರಗಾಲದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಹಾಗೂ ಕೇಂದ್ರ ಪ್ರಕೃತಿ ವಿಕೋಪ ಪರಿಹಾರದಡಿ ₹413 ಕೋಟಿ ನೀಡಿದ್ದರು. ರೈತರಿಗೆ ಅಲ್ಪ ಸ್ವಲ್ಪವಾದರೂ ಅನುಕೂಲವಾಗಲಿ ಎನ್ನುವ ದೃಷ್ಟಿಕೋನದಿಂದ 2023-24ನೇ ಸಾಲಿನಲ್ಲಿ ಸಾಲಸೋಲ ಮಾಡಿ ಯೋಜನೆಯಡಿ ವಿಮಾಹಣ ತುಂಬಿದ್ದರು. ಆದರೆ ವಿಮಾ ಕಂಪೆನಿಯವರು ಸ್ಥಳೀಯ ಅಧಿಕಾರಿಗಳೊಡನೆ ಜಿಲ್ಲೆಯ ಹಲವಾರು ಕಡೆಗಳಲ್ಲಿ ಬೆಳೆ ಚೆನ್ನಾಗಿ ಬಂದಿದೆಯೆಂದು ತಪ್ಪು ವರದಿ ಸಲ್ಲಿಸಿ ಅನೇಕರಿಗೆ ವಿಮೆ ಬಾರದ ಹಾಗೆ ಮಾಡಿದ್ದಾರೆ” ಎಂದು ಆರೋಪಿಸಿದರು

“ಬೆಳೆವಿಮೆ ಪರಿಹಾರ ಬಾರದಿರುವುದಕ್ಕೆ ಕೃಷಿ ಸಚಿವ, ಕೃಷಿ ಆಯುಕ್ತ, ಜಿಲ್ಲಾಧಿಕಾರಿ, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕಾ ಸಹಾಯಕ ನಿರ್ದೇಶಕರು, ಕಂದಾಯ ಇಲಾಖೆ, ಪಂಚಾಯತ್ ರಾಜ್ಯ ಇಲಾಖೆ ಹಾಗೂ ವಿಮೆ ಅಧಿಕಾರಿಗಳು‌ ಉತ್ತರ ನೀಡದೆ, ʼನಮ್ಮ ಹತ್ತಿರ ಮಾಹಿತಿ ಇಲ್ಲ, ಅವರಿಗೆ ಕೇಳಿ, ಇವರಿಗೆ ಕೇಳಿʼರೆಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ” ಎಂದು ಸಂಗಮೇಶ್‌ ಸಗರ ಅಸಮಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಿಸಾನ್ ಕಾಂಗ್ರೆಸ್‌ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ

ಫಸಲ್ ಭೀಮಾ ಯೋಜನೆಯಡಿ ₹131 ಕೋಟಿ ವಿಮೆ ಪರಿಹಾರ ಕೊಟ್ಟು ಕೈತೊಳೆದುಕೊಂಡಿದ್ದಾರೆ. ಬರಗಾಲದಿಂದ ತತ್ತರಿಸಿರುವ ಜಿಲ್ಲೆಗೆ ಸುಮಾರು ₹1,000 ಕೋಟಿ ಪರಿಹಾರ ಬರಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಶಾಮಿಲಾಗಿರುವುದರಿಂದ ಪರಿಹಾರ ಬಾರದೆ ಪರಿತಪ್ಪಿಸುವಂತಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರು, ಹೋರಾಟಗಾರರು ಸೇರಿದಂತೆ ಹಲವು ಗ್ರಾಮದ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...