ವಿಜಯಪುರ | ಪೋಷಣ್ ಟ್ರ್ಯಾಕರ್‌ನ ತಾಂತ್ರಿಕ ದೋಷ ಸರಿಪಡಿಸಿ: ಅಂಗನವಾಡಿ ನೌಕರರ ಸಂಘ ಮನವಿ

Date:

ಪೋಷಣ್‌ ಟ್ರ್ಯಾಕರ್‌ ತಂತ್ರಾಂಶದಲ್ಲಿ ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ನಿಗದಿತ ಸಮಯಕ್ಕೆ ಕೆಲಸ ಮುಗಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೂಡಲೇ ತಂತ್ರಾಂಶದ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಸರಾಗವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಅಂಗನವಾಡಿ ನೌಕರರ ಸಂಘವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಜಯಪುರ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿತು.

“ಅಂಗನವಾಡಿಗಳಲ್ಲಿ ಮಾಡುವ ಪ್ರತಿ ಕೆಲಸವನ್ನು ಫೋನ್‌ನಲ್ಲಿ ಅಪ್‌ಡೇಟ್‌ ಮಾಡಬೇಕು.‌ ಗರ್ಭಿಣಿ, ಬಾಣಂತಿಯರು, ಮಕ್ಕಳು, ಕಿಶೋರಿಯರು ಸೇರಿದಂತೆ ಫಲಾನುಭವಿಗಳ ಮಾಹಿತಿಯನ್ನು ಪೋಷಣ್ ಟ್ರ್ಯಾಕರ್‌ ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಈ ವೇಳೆ ಒಂದು ಫೋಟೋ ಅಳವಡಿಸಲು ಸುಮಾರು 30 ನಿಮಿಷ ಸಮಯ ಹಿಡಿಯುತ್ತಿದೆ. ಅದರ ಜತೆಗೆ ಸರ್ವರ್‌ ಸಮಸ್ಯೆಯೂ ಹೆಚ್ಚಾಗಿದೆ.

ಬಹುತೇಕರು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವುದರಿಂದ ನೆಟ್‌ವರ್ಕ್‌ ಸಹ ಸರಿಯಾಗಿ ಸಿಗದೆ ಒಂದು ಸಣ್ಣ ಕೆಲಸವನ್ನು ಮಾಡಲು ಇಡೀ ದಿನ ತೆಗೆದುಕೊಳ್ಳುವ ಪರಿಸ್ಥಿತಿ ಇದೆ. ಈ ರೀತಿಯ ಸಮಸ್ಯೆ ನೋಡಿ ಫಲಾನುಭವಿಗಳೂ ಕೂಡ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಆದರೂ ಇಲಾಖೆಯಿಂದ ಒತ್ತಡ ಮಾತ್ರ ತಪ್ಪಿಲ್ಲ. ಈ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲಸದ ಬಗ್ಗೆ ತಿಳಿಸಿಕೊಡುವ ತರಬೇತಿ ಕೂಡ ಇಲಾಖೆ ಮಾಡಿರುವುದಿಲ್ಲ. ಸಮಸ್ಯೆ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದರೆ, ಸಮರ್ಪಕ ಉತ್ತರ ನೀಡದೇ ಯೂಟ್ಯೂಬ್ ಮೂಲಕ ಕಲಿಯರಿ ಎಂದು ಹಾರಿಕೆಯ ಉತ್ತರ ನಿಡುತ್ತಾರೆ. ಅದರ ಸಲುವಾಗಿ ಒಬ್ಬೊಬ್ಬ ಫಲಾನುಭವಿಯ ಮನೆ ಮುಂದೆಯೂ ಕನಿಷ್ಟ ಅರ್ಧ ತಾಸು ನಿಲ್ಲಬೇಕಾಗುತ್ತದೆ. ಹಿಗಾದರೆ ಶಾಲಾ ಪೂರ್ವ ಶಿಕ್ಷಣ ಕುಂಠಿತವಾಗತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಇಂಗಳೇಶ್ವರ ಮಠದ ಚನ್ನಬಸವ ಶ್ರೀಗೆ ಗೌರವ ಸಮರ್ಪಣೆ

ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ವಿಜಯಪುರ ಜಿಲ್ಲಾ ಸಮಿತಿ ಮುಖಂಡ ಮಲ್ಲಿಕಾರ್ಜುನ ಹೆಚ್ ಟಿ .ನೇತ್ರತ್ವದಲ್ಲಿ ನಿಂಗಮ್ಮ ಮಠ, ಲಕ್ಷ್ಮೀ ಲಕ್ಷಟ್ಟಿ, ಗಾಯತ್ರಿ ಜಡಿಮಠ, ತಾಲೂಕಿನ ಮುಖಂಡರಾದ ಸವಿತಾ ತೇರದಾಳ, ಚಡಚಣ ತಾಲೂಕಿನಿಂದ ಸತ್ಯಮ ಹಡಪದ ಹಾಗೂ ಗಂಗಾ ಉಪಸ್ಥಿತಿರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...