ವಿಜಯಪುರ | ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರಿಗೆ ಸನ್ಮಾನ ಸಮಾರಂಭ

Date:

ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರವು ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಜನತೆ ಅನುಭವಿಸಿದೆ. ಸದ್ಯ ಇದೀಗ ತಮ್ಮ ಆರೋಗ್ಯ ಸೇವೆ ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ನಿಮ್ಮ ಸಹಕಾರಕ್ಕೆ ನಾವು ಸದಾ ಇರುತ್ತೇವೆ. ಸೇವೆಗೆ ಹಿಂಜರಿಯಬೇಡಿ ಎಂದು ಡಿಎಸ್ಎಸ್ ಹೋಬಳಿ ಘಟಕದ ಅಧ್ಯಕ್ಷ ಗುಂಡಪ್ಪ ಚಲವಾದಿ ವೈದ್ಯರಿಗೆ ಸಾಥ್‌ ನೀಡಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯ ಡಾ.ರಂಗನಾಥ ವೈದ್ಯ ಸೇರಿದಂತೆ ಐದು ಮಂದಿ ವೈದ್ಯರಿಗೆ ಡಿಎಸ್ಎಸ್ ನಾಲತವಾಡ ಹೋಬಳಿ ಸಂಚಾಲಕರ ಹಾಗೂ ವಿವಿಧ ಸಂಘಟಕರು ಹಮ್ಮಿಕೊಂಡಿದ್ದ ನಾಗರಿಕ ಸಮಾರಂಭದಲ್ಲಿ ಮಾತನಾಡಿದರು.

“ಇಲ್ಲಿರುವ ಹಲವು ಸಿಬ್ಬಂದಿಗಳಿಗೆ ಸಮಯ ಪ್ರಜ್ಞೆ ಬೇಕಿದ್ದು, ಅಂಥವರಿಗಾಗಿ ಮೊದಲು ಸಭೆ ಕರೆದು ಉತ್ತಮ ಸೇವೆಗೆ ಸಮಯ ಪಾಲನೆ ಮಾಡುವಂತೆ ಸೂಚಿಸಬೇಕು” ಎಂದು ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನ್ಮಾನ ಸ್ವೀಕರಿಸಿ ಡಾ.ರಂಗನಾಥ ವೈದ್ಯ ಮಾತನಾಡಿ, “ನನ್ನೊಂದಿಗೆ ಇನ್ನುಳಿದ ವೈದ್ಯರೂ ಕೂಡ ಎಂಬಿಬಿಎಸ್ ಮುಗಿಸಿದ್ದು, ಅವರೂ ಕೂಡಾ ಯುವಕರಿದ್ದಾರೆ. ಅವರೊಂದಿಗೆ ತಮ್ಮ ಸಹಕಾರದಿಂದ ನನ್ನ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನೌಕರ ನಿಧನ

ಈ ವೇಳೆ ಸನ್ಮಾನ ಸ್ವೀಕರಿಸಿದ ಡಾ.ಅರ್ಪಿತಾ ಚಿನಿ ವಾಲರ, ಡಾ.ರೇಶ್ಚಾ ಹವೇಲಿ ಹಾಗೂ ಕೆಪಿಸಿಸಿ ಘಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ತಾಲೂಕಧ್ಯಕ್ಷ ಮೈಬೂಬ ಕುಳಗೇರಿ, ಶಿವು ಪಟ್ಟಣಶೆಟ್ಟಿ, ದಂಡಪ್ಪ ಜಾವಳಗೇರಿ, ಕರವೇ ಸಂಘಟಕ ಕಾಶೀಮ ಗಂಗೂರ, ಕಾಶೀಬಾಯಿ, ಮುನ್ನಾ ಹೊನ್ನುಟಗಿ, ಕವಿತಾ ಪಾಟೀಲ, ಕಾಶೀಮಪಟೇಲ ಬಿದರಕೋಟಿ, ಬಸವರಾಜ ಹಳ್ಳಿ, ಮುತ್ತಣ್ಣ ಕೂಡಲಗಿ, ಮಹಾಂತೇಶ ಹಡಪದ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...