ವಿಜಯಪುರ | ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗಿದೆ. ಮಾರುಕಟ್ಟೆಗೆ ಜೋಳ ಬಂದು ಎರಡು ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರ ಆರಂಭ ಮಾಡಿಲ್ಲ. ಇದು ಖಂಡನೀಯ. ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಯಾವುದೇ ಶರತ್ತುಗಳಿಲ್ಲದೆ ರೈತರು ಬೆಳೆದಿರುವ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು ಹಾಗೂ ಇಲ್ಲಿರುವ ಗೊಂದಲಗಳನ್ನು ನಿವಾರಿಸಬೇಕು. ಧಾರವಾಡಕ್ಕೆ ಸ್ಯಾಂಪಲ್ ಕಳಿಸಲು ಸಾಧ್ಯವಾಗುವುದಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಹಾಗೂ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದರು.

ರೈತರ ಖಾತೆಗೆ ಕೆಜಿ ಕೇವಲ ಎರಡು ಸಾವಿರ ಎಂದು ನಿಗದಿ ಮಾಡಿದರೆ, ಉಳಿದ ಮೆಕ್ಕೆಜೋಳ ಏನು ಮಾಡಬೇಕು? ಸರ್ಕಾರ ಕೇವಲ ನೆಪ ಮಾತ್ರಕ್ಕೆ ರೈತಪರ ಮುಖವಾಡ ಹಾಕಿದರೆ ಏನು ಪ್ರಯೋಜನವಾಗುವುದಿಲ್ಲ. ಎಲ್ಲಾ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು. ಕೇವಲ ಗೊಂದಲ ಸೃಷ್ಟಿಸಿದರೆ ಹೇಗೆ ಎಂಬುದು ತಿಳಿಯದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ನಾವು ಬೇಡ ಅಂದ್ರೂ ಸರ್ಕಾರ ಉಳಿಯುತ್ತೆ: ಸಚಿವ ಶಿವನಾಂದ ಪಾಟೀಲ

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ, “ಈಗಾಗಲೇ ಸರ್ಕಾರಕ್ಕೆ ಮೂರು ಬಾರಿ ಹಾಗೂ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ವರದಿ ಕಳುಹಿಸಿ ಶೀಘ್ರವಾಗಿ ಖರೀದಿ ಕೇಂದ್ರ ಆರಂಭಿಸುವಂತೆ ನಾವು ಕೂಡ ತಿಳಿಸಿದ್ದೇವೆ. ಕೆಎಂಎಫ್, ಡಿಸ್ಟಲರಿ ಹಾಗೂ ಪಲ್ಟ್ರಿ ಫುಡ್ ಸೇರಿದಂತೆ ಸಾಧ್ಯವಿರುವ ಎಲ್ಲಾ ಕಡೆಗೂ ಖರೀದಿ ಕೇಂದ್ರ ಆರಂಭಿಸಲು ಪ್ರಯತ್ನ ಮಾಡಲಾಗುತ್ತಿದೆ. ಮೆಕ್ಕೆಜೋಳ ಬೆಳಗಾರರ ಸಮಸ್ಯೆ ಕುರಿತು ಅರಿತು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಹುಲ ಕೋಪಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷ ಸಂಗಮೇಶ ಸಾಗರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...