ವಿಜಯಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಗೌರವದ ಬದುಕು ಕೊಡಿ: ಬಿ ಮಂಜಮ್ಮ ಜೋಗತಿ

Date:

ಜಾನಪದ ಹಳ್ಳಿಗಾಡಿನಲ್ಲಿ ಇನ್ನೂ ಜೀವಂತವಾಗಿದೆ. ಜಾನಪದದಲ್ಲಿ ಸಮಾಜದ ಭಾಗವಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೌರವದ ಬದುಕು ಕಟ್ಟಿಕೊಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ ಮಂಜಮ್ಮ ಜೋಗತಿ ಹೇಳಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಎಂಜಿವಿಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನದ ಸಹಯೋಗದೊಂದಿಗೆ ಶುಕ್ರವಾರ ಏರ್ಪಡಿಸಿದ್ದ ಜಾನಪದ ಪರಂಪರೆ ಮತ್ತು ಪ್ರಯೋಗ-ತಾತ್ವಿಕ ಚಿಂತನೆ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಜನಿಸಿದ ಮಕ್ಕಳಿಗೆ ಇಂದು ಶೈಕ್ಷಣಿಕ, ಸಾಮಾಜಿಕ ಹಕ್ಕುಗಳನ್ನು ಕೊಡುವುದಕ್ಕೆ ಯೋಚಿಸುವ ಸಮಯದಲ್ಲಿ ಎಷ್ಟು ಮಂದಿ ಹೃದಯವಂತರು ಅಸಹಾಯಕರಿಗೆ ಆಸರೆ ಒದಗಿಸುತ್ತಿದ್ದಾರೆ. ಸಮಾಜ ಆಸರೆ ಒದಗಿಸಿದರೆ ಲೈಂಗಿಕ ಅಲ್ಪಸಂಖ್ಯಾತರೂ ಕೂಡ ರೈಲು, ಬಸ್, ರೈಲ್ವೆ ಸ್ಟೇಷನ್, ಹೈವೇಗಳಲ್ಲಿ ನಿಂತು ಜನರಿಗೆ ಭಾರವಾಗುವ ಕೆಲಸ ಮಾಡಲಾರರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ಆರ್‌ಪಿಡಿ ಕಾಲೇಜಿನ ಕನ್ನಡ ವಿಭಾಗದ ಎಚ್ ಬಿ ಕೋಲ್ಕಾರ್ ಮಾತನಾಡಿ, “ಜನಪದದ ನೆಲೆಯಿಂದ ಮನುಷ್ಯನ ಬದುಕು ಹುಡುಕಬೇಕಾಗಿದೆ. ಮಂಜಮ್ಮ ಜೋಗತಿ ಅವರ ಜೀವನ ಸಾಧನೆಯ ಬಗ್ಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಓದುವ ಸಲುವಾಗಿ ಪಠ್ಯದಲ್ಲಿ ಪಾಠ ಸೇರಿಸಲು ಶ್ರಮಿಸುತ್ತೇನೆ. ಜನಪದ ಮೌಖಿಕ ಸಂಪ್ರದಾಯದ್ದು. ಅದನ್ನು ದಾಖಲಿಸುವ ಕಾರ್ಯ ಮಾಡಬೇಕು. ಆತ್ಮಕ್ಕಿಂತ, ಅರಿವಿಗಿಂತ ದೊಡ್ಡ ದೇವರಿಲ್ಲ. ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕಾರ್ಯ ಜನಪದ ಮಾಡುತ್ತಿದೆ. ಜಾನಪದ ಸಾಹಿತ್ಯಕ್ಕೆ ಚೌಕಟ್ಟು ಇಲ್ಲ. ವೈವಿಧ್ಯಮಯ ಸಾಹಿತ್ಯವಾಗಿದೆ” ಎಂದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಶೋಕ ತಡಸದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕಡುಬಡತನದಲ್ಲಿ ಬೆಳೆದು ಬಂದಿರುವ ಮಂಜಮ್ಮ ಜೋಗತಿ ಅವರ ಸಾಧನೆ ನಮ್ಮೆಲ್ಲ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೌದ್ಧಿಕ ಆಸ್ತಿ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ಆಡಳಿತಾಧಿಕಾರಿ ಎ ಬಿ ಕುಲಕರ್ಣಿ, ಪ್ರಾಚಾರ್ಯ ಎಸ್ ಎನ್ ಪೊಲೇಶಿ, ಐಕ್ಯೂಎಸಿ ಸಂಯೋಜಕ ಎಂ ಐ ಬಿರಾದಾರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...