ವಿಜಯಪುರ | ಒಳಮೀಸಲಾತಿ ಜಾರಿಯು ಬಹು ದಿನಗಳ ಬೇಡಿಕೆಯಾಗಿತ್ತು: ರಮೇಶ ಗುಬ್ಬೆವಾಡ

Date:

ದಲಿತರ ಬಹುದಿನಗಳ ಬೇಡಿಕೆಯಾಗಿದ್ದ ಒಳಮೀಸಲಾತಿ ಬೇಡಿಕೆಯನ್ನು ಯಾರಿಗೂ ಅನ್ಯಾಯ ಆಗದಂತೆ ಎಲ್ಲರಿಗೂ ಸಹಮತ ಬರುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಜಾರಿ ಮಾಡಿದೆ. ಆ ಮೂಲಕ ತಾನು ಯಾವತ್ತಿದ್ದರೂ ಅಹಿಂದ ವರ್ಗಗಳ ಹಿತ ಕಾಪಾಡುವಲ್ಲಿ ಮುಂಚೂಣಿಯಲ್ಲಿ ಇರುವುದಾಗಿ ನಿರೂಪಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಶೋಷಿತ ಹಾಗೂ ದಲಿತ ಸಮುದಾಯದವರು ಚಿರಋಣಿಯಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ವಿಜಯಪುರ ಜಿಲ್ಲಾ ಅಧ್ಯಕ್ಷ ರಮೇಶ ಗುಬ್ಬೆವಾಡ ತಿಳಿಸಿದರು.

ವಿಜಯಪುರ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿಗಾಗಿ ಹೋರಾಡಿದ ಎಲ್ಲ ಹೋರಾಟಗಾರರು, ಸಂಘಟನೆಗಳು, ರಾಜಕೀಯ ಮುಖಂಡರುಗಳು, ದಲಿತ ಸಚಿವರುಗಳಾದ ಶ್ರೀ ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಎಚ್.ಸಿ. ಮಹಾದೇವಪ್ಪ, ಆರ್.ಬಿ. ತಿಮ್ಮಾಪೂರ, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಹಾಗೂ ಎಲ್ಲ ದಲಿತ ಶಾಸಕರುಗಳಿಗೆ ಧನ್ಯವಾದ ಸಲ್ಲಿಸಿದರು.

ವಿಜಯಪುರ ಜಿಲ್ಲೆಯ ಒಳಮೀಸಲಾತಿ ಹೋರಾಟಗಾರ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ್ ಕಾಲೇಬಾ ಮಾತನಾಡಿದ, ಬಹಳ ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿದ್ದ ದಲಿತರ ಬೇಡಿಕೆಯನ್ನು ಮನಗಂಡು ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿ ತಾನು ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿ ಮಾಡುವುದಾಗಿ ದಲಿತರಿಗೆ ಆಶ್ವಾಸನೆ ನೀಡಿತ್ತು.ಈ ಕಾರಣಕ್ಕಾಗಿ ಇಡೀ ದಲಿತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತು. ಇದರ ಫಲವಾಗಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 138 ಸೀಟುಗಳು ಗೆದ್ದುಕೊಂಡಿತು. ದಲಿತರ ಸಮುದಾಯಕ್ಕೆ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಿದೆ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಅನೇಕ ಜಾತಿಗಳು ಮೀಸಲಾತಿಯಿಂದ ವಂಚಿವಾಗಿಸಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಅತ್ಯಂತ ಕೆಳಮಟ್ಟದಲ್ಲಿ ಇದ್ದು ಮೀಸಲಾತಿಯಿಂದ ವಂಚಿವಾಗಿ ಶೋಷಣೆ ಅನುಭವಿಸುತ್ತಿರುವುದನ್ನು ಮನಗಂಡು ಸರ್ಕಾರ ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಲ್ಲಿ ಜನಸಂಖ್ಯೆ ಆಧಾರದ ಮೇಲೆ ಒಳಮೀಲಾತಿಯನ್ನು ಜಾರಿಗೊಳಿಸಬೇಕೆಂದು ನಿರ್ಧರಿಸಿದೆ. ಮೂರು ಭಾಗಗಳಲ್ಲಿ ಮೀಸಲಾತಿಯನ್ನು ವರ್ಗೀಕರಿಸಿ ಜಾರಿ ಮಾಡಲಾಗಿದೆ. ಇದರ ಮೂಲಕ ದಲಿತರಿಗೆ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದಲಿತರಿಗೆ ಒಳಮೀಸಲಾತಿ ಜಾರಿ ಮಾಡುವುದಾಗಿ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು ಈಗ ನುಡಿದಂತೆ ನಡೆದು ದಲಿತ ಜನಾಂಗಕ್ಕೆ ಐತಿಹಾಸಿಕ ಕೊಡುಗೆಯನ್ನು ನೀಡಲಾಗಿದೆ ಇದಕ್ಕೆ ಸಮಸ್ತ ಕಾರಣಕರ್ತರಾದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ದಲಿತ ಸಮಾಜದ ಸಚಿವರು ಮತ್ತು ಶಾಸಕರುಗಳಿಗೆ ದಲಿತ ಸಮಾಜದ ವತಿಯಿಂದ ಅಭಿಮಾನಿಗಳು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

ಸುದ್ದಿಗೋಷ್ಠಿಯಲ್ಲಿ ಪರಶುರಾಮ ಹೊಸಮನಿ, ಬಾಬು ಗುಡಮಿ, ಕೃಷ್ಣಾ ಲಮಾಣಿ, ವಸಂತ ಹೊನಮೊಡೆ, ವಿಠ್ಠಲ ಸಂದಿಮನಿ, ಸಂತೋಷ್ ಬಾಲಗಾಂವಿ ಮುಂತಾದವರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...