ವಿಜಯಪುರ | ತಾಪಮಾನ ಹೆಚ್ಚಳ; ಮುಂಜಾಗೃತೆ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ

Date:

ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಾಪಮಾನ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗೃತೆ ಕ್ರಮ ವಹಿಸಬೇಕೆಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆಯ ನೀಡಿದೆ.

“ಸಾರ್ವಜನಿಕರು, ಅತಿಯಾದ ಬಿಸಿಲಿನ ಕುರಿತು ರೇಡಿಯೋ, ಟಿವಿ, ದಿನಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು” ಎಂದು ತಿಳಿಸಿದೆ.

“ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಬಸ್ಸಿನಲ್ಲಿ ದೂರದ ಪ್ರಯಾಣ ಕೈಗೊಳ್ಳುವುದಿದ್ದರೆ ರಾತ್ರಿ ವೇಳೆ ಪ್ರಯಾಣಿಸುವುದು ಉತ್ತಮ, ಒಂದು ವೇಳೆ ಹಗಲಿನಲ್ಲಿಯೇ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ, ನಿಮ್ಮೊಂದಿಗೆ ನೀರನ್ನು ಒಯ್ದಿರಿ. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಹಾಗೂ ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನೂ ಕೂಡಾ ಬಳಸಿ” ಎಂದು ಸಾರ್ವಜನಿಕರಿಗೆ ಸಲಹೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದರಿಂದ ದೇಹವನ್ನು ಪುನಃ ತಂಪಾಗಿಡಲು ಸಹಾಯವಾಗುತ್ತದೆ” ಎಂದು ಆರೋಗ್ಯ ಇಲಾಖೆ ತಿಳಿಸಿದೆ.

“ಆದಷ್ಟು ಫ್ಯಾನ್‌ಗಳನ್ನು ಬಳಸಿ, ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಒಳ್ಳೆಯದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರು ಇರುವಂತೆ ನೋಡಿಕೊಳ್ಳಬೇಕು. ಕೆಲಸ ನಿರ್ವಹಿಸುವ ಗರ್ಭಿಣಿಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು” ಎಂದು ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬಿಸಿಗಾಳಿ: ಅಗತ್ಯ ಮುನ್ನೆಚ್ಚರಿಕೆಗಳೇನು?

“ನವಜಾತ ಶಿಶುಗಳು, ಚಿಕ್ಕಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚು ಜಾಗರೂಕತೆ ವಹಿಸಬೇಕು” ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

“ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ. ಪ್ರಾಣಿಗಳ ಮೈಮೇಲೆ ಒದ್ದೆಯಾದ ಬಟ್ಟೆಗಳನ್ನು ಹಾಕಿ. ಈ ಮೂಲಕ ಪ್ರಾಣಿಗಳನ್ನು ಬಿಸಿಲಿನಿಂದ ರಕ್ಷಿಸಿ” ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...