ವಿಜಯಪುರ | ಸಚಿವರ, ಶಾಸಕರ ವೇತನ ಭತ್ಯೆ ಹೆಚ್ಚಳ ಮಾಡಿರುವುದು ವಿಪರ್ಯಾಸದ ಸಂಗತಿ: ಭಗವಾನ ರೆಡ್ಡಿ

Date:

“ರಾಜ್ಯ ವಿಧಾನಸಭೆಯು ಸಚಿವರ, ಶಾಸಕರ, ಸಭಾಧ್ಯಕ್ಷರ ಮತ್ತು ಸಚೇತಕರ ವೇತನ ಮತ್ತು ಭತ್ಯೆಯನ್ನು ಹೆಚ್ಚಳ ಮಾಡುವ ಮಸೂದೆಯನ್ನು ಸರ್ವಾನುಮತದಿಂದ ಮಂಜೂರು ಮಾಡಿರುವುದು ಅತ್ಯಂತ ವಿಪರ್ಯಾಸದ ಸಂಗತಿ‌” ಎಂದು ಎಸ್‌ಯುಸಿಐ ಕಮ್ಯುನಿಸ್ಟದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನ ರೆಡ್ಡಿ  ಬೇಸರ ವ್ಯಕ್ತಪಡಿಸಿದರು.

ವಿಜಯಪುರ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರಿವ ಅವರು “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸನ ಸಭೆಯ ಸದಸ್ಯರು ರಾಜ್ಯದ ಜನಸಾಮಾನ್ಯರ ಹಿತ ಕಾಪಾಡಲು ಅವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆಂಬುದು ಆಶಯವಾಗಿದೆ. ಆದರೆ ಇಂದು ಬಹುತೇಕ ಶಾಸಕರು ಕೋಟ್ಯಾಧಿಪತಿಗಳಾಗಿದ್ದಾರೆ” ಎಂದರು.

“ಜನ ಸಾಮಾನ್ಯರು ನಿರ್ಗತಿಕರಾಗುತ್ತಿದ್ದಾರೆ. ವಿವಿಧ ರಂಗಗಳ ಕಾರ್ಮಿಕರ ಕನಿಷ್ಠ ವೇತನವನ್ನು ಕಳೆದ 7 ವರ್ಷಗಳಿಂದ ಏರಿಕೆ ಮಾಡಿಲ್ಲ. ಶಿಕ್ಷಣ, ಆರೋಗ್ಯ, ವಸತಿ, ಕುಡಿಯುವ ನೀರು  ಮುಂತಾದ ಅಗತ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುತ್ತಿಲ್ಲ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ.  ನಿವೃತ್ತ ನೌಕರರಿಗೆ ಪಿಂಚಣಿ ನೀಡಲು ಹಣಕಾಸಿನ ಕೊರತೆಯ ಕಾರಣ ನೀಡಲಾಗುತ್ತದೆ. ದಿನನಿತ್ಯ ದುಡಿಯುವ ಆಶಾ, ಅಂಗನವಾಡಿ, ಬಿಸಿಯೂಟ ಮೊದಲಾದ ಸ್ಕೀಂ ನೌಕರರಿಗೆ ಪುಡಿಗಾಸಿನ ಸಂಬಳವನ್ನೂ ನೀಡಲಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಪರಿಸ್ಥಿತಿಯಲ್ಲಿ ಜನರ ಸಂಕಷ್ಟ ನಿವಾರಣೆಗೆ ದುಡಿಯ ಬೇಕಾದ, ಜನರ ತೆರಿಗೆಯನ್ನು ಜನ ಕಲ್ಯಾಣಕ್ಕೆ ಬಳಸಬೇಕಾದ ಸಚಿವ, ಶಾಸಕರು ಯಾವುದೇ ಪಕ್ಷ ಬೇಧವಿಲ್ಲದೆ ಸರ್ವಾನುಮತದಿಂದ ತಮ್ಮ ವೇತನಗಳನ್ನು ದುಪ್ಪಟ್ಟು ಮಾಡಿಕೊಂಡಿರುವುದು ಕ್ರೂರ ಹಾಸ್ಯವಲ್ಲದೆ ಇನ್ನೇನೂ ಅಲ್ಲ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಈ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಹೊಂದಿಲ್ಲ ಎಂಬುದನ್ನು ರಾಜ್ಯದ ಜನತೆ ಗಮನಿಸಬೇಕು. ಇಂತಹ ವಿಲಾಸ, ದುಂದುವೆಚ್ಚವನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...