ವಿಜಯಪುರ | ʼದಲಿತರ, ಮಹಿಳೆಯರ ಜ್ಞಾನದ ಬೆಳಕು ಜ್ಯೋತಿರಾವ್‌ ಫುಲೆʼ

Date:

ಅಜ್ಞಾನದ ಅಂಧಕಾರವನ್ನು ಒಡೆದೋಡಿಸಲು ಮಹಿಳೆ ಮತ್ತು ದಲಿತರಿಗೆ ಜ್ಞಾನದ ಬೆಳಕನ್ನು ನೀಡಲು ಮುಂದಾದ ಮಹಾ ಪುರುಷ ಜ್ಯೋತಿರಾವ್ ಫುಲೆ ಎಂದು ಸಾಹಿತಿ, ಸಾಮಾಜಿಕ ಚಿಂತಕಿ ಸರಸ್ವತಿ ಹೇಳಿದರು.

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್, ಜಾಗೃತ ಕರ್ನಾಟಕ ಹಾಗೂ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ನಡೆದ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, “ಮೌಢ್ಯ, ಕಂದಾಚಾರಗಳ ವಿರುದ್ಧ ಸತತ ಹೋರಾಟ ನಡೆಸಿದರು. ಅವರ ಚಿಂತನೆಗಳು ಇಂದಿನ ಎಲ್ಲಾ ಸಮುದಾಯಗಳಿಗೆ ಪ್ರಸ್ತುತವಾಗಿವೆ. ಜ್ಞಾನ ಪ್ರಸಾರದ ಕಾರ್ಯಕ್ಕೆ ಅವರು ಅನೇಕರ ಬೆಂಬಲ ಮತ್ತು ಸಹಕಾರದೊಂದಿಗೆ ಸಂಘಟಿತ ಪ್ರಯತ್ನಕ್ಕೆ ಮುಂದಾದರು” ಎಂದರು.

ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಶ್ರೀನಾಥ್ ಪೂಜಾರಿ ಮಾತನಾಡಿ, “ವಿಜಯಪುರ ಜಿಲ್ಲೆ ದಿನದಿಂದ ದಿನಕ್ಕೆ ಕೋಮುದ್ವೇಷಕ್ಕೆ ಬಲಿಯಾಗುತ್ತಿದೆ. ಇದರ ವಿರುದ್ಧ ಬಲಿಷ್ಠವಾದ ಜನಾಂದೋಲನ ಬೆಳೆಸುವುದು ಅನಿವಾರ್ಯವಾಗಿದೆ. ಬಹುತ್ವ ಭಾರತವನ್ನು ನಾವೆಲ್ಲ ಜಾರಿ ಮಾಡಲು ಶ್ರಮ ವಹಿಸಬೇಕಾಗಿದೆ. ಅಂಬೇಡ್ಕರ್ ಚಿಂತನೆಗಳನ್ನು ನಮ್ಮೊಳಗೂ ಬೆಳೆಸಿಕೊಳ್ಳಲು ಇಂತಹ ಹಬ್ಬಗಳು ಪೂರಕವಾಗಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 11 at 4.58.14 PM

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾ. ಫ್ರಾನ್ಸಿಸ್ ಜೋಸೆಫ್ ಮಾತನಾಡಿ, “ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟವರು ಜ್ಯೋತಿಬಾ ಫುಲೆ. ಇಂದು ಮಹಿಳೆಯರು ಎಲ್ಲಾ ರಂಗದಲ್ಲಿ ಮುಂದಡಿ ಇಡುತ್ತಿರುವುದಕ್ಕೆ ಮುಖ್ಯ ಕಾರಣ ಅಂಬೇಡ್ಕರರ ಸಂವಿಧಾನ. ಸಂವಿಧಾನಕ್ಕೆ ಅಪಚಾರ ಮಾಡುವವರ ವಿರುದ್ಧ ನಾವು ಒಗ್ಗೂಡಿ ಹೋರಾಡುವ ಅವಶ್ಯಕತೆ ಇದೆ. ತಳ ಸಮುದಾಯಗಳನ್ನು ಮುನ್ನಡೆಗೆ ತರುವ ನಿಟ್ಟಿನಲ್ಲಿ ಜ್ಯೋತಿಬಾ ಫುಲೆ ಅವರ ಶ್ರಮ ಎಷ್ಟಿದೆ ಅಷ್ಟೇ ಫಾತಿಮಾ ಶೇಖ್ ಅವರದೂ ಕೂಡ ಇದೆ” ಎಂದು ಸ್ಮರಿಸಿದರು.‌

ಇದನ್ನೂ ಓದಿ: ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

ಕಾರ್ಯಕ್ರಮದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಫಾದರ್ ಟಿಯೋಲ್ ಮಾಚಾದೊ, ದಲಿತ ಸಂಘರ್ಷ ಸಮಿತಿ ನಾಗವಾರ ಬಣ್ಣದ ಚೆನ್ನು ಕಟ್ಟಿಮನಿ, ಹಿರಿಯ ಪತ್ರಕರ್ತರಾದ ಅನಿಲ ಹೊಸಮನಿ,ಮಹೇಶ್ವರಿ ಮಠಪತಿ, ಮಾನವ ಬಂದತ್ವ ವೇದಿಕೆಯ ಪ್ರಭುಗೌಡ ಪಾಟೀಲ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ, ಅಕ್ಷಯ ಅಜಮನಿ, ಮಾದೇಶ ಚಲವಾದಿ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರು ದಲಿತ ವಿದ್ಯಾರ್ಥಿ ಪರಿಷತ್ತಿನ ನಾಯಕರು ಜಾಗೃತ ಕರ್ನಾಟಕದ ನಾಯಕರು ಇತರರು ಇದ್ದರು.

WhatsApp Image 2025 04 11 at 4.58.15 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...