ವಿಜಯಪುರ | ತೊಗರಿ ಬೆಳೆಹಾನಿ ಪರಿಹಾರಕ್ಕೆ ರೈತರ ಆಗ್ರಹ

Date:

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆಹಾನಿಯಾಗಿದ್ದು, ಸಂತ್ರಸ್ತ ರೈತರಿಗೆ ಮಧ್ಯಂತರ ಪರಿಹಾರದ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳ ಬಳಿಯಿರುವ ಕಡತಗಳಿಗೆ ಸಹಿ ಹಾಕಿ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜುಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ಮುಂಗಾರು ಹಂಗಾಮಿನ ಹವಾಮಾನ ವೈಪರೀತ್ಯ ಹಾಗೂ ಜಿಆರ್‌ಜಿ-152 ಹಾಗೂ ಜಿಆರ್‌ಜಿ-811 ಸ್ಥಳೀಯ ಕಳಪೆ ಬಿತ್ತನೆ ಬೀಜದಿಂದಾಗಿ ಶೇ.90ರಷ್ಟು ತೊಗರಿ ಬೆಳೆ ಹಾಳಾಗಿದೆ. ಈ ಬೆಳೆಹಾನಿಗೆ ಈವರೆಗೂ ಮಧ್ಯಂತರ ಪರಿಹಾರ ಹಣ ಬಿಡುಗಡೆಯಾಗಿಲ್ಲ. ಈ ಕುರಿತು ಹಲವು ಬಾರಿ ಹೋರಾಟ ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

“ಪರಿಹಾರದ ಹಣ ಬಿಡುಗಡೆಗೊಳಿಸಲು ಕಡತಗಳನ್ನು ಮುಖ್ಯಮಂತ್ರಿಗಳಿಗೆ ರವಾನಿಸಲಾಗಿದೆಯೆಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೆ ಸಹಿ ಹಾಕಿ ಅನುಮೋದನೆ ಮಾಡಬೇಕು. ಜತೆಗೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ವಿಮಾ ತುಂಬಿದ ಜಿಲ್ಲೆಯ ರೈತರಿಗೆ ₹85 ಕೋಟಿ ಬಿಡುಗಡೆ ಮಾಡಲಾಗುವುದೆಂದು ಹೇಳಿ ಅದರಲ್ಲಿ ಕೇವಲ ₹14 ಕೋಟಿ ಮಾತ್ರ ಬಂದಿದೆ. ಬಾಕಿ ₹71 ಕೋಟಿ ಪರಿಹಾರ ಹಣ ಬಿಡುಗಡೆಯಾಗಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೂವಿನಹಿಪ್ಪರಗಿ ಹೋಬಳಿ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು, ಸಂಕನಾಳ ಶಾಖಾ ಕಾಲುವೆಯಿಂದ ಅಂದಾಜು 2 ಕಿಮೀವರೆಗೆ ವಿತರಣೆ ಕಾಲುವೆ ನಿರ್ಮಿಸಿ, ಕಾಲುವೆಗೆ ಮೂಲಕ ಸುತ್ತಮುತ್ತಲಿನ ಹಳ್ಳಿಗಳಾದ ಕನ್ನಳ, ಅಗಸಬಾಳ, ಸಂಕನಾಳ, ಶೂಲವಾಡಗಿ, ಕಣಕಾಲ ಸೇರಿದಂತೆ ಒಟ್ಟು ಎಂಟು ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದೆ ಹಲವು ಮಂದಿ ಸಾವು: ಎನ್ ಎಸ್ ಬೋಸರಾಜ್

ಬಸವನಬಾಗೇವಾಡಿ ತಾಲೂಕು ಅಧ್ಯಕ್ಷ ಉಮೇಶ್ ವಾಲಿಕಾರ, ಬಾಲಪ್ಪ ಗೌಡ ಲಿಂಗದಹಳ್ಳಿ, ಮಾರುತಿ ವಾಲಿಕಾರ, ಮಾರುತಿ ಹೂಗಾರ, ಪರಶುರಾಮ ಮುತ್ತಣ್ಣ, ಶಿವಪ್ಪ ವಾಲಿಕಾರ, ಹನುಮಂತ ಕಲಬುರ್ಗಿ, ಶಿವಶರಣ ನಾಗಶೆಟ್ಟಿ, ಬಸವರಾಜ ನಾಗರೆಡ್ಡಿ, ಸೋಮೇಶ ನಾಗರೆಡ್ಡಿ, ಬಸವರಾಜ ನಾಟಿಕಾರ, ಆನಂದ ನಾಗರೆಡ್ಡಿ, ಸಿದ್ಲಿಂಗಪ್ಪ ನಾಗರೆಡ್ಡಿ, ಮಡಿವಾಳಪ್ಪ ನಾಗರೆಡ್ಡಿ, ಸಾಹೇಬಗೌಡ ಹೊಸೂರು, ಯಮನಪ್ಪ ಸರೊರ, ಹೊನ್ನಪ್ಪ ನಾಟಿಕಾರ, ಗುರುಲಿಂಗಯ್ಯ ಹಳ್ಳಿಮಠ, ಜೀವಯ್ಯ ತೆಗ್ಗಿನ ಮಠ, ಹನುಮಂತ ಹಡಪದ, ಮಲ್ಲು ಬಜಂತ್ರಿ, ಸಂಗಮೇಶ ಮೇಟಿ  ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...