ವಿಜಯಪುರ | 10 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಗ್ಯಾಂಗ್‌ ಕೊನೆಗೂ ಪೊಲೀಸರ ಬಲೆಗೆ: ಬ್ಯಾಂಕ್‌ನ ಮ್ಯಾನೇಜರೇ ಸೂತ್ರಧಾರ!

Date:

ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.

ಮೇ 25ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿತ್ತು. ಸ್ವತಃ ಬ್ಯಾಂಕ್ ಮ್ಯಾನೇಜರ್ ಆಗಿದ್ದವನೇ ಈ ದರೋಡೆಯ ಸೂತ್ರಧಾರ ಎಂಬುದನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಧಾರಾಕಾರ ಮಳೆಯ ಸಮಯದಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಇದರಿಂದ ಬ್ಯಾಂಕ್‌ನ ಗ್ರಾಹಕರು ಕಂಗಾಲಾಗಿದ್ದರು. ಆರೋಪಿಗಳನ್ನು ಪತ್ತೆಹಚ್ಚುವುದೇ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ಪತ್ತೆಗಾಗಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ 8 ತಂಡಗಳನ್ನ ರಚಿಸಿದ್ದರು. ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಿ, ಒಂದೇ ತಿಂಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ 37
ಬಂಧಿತ ಆರೋಪಿಗಳಾದ ಚಂದ್ರಶೇಖರ, ಸುನೀಲ ಮೋಕಾ ಹಾಗೂ ದರೋಡೆಯ ಸೂತ್ರಧಾರಿ ವಿಜಯಕುಮಾರ

ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕ್‌ನ ಹಿಂದಿನ ವ್ಯವಸ್ಥಾಪಕ ಹಾಗೂ ಹಾಲಿ ಕೊಲ್ಹಾರ ತಾಲ್ಲೂಕಿನ ರೋಣಿಹಾಳ ಕೆನರಾ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ, ಹುಬ್ಬಳ್ಳಿಯ ಗದಗ ರಸ್ತೆಯ ಕೋಠಾರಿ ನಗರದ ನಿವಾಸಿ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಕಂಪನಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವರನ್ನು ಬಂಧಿಸಲಾಗಿದೆ. ಜೊತೆಗೆ 10.5 ಲಕ್ಷ ರೂ. ಮೌಲ್ಯದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಪ್ರಕರಣ ಭೇದಿಸಿದ್ದಕ್ಕೆ ಬ್ಯಾಂಕ್‌ನಲ್ಲಿ ಚಿನ್ನಾಭರಣ ಇಟ್ಟಿದ್ದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ಏನಿದು ಪ್ರಕರಣ?

ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು.

WhatsApp Image 2025 06 27 at 11.53.35 AM 1

“ಆರೋಪಿಗಳ ಬಳಿ ಇದ್ದ ₹10.75 ಕೋಟಿ ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನುಳಿದ ಆರೋಪಿಗಳ ಹಾಗೂ ಕಳುವಾದ ವಸ್ತುಗಳ ಪತ್ತೆ ಕಾರ್ಯ ಮುಂದುವರಿದಿದೆ” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

“ಚಿನ್ನಾಭರಣ ಕಳವು ಸಂಬಂಧ ಆರೋಪಿಗಳು ಮೂರು ತಿಂಗಳಿಂದ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು. ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಆರೋಪಿಗಳು ಸೃಷ್ಟಿಸಿದ್ದರು. ಕಳ್ಳರು ತಮ್ಮ ಗುರುತು ಪತ್ತೆ ಆಗದಂತೆ ಬ್ಯಾಂಕ್‌ನಲ್ಲಿರುವ ಸಿ.ಸಿ.ಟಿ.ವಿ ಕ್ಯಾಮರಾಗಳ ವಿಡಿಯೊ ಡಾಟಾ ಸಂಗ್ರಹಣೆ ಮತ್ತು ನಿರ್ವಹಣೆ ಸಾಧನ (ಎನ್.ವಿ.ಆರ್) ತೆಗೆದುಕೊಂಡು ಹೋಗಿದ್ದರು. ಪ್ರಕರಣ ಪತ್ತೆ ಹಚ್ಚಲು ಪೊಲೀಸರ ಎಂಟು ತಂಡಗಳನ್ನು ರಚಿಸಲಾಗಿತ್ತು. ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ವೈಜ್ಞಾನಿಕ ರೀತಿಯಿಂದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದರು.

ಸಿನಿಮಾಗಳಿಂದ ಪ್ರೇರಣೆ

ಪ್ರಪಂಚದ ವಿವಿಧೆಡೆ ಈ ಹಿಂದೆ ನಡೆದಿರುವ ಅತಿ ದೊಡ್ಡ ಬ್ಯಾಂಕ್‌ ದರೋಡೆ ಪ್ರಕರಣಗಳನ್ನು ಆರೋಪಿಗಳು ತಿಳಿದುಕೊಂಡಿದ್ದರು. ಅಲ್ಲದೇ, ಬಾಲಿವುಡ್‌, ಹಾಲಿವುಡ್‌ ಸೇರಿದಂತೆ ಕಳವು ಪ್ರಕರಣಕ್ಕೆ ಸಂಬಂಧಿಸಿದ ಹಲವು ರೋಚಕ ಸಿನಿಮಾಗಳನ್ನು ನೋಡಿ ಪ್ರೇರಿತರಾಗಿ, ಅದೇ ರೀತಿ ಸಂಚು ರೂಪಿಸಿದ್ದರು ಎಂಬುದು ಆರೋಪಿಗಳ ವಿಚಾರಣೆ ವೇಳೆ ತಿಳಿದುಬಂದಿದೆ. ಅಲ್ಲದೇ, ಬ್ಯಾಂಕಿನ ಒಳಗಡೆ ಬರುವ ಹಾಗೂ ಹೊರಹೋಗುವ ಎಲ್ಲ ದಾರಿಗಳನ್ನು ಕೂಡ ಮುಂಚೆಯೇ ನೋಡಿಕೊಂಡಿದ್ದರು.” ಎಂದು ಎಸ್‌.ಪಿ. ತಿಳಿಸಿದರು.

ಸಚಿವ ಎಂ ಬಿ ಪಾಟೀಲ್ ಅಭಿನಂದನೆ

ವಿಜಯಪುರದ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ಸಚಿವ ಎಂ ಬಿ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಎಸ್ ಪಿ ವಿಜಯಪುರ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ನಡೆದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ, ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಡಕಾಯಿತಿ ಪ್ರಕರಣವಾಗಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಆದರೆ, ವಿಜಯಪುರ ಜಿಲ್ಲೆಯ ಪೋಲಿಸ್ ಅಧಿಕಾರಿಗಳು ತಮ್ಮ ಚುರುಕಿನ ಕಾರ್ಯಾಚರಣೆಯಿಂದ ರಾಜ್ಯದ ಜನತೆಯ ನಂಬಿಕೆಗೆ ಧಕ್ಕೆಯುಂಟಾಗದಂತೆ ಮಾಡಿದ್ದಾರೆ. ಪ್ರಕರಣವನ್ನು ತಿಂಗಳ ಅವಧಿಯಲ್ಲಿಯೇ ಬೇಧಿಸಿ. ಸೀನಿಯರ್ ಮ್ಯಾನೇಜರ್ ಸೇರಿದಂತೆ ಮೂರು ಆರೋಪಿಗಳನ್ನು ಬಂಧಿಸಿ, ಸುಮಾರು 10.5 ಕೆಜಿ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣದಲ್ಲಿ ಪ್ರಮುಖ ಮುನ್ನಡೆ ಸಾಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

WhatsApp Image 2025 06 27 at 11.53.35 AM

ಈ ಕಾರ್ಯಾಚರಣೆ ಯಶಸ್ವಿಗೊಳಿಸಲು ಹಗಲು ರಾತ್ರಿ ಎನ್ನದೆ ಶ್ರಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರನ್ನು ವಿಜಯಪುರದ ನಮ್ಮ ನಿವಾಸದಲ್ಲಿ ಅಭಿನಂದನೆ ತಿಳಿಸಿದೆ. ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಇಂಥ ಕಾರ್ಯಾಚರಣೆಗಳು ಮಾದರಿಯಾಗಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...