ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ಪಾನಮುಕ್ತ ಗ್ರಾಮ ಮಾಡಲು ಸಹಕರಿಸುವಂತೆ ಮನವಿ

Date:

ನಾಲತವಾಡ ಸಮೀಪದ ನೆರಬೆಂಚಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವ ಮೂಲಕ ಪಾನಮುಕ್ತ ಗ್ರಾಮಕ್ಕೆ ಪಣ ತೊಡಲು ಗ್ರಾಮಸ್ಥರೆಲ್ಲರೂ ಸಹಕಾರ ನೀಡಬೇಕು ಎಂದು ನಿವೃತ್ತ ಶಿಕ್ಷಕ ವೈ ಬಿ ತಳವಾರ ಮನವಿ ಮಾಡಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನೆರಬೆಂಚಿ ಗ್ರಾಮದಲ್ಲಿ ಪ್ರಜ್ಞಾವಂತರು, ಕೆಸಾಪುರದ ಮದ್ಯಪಾನ ವಿರೋಧಿ ತಂಡದವರು, ಮಹಿಳಾ ಸಂಘಟನೆಯವರು ಜಂಟಿಯಾಗಿ ಹಮ್ಮಿಕೊಂಡಿದ್ದ ಮದ್ಯ ಮಾರಾಟ ನಿಷೇಧ ಅಭಿಯಾನ, ಜನಜಾಗೃತಿ ಮೂಡಿಸುವ ಕಾಲ್ನಡಿಗೆ ಜಾಥಾದಲ್ಲಿ ಮಾತನಾಡಿದರು.

“ಈಗಾಗಲೇ ಕೆಸಾಪುರದಿಂದ ಪ್ರಾರಂಭಗೊಂಡಿರುವ ಪಾನಮುಕ್ತ ಗ್ರಾಮ ಮಾಡುವ ಸಂಕಲ್ಪ ಯಾತ್ರೆಯೂ ಕೆಸಾಪುರ ಮತ್ತು ಆಲೂರು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ನಡೆಯುತ್ತಿಲ್ಲ. ಆದರೆ ಕೆಸಾಪುರದ ಕುಡುಕರು ಸಮೀಪದ ನೆರಬೆಂಚಿಗೆ ಬಂದು ಮದ್ಯ ಸೇವಿಸಿ ಇತರೆ ಗ್ರಾಮಗಳಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ವಿಷಯ ಗೊತ್ತಾಗಿದೆ. ನೆರಬೆಂಚಿಯಲ್ಲಿ ಅಕ್ರಮ ಮದ್ಯ ಮಾರಾಟಗಾರರು ಉದ್ರಿ(ಕಡ)ಯಾಗಿ ಮದ್ಯ ಕೊಡುತ್ತಿರುವುದು ಗಮನಕ್ಕೆ ಬಂದಿದೆ”‌ ಎಂದರು.

“ಹೋಟೆಲ್, ಕಿರಾಣಿ ಅಂಗಡಿ, ಪಾನ್‌ಶಾಪ್ ಮುಂತಾದೆಡೆ ಈಗಾಗಲೇ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ತಹಶೀಲ್ದಾರ್, ಪೊಲೀಸರು, ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕ ಸಿ ಎಸ್ ನಾಡಗೌಡರಿಗೆ ಮನವಿ ಸಲ್ಲಿಸಿದ್ದೇವೆ. ಅವರೂ ಕೂಡಾ ಸಕಾರಾತ್ಮಕವಾಗಿ
ಸ್ಪಂದಿಸಿದ್ದಾರೆ. ಅಕ್ರಮ ಮುಂದುವರೆದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ಮದ್ಯ ಮಾರಾಟ ಮಾಡುವ ದಂಧೆಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಅಂಥವರ ವಿರುದ್ಧ ನಾವೇ ದೂರು ಕೊಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಸಾಪುರದ ಜಿ ಜಿ ಗೌಡರ, ಶ್ರೀನಿವಾಸ ಗೌಂಡಿ, ಭಾಷಾ ತಾಳಿಕೋಟಿ, ದ್ಯಾಮಣ್ಣ ಹಿರೇಕುರುಬರ, ಸುರೇಶ ಭೈರವಾಡಗಿ, ನಾಗರಾಜ ಹಿರೇಕುರುಬರ, ಅಶೋಕ ಹಗರಗೊಂಡ, ಸಂಗನಗೌಡ ಪಾಟೀಲ, ಪರಸಪ್ಪ ಗೌಡ್ರ, ಸಂಗಣ್ಣ ಭೋವಿ, ಶಾಂತಗೌಡ ನಾಡಗೌಡ, ಗದ್ದೆಪ್ಪ ಭೋಯೇರ ಮತ್ತು ಮಹಿಳಾ ಸಂಘಟನೆಗಳ ಸದಸ್ಯರು, ನೆರಬೆಂಚಿಯ ಮಲ್ಲಿಕಾರ್ಜುನ ಬಿರಾದಾರ, ಶಿದ್ರಾಮ ಬಿರಾದಾರ, ಮಲ್ಲನಗೌಡ ಬಿರಾದಾರ, ನಿಂಗನಗೌಡ ಪಾಟೀಲ, ನಾಗಪ್ಪ ನಾಯ್ಕಮಕ್ಕಳ, ನಾಗರಾಜ ಬಿರಾದಾರ, ನಾಗಪ್ಪ ಹಳ್ಳೆಪ್ಪನರ್ವ, ರುದ್ರಮ್ಮ ಬಿರಾದಾರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...