ವಿಜಯಪುರ | ಪಠ್ಯದ ಜೊತೆಗೆ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅವಶ್ಯಕ | ಬಿ ಜಿ ಮೂಲಿಮನಿ

Date:

ವಿಶ್ವವಿದ್ಯಾಲಯಗಳು ಪಠ್ಯದ ಜೊತೆಗೆ ಜೀವನದ ಮೌಲ್ಯಗಳನ್ನು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು ಅತ್ಯವಶ್ಯಕ ಎಂದು ಕಲಬುರ್ಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಬಿ ಜಿ ಮೂಲಿಮನಿ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ ಕೋರುವ ‘ಪುತ್ರಿಯರ ದಿನ-ಸ್ಪಂದನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼಪಠ್ಯ ಚಟುವಟಿಕೆಗಳ ಜೊತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯ ಮಾಡುವುದು ವಿವಿಗಳ ಕೆಲಸ. ಮಹಿಳೆ ಒಂದು ದೇಶದ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದ್ದು, ಆಕೆಯ ಶಕ್ತಿಯು ದೇಶದ ಪ್ರಗತಿಗೆ ದೊಡ್ಡ ಕೊಡುಗೆಯನ್ನು ನೀಡುತ್ತದೆ. ಜೀವನದಲ್ಲಿ ಸರ್ವಧರ್ಮ ಸಮನ್ವಯವನ್ನು ಅಳವಡಿಸಿಕೊಳ್ಳುವುದರಿಂದ ಸಮಾನತೆ ಮತ್ತು ಶಾಂತಿಯ ದಾರಿಯನ್ನು ಅನುಸರಿಸಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ ಬಿ ಕೆ ತುಳಸಿಮಾಲ ಮಾತನಾಡಿ, ಎರಡು ವರ್ಷಗಳ ಕಾಲ ಕೇವಲ ತರಗತಿಯಲ್ಲಿ ಕಲಿಯುವುದಷ್ಟೇ ಸಾಕಾಗುವುದಿಲ್ಲ. ಈ ಅವಧಿಯಲ್ಲಿ ಕೆಲವು ಕೌಶಲ್ಯಗಳು ಮತ್ತು ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಇಂದಿನ ಸಂದರ್ಭದಲ್ಲಿ ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಕಣ್ಮರೆಯಾಗುತ್ತಿರುವುದರಿಂದ ಇವುಗಳನ್ನು ಅಳವಡಿಸಿಕೊಳ್ಳುವ ಕಡೆಗೆ ಹೆಚ್ಚು ಗಮನಹರಿಸಬೇಕು. ಜೀವನದಲ್ಲಿ ಕೇವಲ ಪಠ್ಯದ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ, ನೈತಿಕ ಮತ್ತು ಜೀವನದ ಮೌಲ್ಯಗಳು ಅತ್ಯಂತ ಮುಖ್ಯವಾದವು. ಈ ಬೆಳವಣಿಗೆಗೆ ವಿಶ್ವವಿದ್ಯಾನಿಲಯವು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದು, ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗುತ್ತದೆ. ಮುಂಬರುವ ದಿನಗಳಲ್ಲಿ ನೀವು ಈ ವಿವಿಯ ಹೆಮ್ಮೆಯ ರಾಯಭಾರಿಗಳಾಗಿ, ಸಮಾಜಕ್ಕೆ ಮಾದರಿಯಾಗುವತ್ತ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ವಿವಿಧ ಕೇಂದ್ರಗಳು ಮತ್ತು ನಿರ್ದೇಶನಾಲಯಗಳು ಹಾಗೂ ಗ್ರಂಥಾಲಯ ಸೌಲಭ್ಯಗಳ ಬಗೆಗೆ ಆಯಾ ಕೇಂದ್ರಗಳ ಮುಖ್ಯಸ್ತರು ಮಾಹಿತಿ ನೀಡಿದರು. ಪ್ರೊ ಬಿ ಜಿ ಮೂಲಿಮನಿ, ಅವರು ಕಡು ಬಡವ ವಿದ್ಯಾರ್ಥಿನಿಯರಿಗೆ ಶಿಷ್ಯವೇತನಕ್ಕಾಗಿ ದೇಣಿಗೆಯಾಗಿ 10 ಲಕ್ಷ ರೂಗಳ ಚೆಕ್ಕನ್ನು ಹಸ್ತಾಂತರಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಸೂಕ್ತ ಕ್ರಮಕ್ಕೆ ಶರಣು ಶಿಂಧೆ ಆಗ್ರಹ

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ ಎಚ್ ಎಂ ಚಂದ್ರಶೇಖರ್, ವಿವಿಯ ಸಿಂಡಿಕೇಟ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು. ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...