ವಿಜಯಪುರ | ಸೇವಾಲಾಲರ ಸಂದೇಶ ಅನುಸರಿಸಿ ಸಮಾಜದ ಅಭಿವೃದ್ಧಿಗೆ ಕೈಜೋಡಿಸಿ: ಮಲ್ಕಪ್ಪ ಹಲಗಿ

Date:

ಸಂತ ಸೇವಾಲಾಲರ ಸಂದೇಶಗಳಾದ ಪ್ರಕೃತಿಗೆ ಗೌರವ, ಸಮುದಾಯ ಸೇವೆ, ಸತ್ಯ ಮತ್ತು ಪ್ರಾಮಾಣಿಕತೆ, ಸರಳತೆ ಮತ್ತು ನಮ್ರತೆಯನ್ನು ಯುವಕರು ಜೀವನದಲ್ಲಿ ಅನುಸರಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮಲ್ಕಪ್ಪ ಹಲಗಿ ಹೇಳಿದರು.

ಶ್ರೀ ಸಂತ ಸೇವಾಲಾಲ ಜಯಂತಿಯ ಪ್ರಯುಕ್ತ ಶ್ರೀ ಜಗದಾಂಬ ಯುವಕ ಸಂಘದ ವತಿಯಿಂದ ವಿಜಯಪುರದ ಸಿಂದಗಿ ತಾಲೂಕಿನ ಕಕ್ಕಳಮೇಲ ಎಲ್.ಟಿ ತಾಂಡದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಹಾಗೂ ಸಾಮಾಜಿಕ ವಿಶ್ಲೇಷಣೆ ತರಬೇತಿಯಲ್ಲಿ ಅವರು ಮಾತನಾಡಿ, “ಸೇವಾಲಾಲರು ಸಮಾಜದಲ್ಲಿ ಮಹಿಳೆಯರ ಸ್ಥಾನಮಾನದ ಕುರಿತು ಒತ್ತಿ ಹೇಳಿದ್ದರು. ಮಹಿಳೆಯರಿಗೆ ಗೌರವ ನೀಡುವುದು, ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಬೇಕು, ಮಹಿಳೆಯರನ್ನು ಗೌರವದಿಂದ ಕಾಣಬೇಕು ಮತ್ತು ಪರಿಸರ ರಕ್ಷಣೆ ಮಾಡಿ ಗಿಡ ಮರಗಳನ್ನು ಬೆಳೆಸಬೇಕು. ಪ್ರತಿಯೊಂದು ಸಮುದಾಯದ ಸಾಮಾಜಿಕ ಗೌರವನ್ನು ಎತ್ತಿ ಹಿಡಿಯಬೇಕು” ಎಂದರು.

ಸಾಮಾಜಿಕ ಕಾರ್ಯಕರ್ತ ಮಹೇಶ ಚವ್ಹಾಣ ಮಾತನಾಡಿ, “ಯುವಕರು ಗ್ರಾಮದ ಅಭಿವೃದ್ಧಿಯಲ್ಲಿ ಸಂಪೂರ್ಣ ಮನಸ್ಸಿಂದ ಭಾಗವಹಿಸಲು ಯುವಕ ಸಂಘವನ್ನು ರಚನೆ ಮಾಡಲಾಗಿದೆ. ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಒಮ್ಮನಸ್ಸಿನಿಂದ ಪಾಲ್ಗೊಳ್ಳುವ ಮೂಲಕ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದಾಂಬ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯ ವಿಜೇತ ತಂಡಕ್ಕೆ ಬಹುಮಾನ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎನ್‌ಎಸ್ಎಸ್‌ ಪಾತ್ರ‌ ಅಪಾರ: ಕುಲಪತಿ ಶಾಂತಾದೇವಿ ಟಿ

ಕಾರ್ಯಕ್ರಮದಲ್ಲಿ ಯುವಕ ಸಂಘದ ಅಧ್ಯಕ್ಷ ರಾಮು ಚವ್ಹಾಣ, ತಾಂಡಾ ಮುಖಂಡ ದಿಲೀಪ್‌ ರಾಥೋಡ್‌, ಟೋಪು ಚವ್ಹಾಣ, ಅಪ್ಪು ನಾಯಕ, ಮುತಿಲಾಲ ಪವಾರ, ರವಿ ಚವ್ಹಾಣ, ಸುನಿಲ ರಾಥೋಡ್, ಸಂದೀಪ ರಾಥೋಡ್‌ ಸೇರಿದಂತೆ ಸಮುದಾಯದ ಇತರರು ಹಾಗೂ ಸಾರ್ವಜನಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...