ವಿಜಯಪುರ | ಮಹಿಳೆ ಆತ್ಮರಕ್ಷಣೆ ಕಲೆ ಕಲಿಯುವುದು ಅನಿವಾರ್ಯ: ಪ್ರೊ. ನಾಮದೇವಗೌಡ

Date:

ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಇಂದಿನ ಕಾಲಘಟ್ಟದಲ್ಲಿ ಆತ್ಮರಕ್ಷಣೆಯ ಕಲೆಯನ್ನು ಅನಿವಾರ್ಯವಾಗಿ ಕಲಿಯಬೇಕು, ಅದು ಅಗತ್ಯವೂ ಹೌದು ಎಂದು ವಿಜಯಪುರ ಮಹಿಳಾ ವಿವಿಯ ಹಿಂದಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ನಾಮದೇವಗೌಡ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ಕ್ರೀಡಾ ನಿರ್ದೇಶನಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ʼಪಿ ಎಂ ಉಷಾʼ ಯೋಜನೆಯಡಿಯಲ್ಲಿ ʼಆತ್ಮರಕ್ಷಣಾ ತರಬೇತಿ ಕಾರ್ಯಾಗಾರʼವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಧ್ಯಾಪಕ ಪ್ರೊ. ಶ್ರೀನಿವಾಸ ಮಾತನಾಡಿ, “ವಿದ್ಯಾರ್ಥಿಗಳು ಆತ್ಮರಕ್ಷಣೆಯ ಕಲೆಯನ್ನು ಅಳವಡಿಸಿಕೊಳ್ಳುವುದರಿಂದ ಆತ್ಮವಿಶ್ವಾಸದೊಂದಿಗೆ ಸಾಮಾಜಿಕವಾಗಿ ಸದೃಢರಾಗಲು ಸಾಧ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಡಾ. ಕಿರಣ ಜಿ ಎನ್ ಮಾತನಾಡಿ, “ಮಹಿಳೆಯರ ಸುರಕ್ಷತೆಗೆ ಆತ್ಮರಕ್ಷಣೆಯ ತರಬೇತಿ ಅತ್ಯಂತ ಅಗತ್ಯವಾಗಿದ್ದು, ಈ ಕೌಶಲ್ಯಗಳನ್ನು ಕಲಿಯುವುದರಿಂದ ಸುರಕ್ಷಿತ ಮತ್ತು ಬಲಿಷ್ಠ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಪ್ರಮುಖವಾಗಿ ಸಹಕರಿಸಬಹುದು” ಎಂದು ಅಭಿಪ್ರಾಯಪಟ್ಟರು.

ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಮಾತನಾಡಿ, “ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಘಟನೆಗಳ ಉದಾಹರಣೆಗಳನ್ನು ನೀಡುತ್ತಾ, ಆತ್ಮರಕ್ಷಣೆಯ ಕೌಶಲ್ಯಗಳ ಅರಿವು ಇಲ್ಲದಿದ್ದರೆ ಮಹಿಳೆಯರಿಗೆ ಗಂಭೀರ ತೊಂದರೆಗಳು ಎದುರಾಗಬಹುದು. ಈ ಹಿನ್ನೆಲೆಯಲ್ಲಿ ನಮ್ಮ ವಿಶ್ವವಿದ್ಯಾನಿಲಯವು ಎಲ್ಲಾ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕೌಶಲ್ಯವನ್ನು ಕಡ್ಡಾಯವಾಗಿ ಕಲಿಸುತ್ತಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ: ʼಸರ್ಕಾರಿ ಶಾಲೆʼ ಉಳಿಸುವಂತೆ AIDSO ಆಗ್ರಹ

ಕಾರ್ಯಾಗಾರದಲ್ಲಿ ಆತ್ಮರಕ್ಷಣಾ ತರಬೇತುದಾರ ದುರ್ಗೇಶ ಆಹೇರಿ, ಅಪಾಯದ ಸಂದರ್ಭದಲ್ಲಿ ಮಹಿಳೆಯರು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ಹುಲಿಕಟ್ಟಿ, ಲಕ್ಷ್ಮಿ ನಾಯಕ, ಅಶ್ವಿನಿ ಆರ್.ಎಸ್ ಸೇರಿದಂತೆ ವಿಶ್ವವಿದ್ಯಾನಿಲಯದ ಸುಮಾರು 200 ವಿದ್ಯಾರ್ಥಿಗಳು ಮತ್ತು ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...