ವಿಜಯಪುರ | ಒಳ ಮೀಸಲಾತಿ ಜಾರಿಯಾಗುವುದು ಖಚಿತ: ಎಚ್‌ ಆಂಜನೇಯ ವಿಶ್ವಾಸ

Date:

ತೀರಾ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಈ ಬಾರಿ ಒಳ ಮೀಸಲಾತಿ ಜಾರಿಯಾಗುವುದು ಖಚಿತ. ಸತತ 30 ವರ್ಷಗಳಿಂದ ನಡೆಸಿರುವ ಹೋರಾಟಕ್ಕೆ ಫಲ ಸಿಗಲಿದೆ ಎಂದು ಮಾಜಿ ಸಚಿವ ಎಚ್‌ ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯಪುರ ನಗರದ ಪ್ರವಾಸಿಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಂಧ್ರದಲ್ಲಿ ತೀವ್ರ ಹೋರಾಟದ ಮೂಲಕ ಒಳ ಮೀಸಲಾತಿ ಪಡೆದುಕೊಂಡಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಆದೇಶ ಬಂದಮೇಲೆ ನಮ್ಮ ರಾಜ್ಯದಲ್ಲೂ ಒಳಮೀಸಲಾತಿ ಕೊಡುವ ಕೆಲಸ ಆಗಲಿದೆ. ಸದಾಶಿವ ಆಯೋಗದ ವರದಿ ಹಾಗೂ ಮಾಧುಸ್ವಾಮಿ ನೇತೃತ್ವದಲ್ಲಿ ಬೊಮ್ಮಾಯಿ ಸರ್ಕಾರವಿದ್ದಾಗ ಅವರು ಶಿಫಾರಸು ಮಾಡಿದ್ದರು. ಆದರೆ ಆದು ಆಗಿರಲಿಲ್ಲ. ಇದೀಗ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸ ಸಿದ್ದರಾಮಯ್ಯನವರ ಮುಂದಿದೆ. ಸಿಎಂ ಜೂನ್ ತಿಂಗಳ ಒಳಗಾಗಿ ಈ ಕೆಲಸ ಮಾಡಲಿದ್ದು, ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಸಿಗಲಿದೆ” ಎಂದರು.

“ಮೈಸೂರು ಹಾಗೂ ಬೆಂಗಳೂರು ವಿಭಾಗದಲ್ಲಿ ಆದಿ ಕರ್ನಾಟಕ ಸಮುದಾಯದ ಜನರು ಮಾದಿಗ ಸೌಲಭ್ಯಕ್ಕೆ ಮುಂದಾಗಿದ್ದು, ಅದು ಗೊಂದಲ ಮೂಡಿಸಿದೆ. ಒಳ ಮೀಸಲಾತಿ ಕುರಿತು ಸಮೀಕ್ಷೆ ಸಮಯ ವಿಸ್ತರಣೆಯಾಗಿದ್ದು, ಎಲ್ಲರನ್ನೂ ನೋಂದಾಯಿಸುವ ಕೆಲಸ ನಡೆಯುತ್ತಿದೆ. ಯಾರೊಬ್ಬರೂ ಈ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆ ಮುಗಿಯುವವರೆಗೂ ಸಮಾಜದ ಮುಖಂಡರು ಕಾರ್ಯಕ್ರಮಗಳನ್ನು ಮಾಡಬಾರದು. ಎಲ್ಲರೂ ಊರಲ್ಲೇ ಇದ್ದು, ಎಲ್ಲರನ್ನೂ ನೋಂದಾಯಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕೇಂದ್ರದ ಅಸಹಕಾರದ ನಡುವೆ ರಾಜ್ಯ ಸರ್ಕಾರ ಉತ್ತಮ ಆಡಳಿತ: ಕೆಪಿಸಿಸಿ ವಕ್ತಾರ ಗಣಿಹಾರ

“ಒಳಮೀಸಲಾತಿ ಅನುಷ್ಠಾನ ಆದ ಮೇಲೆಯೇ ಹೊಸ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕಳೆದ ವರ್ಷ ಅಕ್ಟೋಬ‌ರ್ 10 ರಿಂದ ಹೊಸ ಹುದ್ದೆಗಳ ಭರ್ತಿಯನ್ನು ನಿಲ್ಲಿಸಲಾಗಿದೆ. ಈ ಬಾರಿ ಜೂನ್‌ನಲ್ಲಿ ಒಳಮೀಸಲಾತಿ ಸೌಲಭ್ಯ ಅನುಷ್ಠಾನ ಆಗಲೇಬೇಕು. ಅದನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಮೇಶ ಆಸಂಗಿ, ಸುಭಾಷ ಕಾಲೇಬಾಗ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...