ವಿಜಯಪುರ | ಗ್ರಾಮದ ಕೆರೆ, ಬಾಂದಾರಿಗೆ ನೀರು ತುಂಬಿಸುವಂತೆ ತಹಸೀಲ್ದಾರರಿಗೆ ಮನವಿ

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಪಂಚಾಯತಿಯ ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕಾನ್ನಾಳ ಗ್ರಾಮಸ್ಥರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

ಬೇಸಿಗೆ ಆರಂಭವಾಗುತ್ತಿದ್ದು, ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಮೊದಲೇ ಇದೆ. ಕಾನ್ನಾಳದಿಂದ 1ಕಿಲೋ ಮೀಟರ್‌ ದೂರದಲ್ಲಿರುವ ಮುಳವಾಡ ಏತನೀರಾವರಿ ಕಾಲುವೆಯಿಂದ ಈ ಕೆರೆ ಮತ್ತು ಬಾಂದಾರಿಗೆ ನೀರಿನ್ನು ಹರಿಸಿದರೆ, ಜಾನುವಾರುಗಳಿಗೆ ಜನರಿಗೆ ಕುಡಿಯಲು ಸಮಸ್ಯೆಯಾಗುವುದಿಲ್ಲ.

ನಮ್ಮ ಗ್ರಾಮಕ್ಕೆ ಕೆರೆಗೆ ಮತ್ತು ಬಂದಾರಗಳಿಗೆ ನೀರನ್ನು ತುಂಬಿಸಿ ಕೋಡಬೇಕು ಎಂದು ಗ್ರಾಮಸ್ಥರು ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಮುಖಂಡ ಗುರು, ಎಸ್.ಎಂ. ಸಜ್ಜನ, ಆರ್.ಎಂ. ಮೇಲಿನಮನಿ, ಶಿವಪ್ಪ ಹೂಗಾರ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...