ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಬೇಕು ಎಂದು ಗುಂಡು ಕರ್ಜಿಗಿ ಗ್ರಾಮದ ಮಹಿಳೆಯರು ಬುಧವಾರ ವಿಜಯಪುರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು.

“ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡು ಕರ್ಜಿಗೆ ಊರಿನಲ್ಲಿ ಸಾರಾಯಿ ಮಾರಾಟ ಮಾಡುವುದರಿಂದ ಯುವಕರು, ಗಂಡಸರು ಕುಡಿದು ಮನೆಗೆ ಬಂದು ಹೆಣ್ಣುಮಕ್ಕಳಿಗೆ ಹಿಂಸೆಯನ್ನು ನೀಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಸರಿಯಾಗಿ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಮನಸ್ಸಿನ ನೆಮ್ಮದಿಯನ್ನು ಕಳೆದುಕೊಂಡಿದ್ದೇವೆ. ಹಾಗಾಗಿ ತಾವುಗಳು ಸಾರಾಯಿ ಮಾರಾಟ ಮಾಡುವುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ನಮ್ಮ ಊರಿನಲ್ಲಿ ಸಾರಾಯಿ ಮಾರಾಟ ನಿಷೇಧಿಸಬೇಕು” ಎಂದು ಸ್ವಸಹಾಯ ಸಂಘಗಳ ಸದಸ್ಯರು ಗ್ರಾಮಸ್ಥರು ಆಗ್ರಹಿಸಿದರು.

ಮುದ್ದೇಬಿಹಾಳದ ಸೇವಾ ಸದನ ಸಮಾಜ ಅಭಿವೃದ್ಧಿ ಕೇಂದ್ರದ ಸಂಯೋಜಕ ಡಿ ಡೊರತಿ ಮಾತನಾಡಿ, “ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವ ಕಾರಣ ಗ್ರಾಮದಲ್ಲಿ ನೆಮ್ಮದಿ ಹಾಳಾಗಿದೆ. 2023ರ ಫಬ್ರವರಿ 9ರಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರೂ ಈವರೆಗೂ ಕ್ರಮ ಕೈಗೊಂಡಿಲ್ಲ. ಹಲವರು ಚಹಾದ ಅಂಗಡಿಗಳಲ್ಲಿ, ಕಿರಾಣಿ ಅಂಗಡಿಗಳಲ್ಲಿ, ಪಾನ್ ಬೀಡಾ ಅಂಗಡಿಗಳಲ್ಲಿ ಮತ್ತೆ ಅಕ್ರಮವಾಗಿ ಸಾರಾಯಿ ಮಾರುತ್ತಿದ್ದು, ಗ್ರಾಮದ ನೆಮ್ಮದಿ ಹಾಳಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಓದುವ ಆಸಕ್ತಿಯಿಂದ ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸ

ಜಿಲ್ಲಾಧಿಕಾರಿಗಳ ಪರವಾಗಿ ಹೆಚ್ಚು ಜಿಲ್ಲಾಧಿಕಾರಿ ಸಮಲಿಂಗ ಗೆಣ್ಣೂರು, ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಗಮ್ಮ ಬಿರಾದಾರ, ಜಯಶ್ರೀ ಹಿರೇಮಠ, ರೇವಣಸಿದ್ದಪ್ಪ ಪೂಜಾರಿ, ರೂಪಾ, ಸಂಕನಾಳಮಹಾದೇವಿ, ರೇಣುಕಾದಳಯಿ, ಶಾಂತಾ ದಳವಾಯಿ, ಸುನಂದಾ ಚಲವಾದಿ, ಬಸವ್ವ ದಳವಾಯಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...