ವಿಜಯಪುರ | ಅಂಬೇಡ್ಕರ್‌ ವಿರುದ್ಧ ಸಾರ್ವಜನಿಕವಾಗಿ ಅವಹೇಳನ ಮಾಡಿರುವುದು ಖಂಡನೀಯ

Date:

ಬಾಬಾ ಸಾಹೇಬರ ಹೆಸರಿನ ಮೇಲೆ ಕೆಲವರು ಸಾರ್ವಜನಿಕವಾಗಿ ದೌರ್ಜನ್ಯ ಮಾಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಅಂಬೇಡ್ಕರ್‌ ವಿರುದ್ಧ ಸಾರ್ವಜನಿಕವಾಗಿ ಅವಹೇಳನ ಮಾಡಿರುವುದು ಖಂಡನೀಯ. ದಲಿತ ಸಮುದಾಯದ ಮುಖಂಡರ ಮೇಲೆ ಇಂತಹ ಘಟನೆಗಳು ಸಂಭವಿಸಿದಂತೆ ಪೊಲೀಸ್‌ ಇಲಾಖೆ ನೋಡಿಕೊಳ್ಳಬೇಕು ಎಂದು ಪರಶುರಾಮ ದಿಂಡಿವಾರ್ ಹೇಳಿದರು.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.

“ಪಟ್ಟಣದಲ್ಲಿರುವ ಬಸವ ಭವನಕ್ಕೆ(ಕಲ್ಯಾಣ ಮಂಟಪ) ಬುದ್ಧ, ಬಸವ, ಅಂಬೇಡ್ಕರ್ ಅವರ ಹೆಸರಿಡುವಂತೆ ಕಳೆದ ಸಭೆಯಲ್ಲಿ ಗಮನಕ್ಕೆ ತರಲಾಗಿತ್ತಾದರೂ ಯಾವುದೇ ಕ್ರಮ ಆಗಿಲ್ಲ. ಕೂಡಲೇ ಬಸವ ಭವನಕ್ಕೆ ಬುದ್ಧ, ಬಸವ, ಅಂಬೇಡ್ಕರ್ ಅವರ ಹೆಸರಿಡುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಸಭೆಯಲ್ಲಿ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮೀಣ ಭಾಗದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಅನುದಾನ ದುರ್ಬಳಕೆಯಾಗುತ್ತಿದೆ. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಗಮನ ಹರಿಸಬೇ‌ಕು” ಎಂದರು.

ಡಿಎಸ್ಎಸ್ ಜಿಲ್ಲಾ ಸಂಚಾಲಕ ಅಶೋಕ ಚಲವಾದಿ ಮಾತನಾಡಿ, “ಹೆಬ್ಬಾಳ ಸೇರಿದಂತೆ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು. ಜಗತ್ತಿಗೆ ಸಮಾನತೆ ಸಂದೇಶ ಸಾರಿದ ಬಸವೇಶ್ವರರ ಜನ್ಮಸ್ಥಳದಲ್ಲಿ ಇಂತಹ ಘಟನೆ ನಡೆಯುತ್ತಿರುವುದು ವಿಪರ್ಯಾಸ. ತಾಲೂಕಿನ ಎಲ್ಲ ಹಾಸ್ಟೆಲ್‌ಗಳಲ್ಲಿ ರಾತ್ರಿ ಹೊತ್ತಲ್ಲಿ ವಾರ್ಡನ್‌ಗಳು ವಾಸ್ತವ್ಯ ಹೂಡುವಂತೆ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, “ಜಾತಿನಿಂದನೆ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚಾಗುತ್ತಿವೆ. ಜಾತಿನಿಂದನೆ ಪ್ರಕರಣಗಳು ದುರುಪಯೋಗವಾಗುತ್ತಿವೆ. ದಲಿತ ಸಮುದಾಯದ ಮುಖಂಡರು ಇದರ ಬಗ್ಗೆ ಗಮನ ಹರಿಸಬೇಕು” ಎಂದು ಹೇಳಿದರು.

“ಹಾಸ್ಟೆಲ್ ಮಕ್ಕಳನ್ನು ಹೋರಾಟಕ್ಕೆ ಬಳಸಿಕೊಳ್ಳದಂತೆ ಪ್ರತಿ ಹಾಸ್ಟೆಲ್‌ಗೆ ಲಿಖಿತ ರೂಪದಲ್ಲಿ ತಿಳಿಸಲಾಗುವುದು” ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜು ಹಿರೇಮನಿ ಸಭೆ ಗಮನಕ್ಕೆ ತಂದರು.

ಈ ಸುದ್ದಿ ಓದಿದ್ದೀರಾ? ಗೃಹಸಚಿವ ಅಮಿತ್ ಶಾ ವಿರುದ್ಧ ಜ.9ರಂದು‌ ʼವಿಜಯನಗರ ಬಂದ್’ಗೆ ಕರೆ

ಐಪಿ ಗುರುಶಾಂತ ದಾಸ್ಯಾಳ, ತಾಲೂಕು ಪಂಚಾಯತಿ ಪ್ರತಿನಿಧಿ ರಾಜೇಶ್ವರಿ ಆಸಂಗಿ, ಉಪ ತಹಶೀಲ್ದಾರ್ ಬಾಬಾ ಜಾಗಿರದಾರ, ಮುಖಂಡರಾದ ಅರವಿಂದ ಸಾಲವಾಡಗಿ, ಗುರು ಗುಡಿಮನಿ,‌ ಮಹಾಂತೇಶ ಸಾಸಬಾಳ, ತಮ್ಮಣ್ಣ ಕಾನಗಡ್ಡಿ, ವೈಎಸ್ ಮ್ಯಾಗೇರಿ, ಮುತ್ತು ಬಾಗೇವಾಡಿ, ರಾಜು ದಿಂಡಿವಾರ, ಮಹಾಂತೇಶ ಚಕ್ರವರ್ತಿ, ಪ್ರಕಾಶ ಗುಡಿಮನಿ, ಗಂಗಾಧರ್ ಆರ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...