ವಿಜಯಪುರ | ಜೆಎಂಜೆ ಸಮಾಜ ಸೇವಾ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Date:

ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸ್ಮರಿಸಲು ಮತ್ತು ಸಮಾನತೆ-ಹಕ್ಕುಗಳನ್ನು ಪ್ರತಿಪಾದಿಸಲು ಈ ದಿನವನ್ನು ಆಚರಿಸಲಾಗುತ್ತದೆ. 1975ರ ಮಾರ್ಚ್ 8ರಂದು ವಿಶ್ವಸಂಸ್ಥೆಯು ಅಧಿಕೃತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿವರ್ಷ ಮಾರ್ಚ್ 8ರಂದು ಪ್ರಪಂಚದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿಕೊಂಡು ಬರಲಾಗಿದೆ ಎಂದು ಜೆಎಂಜೆ ಸಮಾಜ ಸೇವಾ ಸಂಸ್ಥೆ ಕಾರ್ಯಕರ್ತರು ಹೇಳಿದರು.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯ ಎಲ್ಲ ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಜೆಎಂಜೆ ಸಮಾಜ ಸೇವಾ ಸಂಸ್ಥೆಯಿಂದ ಮಾರ್ಚ್‌ 6ರಂದು ದೇವರ ಹಿಪ್ಪರಗಿ ತಾಂಡದ ಸೇವಾಲಾಲ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಮಹಿಳೆಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“49ನೇ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತ್ತಿದ್ದೇವೆ. ಮಹಿಳೆಯರಿಗೂ ಸಮಾನ ಸ್ಥಾನಮಾನ ಸಿಗಬೇಕು ಎಂಬುದು ಈ ದಿನದ ಉದ್ದೇಶವಾಗಿದೆ. ಮಹಿಳಾ ಸಬಲೀಕರಣದ ಮಹತ್ವ ಸಾರಲು, ಲಿಂಗ ಪಕ್ಷಪಾತ ಮುಕ್ತ ಸಮಾಜವನ್ನು ನಿರ್ಮಿಸಲು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆಯನ್ನು ಸ್ಮರಿಸಲು, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಿಂದನೆಯನ್ನು ತಡೆಯಲು ಜಾಗೃತಿ ಮೂಡಿಸಲು ಮತ್ತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿವಾದಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಮಹಿಳೆಯರ ಹಕ್ಕುಗಳ ಬಗ್ಗೆ ಗಮನ ಸೆಳೆಯಲು ಮತ್ತು ಜನರಿಗೆ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ವಿಶ್ವಸಂಸ್ಥೆ ಒಂದು ಥೀಮ್(ಘೋಷವಾಕ್ಯ) ನೀಡುತ್ತದೆ. ‘ಪ್ರಗತಿಯ ವೇಗವರ್ಧನೆಗೆ ಮಹಿಳೆಯ ಮೇಲೆ ಹೂಡಿಕೆ’ ಎಂಬುದು ಈ ವರ್ಷದ ಥೀಮ್ ಆಗಿದೆ. ಮಹಿಳೆಯರಿಗೆ ಪ್ರಯೋಜನವಾಗುವಂತಹ ಆರೋಗ್ಯ, ಶಿಕ್ಷಣ, ಉದ್ಯೋಗ ಇತ್ಯಾದಿ ಯೋಜನೆಗಳನ್ನು ಹೆಚ್ಚಿಸಿ, ಈ ಯೋಜನೆಗಳ ಮೇಲೆ ಹಣಕಾಸು ಹೂಡಿಕೆ ಮಾಡುವುದಾಗಿದೆ. ಹೀಗೆ ಮಾಡಿದಾಗ ಮಹಿಳೆಯರ ಬೆಳವಣಿಗೆ ಜತೆಗೆ ಆಯಾ ದೇಶದ ಪ್ರಗತಿ ಕೂಡ ಹೆಚ್ಚು ವೇಗ ಪಡೆದುಕೊಳ್ಳುತ್ತದೆ ಎಂಬುದು ಈ ಥೀಮ್‌ನ ಅರ್ಥವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ; ವರದಿ ಬಹಿರಂಗಗೊಳಿಸದಂತೆ ಬೆದರಿಕೆ 

ಡಾ ಪ್ರಭುಗೌಡ ಪಾಟೀಲ ವೈದ್ಯರು, ದಾನಾಬಾಯಿ, ಚವ್ಹಾಣ ಪಟ್ಟಣ ಪಂಚಾಯತ್ ಸದ್ಯಸರು ಹಾಗೂ ಸಿಸ್ಟರ್, ಹೃದಯಾ, ಜೆಎಂಜೆ ಕಾರ್ಯ ಸಯೋಂಜಕರು ಮತ್ತು ಎಲ್ಲ ಮಹಿಳಾ ಸ್ವಸಹಾಯ ಒಕ್ಕೂಟಗಳ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿ ಪೋತ್ಸಾಹದ ಹಿತನುಡಿಗಳನ್ನು ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...