ವಿಜಯಪುರ | ‘ಹಬ್ ಅಂಡ್ ಸ್ಪೋಕ್” ಹೆಸರಿನಲ್ಲಿ ಸರಕಾರ ಶಾಲೆಗಳ ಮುಚ್ಚಲು ಹೊರಟಿದೆ: ಕಾವೇರಿ ರಜಪೂತ

Date:

“ರಾಜ್ಯದ ಕಾಂಗ್ರೆಸ್ ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರಕಾರ ಶಾಲೆಗಳನ್ನು ಮುಚ್ಚಲು ಹೊರಟಿದೆ” ಎಂದು ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ್ ಅಸಮಾಧಾನ ವ್ಯಕ್ತಪಡಿಸಿದರು.

ವಿಜಯಪುರ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಕಾಂಗ್ರೆಸ್ ಸರ್ಕಾರ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಸಂಯೋಜನೆ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಪ್ರತಿಭಟಿಸಿ ಮಾತನಾಡಿದರು.

ಈ ಪ್ರತಿಭಟನೆಯನ್ನು ಉದ್ದೇಶಿಸಿ  ಮಾತನಾಡಿ, “ಸರಕಾರ ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ.  ಈ ಮೂಲಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರಿ ಶಾಲೆಗಳನ್ನು ಮುಚ್ಚಲು  ಮುಂದಾಗಿರುವುದು ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಬಿಜೆಪಿ ರಾಜ್ಯ ಸರ್ಕಾರವು ಇದೇ ನೆಪವೊಡ್ಡಿ ಎನ್ಈಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು” ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ ಎಂದು ಕಾವೇರಿ ರಜಪೂತ  ಹೇಳಿದರು.

ಎಐಡಿಎಸ್ಓ ಮುಖಂಡ ಶರತ್ ತುಪ್ಪದ ಮಾತನಾಡಿ, “ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು. ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಶಾಲಾ ವಿಧ್ಯಾರ್ಥಿಗಳಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಈ ಪ್ರತಿಭಟನೆಯಲ್ಲಿ ಎಐಡಿಎಸ್ಓ ಸಂಘಟನಾಕಾರ ನಿತಿನ್ಕುಮಾರ್, ಶರತ್ ತುಪ್ಪದ, ಅಜೀತ್, ಚಿದಾನಂದ, ಕುಮಾರ, ವಿಠ್ಠಲ ನಾಯಕೋಡಿ ಹಾಗೂ ಇನ್ನೀತರ ವಿದ್ಯಾರ್ಥಿಗಳು ಭಾಗವಹಿಸಿದ್ದರು..

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...