ವಿಜಯಪುರ | ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಪುಣ್ಯತಿಥಿ

Date:

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಜವಾಬ್ದಾರಿ ವಹಿಸಿಕೊಂಡ ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರು. ಇಂದು ನಾವೆಲ್ಲರೂ ಬಳಸುತ್ತಿರುವ ಮೊಬೈಲ್ ಫೋನ್‌ ಪರಿಚಯಿಸಿದ್ದಲ್ಲದೆ ಕಂಪ್ಯೂಟರ್‌ಗಳನ್ನು ಬಳಸಲು ಕಾರಣೀಭೂತರಾದರು. ಅದರಂತೆ 18 ವರ್ಷದ ಯುವಕ ಯುವತಿಯರಿಗೆ ಮತದಾನ ಹಕ್ಕನ್ನು ನೀಡಿದರು. ದೇಶಕ್ಕೆ ಅವರ ಕೊಡುಗೆ ಅಪಾರವಾದದ್ದು ಹಾಗೂ ಮಾದರಿಯಾಗಿದೆ” ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಲೋಣಿ ಸ್ಮರಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 33ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ತಮಿಳುನಾಡಿನ ಪೆರಂಬೂರಿನಲ್ಲಿ ಎಲ್‌ಟಿಟಿಇ ಉಗ್ರರ ಕೃತ್ಯಕ್ಕೆ ಬಲಿಯಾದರು. ಅವರ ಆದರ್ಶಗಳು, ದೇಶದ ಜನತೆಯ ಬಗೆಗಿನ ಕಾಳಜಿ ಅವಿಸ್ಮರಣೀಯವಾಗಿದೆ. ಅವರೊಬ್ಬ ದೂರದೃಷ್ಟಿಯುಳ್ಳ ನಾಯಕರಾಗಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಕೆ ಎಫ್ ಅಂಕಲಗಿ, ಡಿ ಎಚ್ ಕಲಾಲ, ಸಾಹೇಬಗೌಡ ಬಿರಾದಾರ ಸೇರಿದಂತೆ ಇತರರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತುರ್ತಾಗಿ ಬರಪರಿಹಾರ ಒದಿಗಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಅಬ್ದುಲ್‌ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ಸುಭಾಷ್ ಕಾಲೇಬಾಗ್, ಮಹಾದೇವಿ ಗೋಕಾಕ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ವಿದ್ಯಾವತಿ ಅಂಕಲಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ತಮ್ಮಣ್ಣ ಮೇಲಿನಕೇರಿ, ಶರಣಪ್ಪ ಯಕ್ಕುಂಡಿ, ಎಂ ಜಿ ಯಂಕಂಚಿ, ದೇಸು ಚವ್ಹಾಣ, ಎಂ ಎಂ ಮುಲ್ಲಾ, ಅಫ್ತಾಬ್ ಖಾದ್ರಿ ಇನಾಮದಾರ, ಅಂಗ ಘಟಕಗಳ ಅಧ್ಯಕ್ಷರುಗಳಾದ ಅಮಿತ ಚವ್ಹಾಣ, ಲಾಲಸಾಬ ಕೊರಬು, ಫಿರೋಜ ಶೇಖ, ಮಹಾದೇವ ಜಾಧವ, ಇಲಿಯಾಸ ಸಿದ್ದಿಕಿ, ಅಬ್ದುಲ್‌ಪೀರಾ ಜಮಖಂಡಿ, ತಾಜುದ್ದೀನ ಖಲೀಫಾ, ಅಬುಬಕರ ಕೆಂಬಾವಿ, ಕಲ್ಲಪ್ಪ ಪರಶೆಟ್ಟಿ, ಮಹ್ಮದ ಮುಲ್ಲಾ, ಕಾಶಿಬಾಯಿ ಹಡಪದ, ಮಹೇಶ ಶಹಾಪೂರ, ಅಂಬಣ್ಣ ಕಲಮನಿ, ಬಾಬುಸಾಬ ಯಾಳವಾರ, ನಾಗರಾಜ ಲಂಬು, ದಿಲೀಪ ಪ್ರಭಾಕರ, ಅಶೋಕ ಕಾಂಬಳೆ ಸೇರಿದಂತೆ ಪಕ್ಷದ ಬಹುತೇಕ ಕಾರ್ಯಕರ್ತರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...