ವಿಜಯಪುರ | ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಪ್ರತಿಭಟನೆ

Date:

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಶೀಘ್ರ ಭರ್ತಿಗೆ ಕ್ರಮ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಹಲವು ಯುವಕರು ಪ್ರತಿಭಟನೆ ನಡೆಸಿ ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಪ್ರಧಾನಿ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧೀವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಮಾತನಾಡಿದ ಸಮಿತಿಯ ಮುಖಂಡ ಸಿದ್ದಲಿಂಗ ಬಾಗೇವಾಡಿ, “ರಾಜ್ಯ ಸರ್ಕಾರದ ಸುಮಾರು 28 ಇಲಾಖೆಗಳಲ್ಲಿ 2.86 ಲಕ್ಷ ಉದ್ಯೋಗಗಳು ಖಾಲಿ ಇದ್ದು, ಶೀಘ್ರ ಭರ್ತಿ ಮಾಡಿಕೊಳ್ಳಬೇಕು. ಉದ್ಯೋಗಗಳ ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು. ಕಳೆದ ಹಲವಾರು ವರ್ಷಗಳಿಂದ ನೇಮಕಾತಿ ಇಲ್ಲದಿರುವುದರಿಂದ ಕನಿಷ್ಠ ಐದು ವರ್ಷಗಳ ವಯಸ್ಸು ಸಡಲಿಕೆ ಮಾಡಬೇಕು. ನಿರೋದ್ಯಗವು ಭೀಕರ ಸ್ವರೋಪ ಪಡೆದಿದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರಕಾರದ ನಾನಾ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಮಾಡುತ್ತಿಲ್ಲ. ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಮಾಡುವವರು ವಿರುದ್ಧ ಯುವಕರು ಹೋರಾಟ ಮಾಡಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಪ್ರವಾಹದಲ್ಲಿ ಕೊಚ್ಚಿಹೋದ ಬದುಕು, ಕಣ್ಣೀರೊರೆಸುವುದೇ ಸರ್ಕಾರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಮುಖಂಡ ಶ್ರೀನಾಥ ಪೂಜಾರಿ ಮಾತನಾಡಿ, “ಯುವಜನತೆ ತಮ್ಮ ಹಕ್ಕುಗಳಿಗೆ ಒಗ್ಗಟ್ಟಾಗಿ ಹೋರಾಟ ಮಾಡುವುದು ಈ ಗಳಿಗೆಯ ಅವಶ್ಯಕತೆಯಾಗಿದೆ. ಇಲ್ಲವಾದಲ್ಲಿ ನಮ್ಮನ್ನಾಳುವವರು ಯುವಕರನ್ನು ಮೂಲೆಗುಂಪು ಮಾಡುತ್ತಾರೆ” ಎಂದು ಯುವಕರನ್ನು ಎಚ್ಚರಿಕೆ ನೀಡಿದರು.

ಈ ವೇಳೆ ಸಿದ್ರಾಮ ಹಿರೇಮಠ, ಉದ್ಯೋಗಾಕಾಂಕ್ಷಿ ಅಶ್ವಿನಿ, ಯಲ್ಲಾಲಿಂಗ ಮಾತನಾಡಿದರು. ವಿಶ್ವ ಶಹಪುರ, ಗಿರೀಶ ಚೌವಣ, ರಾಜು ರಾಠೋಡ, ಜೈರೆಡ್ಡಿ, ಶಾರದಾ, ದೀಪಾ, ನಾಗಮ್ಮ, ಮಂಜುಳಾ, ಅನಿಲ್, ಹರೀಶ, ರಾಜು, ಅರ್ಜುನ್, ಮಲ್ಲು ಕಾಮನಕೇರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...