ವಿಜಯಪುರ | ಗ್ಯಾರಂಟಿ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ: ಶಾಸಕ ಸಿ ಎಸ್‌ ನಾಡಗೌಡ

Date:

ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಸಂಗಮೇಶ ದೇಸಾಯಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

“ಗ್ಯಾರಂಟಿ ಯೋಜನೆಗಳಿಂದ ಜನರ ಕೈಯಲ್ಲಿ ಹಣ ಓಡಾಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯಿಂದ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಜತೆಗೆ ಕೆಲಸ ಕಾರ್ಯಗಳಿಗೆ ತೆರಳಲು ಅನುಕೂಲವಾಗಿದೆ. ಯೋಜನೆಯು ಸಮರ್ಪಕವಾಗಿ ಜನರಿಗೆ ಮುಟ್ಟಲಿ ಎಂಬ ಉದ್ದೇಶದಿಂದ ತಾಲೂಕು ಕೇಂದ್ರಗಳಲ್ಲಿಯೂ ಸರ್ಕಾರ ಕಚೇರಿ ಆರಂಭಿಸಿದೆ. ಇದಕ್ಕೆ ಅಧಿಕಾರಿಗಳು, ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಯೋಜನೆಯ ಬಗ್ಗೆ ಜನರಿಗೆ ತಿಳಿ ಹೇಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ ಭೋರಮಣಿ, ಜಿಲ್ಲಾವಾರು ಮತ್ತು ತಾಲೂಕುವಾರು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿರುವವರ ಸಂಖ್ಯೆಗಳನ್ನು ವಿವರಿಸಿದರು.

ಈ ಸಮಯದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ್‌ ಭೋರಮಣಿ ಮತ್ತು ತಾಲೂಕು ಅಧ್ಯಕ್ಷ ಸಂಗಮೇಶ ದೇಸಾಯಿಯನ್ನು ಶಾಸಕ ನಾಡಗೌಡ ಸನ್ಮಾನಿಸಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಾದರಿ ಕಲಿಕಾ ಕೇಂದ್ರವಾಗಿರುವ ಕಬಡಕೇರಿ ಅಂಗನವಾಡಿ

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ(ಯಾಳಗಿ), ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ ಬಿ ಅಸ್ಕಿ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ(ನಾವದಗಿ), ಕಾರ್ಯದರ್ಶಿ ವಿಜಯಸಿಂಗ್ ಹಜೇರಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಮೆಹಬೂಬ್ ಬೋರಗಸ್ತಿ, ಪ್ರಭುಗೌಡ ಮದರಕಲ್ಲ, ಪರಶುರಾಮ ತಂಗಡಗಿ, ಅಕ್ಕಮಹಾದೇವಿ ಕಟ್ಟಿಮನಿ, ಸಂಗನಗೌಡ ಪಾಟೀಲ(ಮಿಣ ಜಗಿ), ನೀಲಮ್ಮ ಪಾಟೀಲ, ಫಯಾಜ ಉತ್ಪಾಳ, ಸಂಗನಗೌಡ ಅಸ್ತಿ, ಕಾಸೀಂ ಪಟೇಲ ಪಾಟೀಲ, ಶೌಕತ್ ಲಾಹೋರಿ, ಗೋಪಾಲ ಕಟ್ಟಿಮನಿ, ಮೋದಿನಸಾ ನಗಾರ್ಚಿ, ಆಸೀಫ್ ಕೆಂಬಾವಿ, ಸದ್ದಾಂ ಕುಂಟೋಜಿ, ಶಿವರಾಜ ನಾಗೂರ, ತಾಪಂ ಇಒ ನಿಂಗಪ್ಪ ಮಸಳಿ ಹಾಗೂ ತಾಲೂಕಿನ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...