ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

Date:

ಕೇಂದ್ರದ ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ವಿಜಯಪುರ ನಗರ ಸಬಲಾ ಸಂಸ್ಥೆ ಮುಖ್ಯಸ್ಥೆ ಮಲ್ಲಮ್ಮ ಯಳವಾರ ಟೀಕಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕರ್ನಾಟಕಕ್ಕೆ ಈ ಬಾರಿ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಇದರಿಂದ ಕರ್ನಾಟಕದ ಜನರಿಗೆ ನಿರಾಶೆಯಾಗಿದೆ. ನಷ್ಟದಲ್ಲಿರುವ ಭದ್ರಾವತಿ ಉಕ್ಕಿನ ಕಾರ್ಖಾನೆಯಂತಹ ಅನೇಕ ಉದ್ದಿಮೆಗಳ ಪುನಶ್ಚೇತನಕ್ಕೆ ಯಾವುದೇ ಯೋಜನೆಯನ್ನು ಘೋಷಿಸದೆ ಇರುವುದು ಬೇಸರ ತಂದಿದೆ” ಎಂದರು.

“ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರಿಗೆ ₹3.50 ಲಕ್ಷಗಳ ವರೆಗೆ ಸಾಲ ಸೌಲಭ್ಯವನ್ನು ಒದಗಿಸುವುದಾಗಿ ಘೋಷಿಸಲಾಗಿದೆ. ಆದರೆ ರೈತರ ಉತ್ಪಾದನೆಗೆ ಯಾವುದೇ ನಿರ್ದಿಷ್ಟವಾದ ಯೋಜನೆ ರೂಪಿಸದೇ ಇರುವುದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ. ರೈತರು ಈಗಾಗಲೇ ಸಂಕಷ್ಟದಲ್ಲಿದ್ದು ಇನ್ನೂ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ದೇಶದ ಬೆನ್ನೆಲುಬಾಗಿರುವ ಒಕ್ಕಲುತನ ಆರ್ಥಿಕ ಸಂಕಷ್ಟದಿಂದ ಬಳಲುವಂತಾಗುತ್ತದೆ. ಮಹಿಳಾ ಶಿಕ್ಷಣಕ್ಕೆ ಯಾವುದೇ ಹೊಸ ಯೋಜನೆಯನ್ನು ರೂಪಿಸಿಲ್ಲ. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿಲ್ಲ. ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಆದಾಯ ಮೂಲ ಹೆಚ್ಚಿಸಲು ಸರಿಯಾದ ಯೋಜನೆಯನ್ನು ರೂಪಿಸಲಾಗಿಲ್ಲ. ಹೀಗಾಗಿ ಬಡವರು ಬಡವರಾಗಿಯೇ ಉಳಿಯುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಪರಿಸರ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್‌ಗೆ ಸೀಮಿತವಾಗದಿರಲಿ: ನಟ ವಿಶ್ವಪ್ರಕಾಶ

“ದೇಶದ ಸಾಲ ₹200 ಲಕ್ಷ ಕೋಟಿಗಳಿಗಿಂತಲೂ ಹೆಚ್ಚಾಗಿರುವುದು ದೇಶದ ಪ್ರತಿ ಪ್ರಜೆಗೂ ಆತಂಕವನ್ನು ಹುಟ್ಟಿಸಿದೆ. ಮೂಲ ಶಿಕ್ಷಣಕ್ಕೆ ಒತ್ತು ಕೊಡದೆ ಮೆಡಿಕಲ್ ಸೀಟ್‌ಗಳನ್ನು ಹೆಚ್ಚು ಮಾಡಿದ್ದು, ನಗರದ ಮಕ್ಕಳಿಗಷ್ಟೇ ಹೆಚ್ಚು ಉಪಯುಕ್ತವಾಗಿದೆ. ಗ್ರಾಮೀಣ ಮಕ್ಕಳು ಇದರಿಂದ ವಂಚಿತರಾಗುತ್ತಾರೆ. ಆದರೆ ಇದೆಲ್ಲದರ ನಡುವೆ ಕೇಂದ್ರ ಬಜೆಟ್ 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದು ಸ್ವಾಗತಾರ್ಹ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...