ವಿಜಯಪುರ | ಬೆಳೆ ಹಾನಿ ಸಮೀಕ್ಷೆ ಮಾಡುವಲ್ಲಿ ಬೇಜವಾಬ್ದಾರಿ; ತಕ್ಷಣ ಕ್ರಮಕ್ಕೆ ರೈತ ಸಂಘ ಒತ್ತಾಯ

Date:

ಬೆಳೆ ಹಾನಿಯ ಜಿಪಿಎಸ್ ಮಾಡುವವರು ತುಂಬಾ ಬೇಜವಾಬ್ದಾರಿಯ ಕೆಲಸ ಮಾಡುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸುವ ಕುರಿತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಗೌಡ ಹಿರೇಗೌಡ ಆಗ್ರಹಿಸಿದರು.

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

“ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಾಗಿ ರೈತರ ಬೆಳೆಗಳು ಸಂಪೂರ್ಣ ನಷ್ಟಕ್ಕೀಡಾಗಿವೆ. ಸರ್ಕಾರದ ಇಲಾಖೆಗಳು ಕೇವಲ ಹೆಚ್ಚು ಹಾನಿಯಾದ ಬೆಳೆಗಳನ್ನಷ್ಟೇ ಪರಿಗಣನೆ ಮಾಡುತ್ತಿವೆ. ಸರಕಾರ ತಕ್ಷಣವೇ ಬೆಳೆ ಹಾನಿಯಾದ ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ವಿಮಾ ಕಂಪನಿಗಳು ಕೆಲವು ಕಡೆ ಭ್ರಷ್ಟಾಚಾರದಲ್ಲಿ ತೊಡಗಿವೆ ಎಂಬ ಆರೋಪ ಇದೆ. ಇವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024-25ನೇ ಸಾಲಿನಲ್ಲಿ ದ್ರಾಕ್ಷಿ ಬೆಳೆ ವಿಮೆ ತುಂಬಿದಂತಹ ರೈತರಿಗೆ ಇದುವರೆಗೂ ಸರ್ಕಾರದಿಂದಗಲೀ, ವಿಮಾ ಕಂಪನಿಯಿಂದಾಗಲಿ ಯಾವುದೇ ಪರಿಹಾರ ದೊರಕಿಲ್ಲ. 2024-25ನೇ ಸಾಲಿನಲ್ಲಿ ಹವಮಾನ ವೈಪರೀತ್ಯದಿಂದ ದ್ರಾಕ್ಷಿ ಇಳುವರಿಯಲ್ಲಿ ಕುಂಠಿತವಾಗಿದೆ. ಆದಕಾರಣ ತಕ್ಷಣವೇ ಪರಿಹಾರ ಕೊಡಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

“ಪ್ರತಿ ಟನ್ ಕಬ್ಬಿನ ಬೆಲೆಯನ್ನು 4000 ರೂಗಳಿಗೆ ಸರ್ಕಾರ ನಿಗದಿಗೊಳಿಸಬೇಕು. ಕೇಂದ್ರ ಸರ್ಕಾರವಾಗಲೀ ಅಥವಾ ರಾಜ್ಯ ಸರ್ಕಾರವಾಗಲಿ ಸಕ್ಕರೆ ಕಾರ್ಖಾನೆಗಳ ಮೇಲೆ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ರೈತಪರ ಆಡಳಿತ ಮಾಡುವುದಾದರೆ ತಕ್ಷಣವೇ ರೈತರ ಸಾಲ ಮನ್ನಾ ಮಾಡಬೇಕು. ಸಹಕಾರ ಸಂಘಗಳಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ರೈತರು ಉಳಿದರೆ ದೇಶ ಉಳಿಯುವುದು, ಇಲ್ಲದ ಹೋದರೆ ಇಡೀ ದೇಶವೇ ಹಸಿವಿನಿಂದ ನರಳಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ನೂರಾರು ರೈತ ಸಂಘಟನೆಯ ಮುಖಂಡರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...