ವಿಜಯಪುರ | ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ

Date:

ವಿಜಯಪುರ ನಗರದ ಕರ್ನಾಟಕ ಜಲಾಭಿವೃದ್ಧಿ ಸಂಸ್ಥೆ ಹಾಗೂ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಆರ್ಕಿಟೆಕ್ಟ್ ಶಾಖೆ ನೇತೃತ್ವದಲ್ಲಿ ವಿಜಯಪುರ ನಗರದ ಚಾಬುಕ್ ಸವಾರ್ ದರ್ಗಾ ಬಳಿಯ ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ ನೀಡಿ ಸ್ವಚ್ಛತಾ ಕಾರ್ಯ ಆರಂಭಿಸಿದರು.

ವಿಜಯಪುರ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಯುಕ್ತರು ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ವಾರ್ಡಿನ ಸದಸ್ಯರ ಸಮ್ಮುಖದಲ್ಲಿ ಚಾಲನೆ ನೀಡಿದರು.

ಜಲಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್‌ ಮಾತನಾಡಿ, “ನಗರದಲ್ಲಿರುವ ಐತಿಹಾಸಿಕ ಬಾವಿಗಳು ಪುನರುಜ್ಜೀವನ ಮಾಡಿದರೆ ನೀರಿನ ಹಾಹಾಕಾರ ತಪ್ಪಿಸಲು ಸಾಧ್ಯವಾಗಬಹುದು. ಬಾವಿಗಳನ್ನು ರಕ್ಷಣೆ ಮಾಡಿ ಸರಿಯಾದ ನಿರ್ವಹಣೆ ಮಾಡಬೇಕು” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾವಿ ಅಭಿವೃದ್ಧಿ 1

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗೂಳಪ್ಪ ಶೆಟ್ಟಿಗಾರ್ ಮಾತನಾಡಿ, “ಈ ಕಾರ್ಯಗಳಿಂದ ಬಾವಿ ಸುತ್ತಮುತ್ತಲಿನ ಬಡಾವಣೆಯಲ್ಲಿರುವ ಸಾರ್ವಜನಿಕರಿಗೆ ಸ್ವಚ್ಛ ಗಾಳಿ ಬರುತ್ತದೆ. ಸೊಳ್ಳೆಗಳ ಕಾಟ ತಪ್ಪಿ ಜನರ ಆರೋಗ್ಯ ಹಾಳಾಗುವುದನ್ನು ತಪ್ಪಿಸಬಹುದು. ಒಟ್ಟಾರೆ ಉತ್ತಮ ಕಾರ್ಯವಾಗಿದ್ದು,  ಪರಿಸರ ರಕ್ಷಣೆಯಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಲ್ಲ ಗ್ರಾಮ ಪಂಚಾಯತಿಗಳಿಗೆ ಪಿಡಿಒ ನೇಮಕಕ್ಕೆ ಮನವಿ 

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗೂಳಪ್ಪ ಶೆಟ್ಟಿಗಾರ್ ಅವರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಅವರು ಸನ್ಮಾನಿಸಿದರು. ಹಾಗೆಯೇ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅವರನ್ನು ಕೂಡಾ ಜಲಾಭಿವೃದ್ಧಿ ಅಧ್ಯಕ್ಷ ಪೀಟರ್ ಅಲೆಕ್ಸಾಂಡ‌ರ್ ಸನ್ಮಾನಿಸಿದರು.

ಸ್ವಚ್ಛತಾ ಕಾರ್ಯದಲ್ಲಿ ಪಾಟೀಲ ಫೌಂಡೇಶನ್ ಸಂಸ್ಥೆ, ರಾಷ್ಟ್ರೀಯ ಅಪರಾಧ ನಿಯಂತ್ರಣ ಮಂಡಳಿ, ರಾಜೇಂದ್ರ ಫೌಂಡೇಶನ್, ಹ್ಯಾಪಿ ಕೇಕ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆಂಡ್ ಕಲ್ಚರಲ್‌ ಹೆರಿಟೇಜ್, ಕ್ರಾಂತಿ ಅಸೋಸಿಯೇಷನ್ ಸಂಸ್ಥೆಯ ಸ್ವಯಂ ಸೇವಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...