ವಿಜಯಪುರ | ಸಿಜೆಐಗೆ‌ ಮಾಡಿದ ಅವಮಾನ ದಲಿತರ ಮೇಲಿನ ದೌರ್ಜನ್ಯ: ಆಪ್‌ ಜಿಲ್ಲಾಧ್ಯಕ್ಷ ಭೋಗೇಶ್‌

Date:

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ಪ್ರಕರಣ ನ್ಯಾಯಾಂಗ ವ್ಯವಸ್ಥೆಯ ಮೇಲೆ ದಾಳಿ ಹಾಗೂ ಇದು ಪ್ರತಿ ದಲಿತನ ಮೇಲಿನ ದೌರ್ಜನ್ಯ ಎಂದು ಆಮ್ ಆದ್ಮಿ ಪಾರ್ಟಿಯ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಖಂಡಿಸಿದ್ದಾರೆ.

“ಈ ಘಟನೆಯು ಪ್ರತಿ ದಲಿತನ ಗೌರವ ಮತ್ತು ನ್ಯಾಯದ ಹಕ್ಕನ್ನು ಧಿಕ್ಕರಿಸುವ ದೌರ್ಜನ್ಯವಾಗಿದ್ದು, ಬಿಜೆಪಿ ಸರ್ಕಾರದಿಂದ ನ್ಯಾಯದ ಧ್ವನಿಯನ್ನು ಮುಚ್ಚುವ ಪ್ರಯತ್ನವೆಂದು ಆಮ್ ಆದ್ಮಿ ಪಾರ್ಟಿ (ಆಪ್) ಖಂಡಿಸುತ್ತದೆ. ಈ ಘಟನೆಯು ದಲಿತ ಸಮುದಾಯದ ಮೇಲಿನ ಸಾಂಸ್ಥಿಕ ದೌರ್ಜನ್ಯದ ಭಾಗವಾಗಿದ್ದು, ನ್ಯಾಯಾಂಗದ ಸ್ವತಂತ್ರತೆಯನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿದೆ. ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ದಲಿತ ಹಿನ್ನೆಲೆಯಿಂದ ಬಂದು, ನ್ಯಾಯದ ರಕ್ಷಕರಾಗಿ ದೇಶಕ್ಕೆ ಸೇವೆ ಸಲ್ಲಿಸುತ್ತಿರುವಾಗ, ಇಂತಹ ದಾಳಿ ಎಲ್ಲರ ಮೇಲಿನ ದಾಳಿಯಾಗಿದೆ. ಆಮ್ ಆದ್ಮಿ ಪಾರ್ಟಿ ರಾಜ್ಯಾದ್ಯಂತ ನಡೆಯುತ್ತಿರುವ ಬಂದ್‌ನಲ್ಲಿ ಭಾಗವಹಿಸಿ, ಈ ಷಡ್ಯಂತ್ರಕ್ಕೆ ತೀವ್ರ ವಿರೋಧವನ್ನು ನೀಡುತ್ತೇವು. ಇದು ಕೇವಲ ವಿಜಯಪುರಕ್ಕೆ ಸೀಮಿತವಲ್ಲ, ದೇಶಾದ್ಯಂತ ನ್ಯಾಯ ಮತ್ತು ಸಮಾನತೆಗಾಗಿ ಒಂದು ಜಾಗೃತಿ ಚಳವಳಿಯಾಗಲಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ವಿಜಯಪುರ | ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಮ್ ಆದ್ಮಿ ಪಕ್ಷದ ವಿಜಯಪುರ ಘಟಕವು ಈ ಘಟನೆಯನ್ನು ಖಂಡಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕ್ಷಮೆಯೊಂದಿಗೆ ತನಿಖೆ ನಡೆಸಲು ಮತ್ತು ದೋಷಿಗಳನ್ನು ತಡೆಹಿಡಿಯಲು ಕರೆ ನೀಡುತ್ತದೆ. ನ್ಯಾಯಾಂಗದ ಮೇಲಿನ ದಾಳಿಗಳು ಮುಂದುವರಿದರೆ, ದೇಶದ ಜನತೆಗೆ ನ್ಯಾಯ ದೊರಕದಂತಾಗುತ್ತದೆ. ಆಮ್ ಆದ್ಮಿ ಪಕ್ಷ ಎಲ್ಲಾ ಪಕ್ಷಗಳು, ಸಮಾಜದ ಎಲ್ಲಾ ವರ್ಗಗಳನ್ನು ಈ ಹೋರಾಟಕ್ಕೆ ಸೇರಲು ಆಹ್ವಾನಿಸುತ್ತದೆ” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...