ವಿಜಯಪುರ | ನಾಮಕಾವಸ್ಥೆಗಷ್ಟೇ ಇದೆ ಕಣಕಾಲ ಗ್ರಂಥಾಲಯ

Date:

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದಲ್ಲಿರುವ ಡಿಜಿಟಲ್‌ ಗ್ರಂಥಾಲಯದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಆದರೆ, ಗ್ರಂಥಾಲಯದಲ್ಲಿ ಸ್ವಚ್ಛತೆ ಇಲ್ಲದಿರುವ ಕಾರಣ ಸರಿಯಾಗಿ ಬಳಕೆ ಆಗುತ್ತಿಲ್ಲ. ಕೇವಲ ಹೆಸರಿಗಷ್ಟೆ ಗ್ರಂಥಾಲಯ ಇದೆ ಎಂದು ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಕೋಟಿ, “ಗ್ರಾಮದ ಡಿಜಿಟಲ್ ಗ್ರಂಥಾಲಯವು ಸರಿಯಾಗಿ ಬಳಕೆ ಆಗುತ್ತಿಲ್ಲ. ಸಾರ್ವಜನಿಕರಿಗೆ ತಲುಪದೆ ಹೆಸರಿಗಷ್ಟೆ ಗ್ರಂಥಾಲಯವಾಗಿ ಉಳಿದಿದೆ. ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳಿದ್ದರೂ ಓದಲು ಜನರೇ ಇಲ್ಲದಂತಾಗಿದೆ. ಗ್ರಂಥಾಲಯವನ್ನು ಸ್ವಚ್ಛವಾಗಿಟ್ಟುಕೊಂಡಿಲ್ಲ. ಪತ್ರಿಕೆಗಳು ಸಹ ಗ್ರಂಥಾಲಯಕ್ಕೆ ಬರುತ್ತಿಲ್ಲ” ಎಂದರು.

“ಸಾರ್ವಜನಿಕರು ಗ್ರಂಥಾಲಯಕ್ಕೆ ಬಂದು ಪುಸ್ತಕ ಒದಬೇಕಾದರೇ, ಮೊದಲಿಗೆ ಗ್ರಂಥಾಲಯಕ್ಕೆ ದಿನ ನಿತ್ಯ ಪತ್ರಿಕೆಗಳನ್ನು ತರಿಸಬೇಕು. ಇದರಿಂದ ಜನರು ಮೊದಲಿಗೆ ಓದಲು ಆಕ‍ರ್ಷಿತರಾಗುತ್ತಾರೆ. ಪತ್ರಿಕೆ ಓದಲು ಬಂದು ಪುಸ್ತಕಗಳನ್ನು ಓದಲು ಪ್ರಾರಂಭಿಸುತ್ತಾರೆ. ಗ್ರಂಥಾಲಯದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಓದುವ ಹಂಬಲವನ್ನು ಹೆಚ್ಚು ಮಾಡಬೇಕು. ಗ್ರಾಮದಲ್ಲಿ ಪ್ರತಿವಾರ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಎಲ್ಲ ವಾರ್ಡ್‌ಗಳ ಚರಂಡಿ ಸ್ಚಚ್ಚಗೊಳಿಸಿ; ಕರವೇ ಆಗ್ರಹ

“ಗ್ರಂಥಾಲಯದಲ್ಲಿ ಇಷ್ಟೊಂದು ಸಮಸ್ಯೆ ಇದ್ದರೂ ಸಹ ಗ್ರಾಮ ಪಂಚಾಯತ್ ಸದಸ್ಯರು, ಪಿಡಿಓ ಅಧಿಕಾರಿಗಳು ಒಂದು ಬಾರಿಯೂ ಗ್ರಂಥಾಲಯದ ಕಡೆಗೆ ಬಂದು ಸಮಸ್ಯೆ ಏನು ಎಂದು ನೋಡಿಲ್ಲ, ಕೂಡಲೆ ಗ್ರಂಥಾಲಯ ಸಮಗ್ರ ಅಭಿವೃದ್ಧಿ ಮಾಡಬೇಕು. ಕಣಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತ್ ಸರ್ವಸದಸ್ಯರು ಈ ಬಗ್ಗೆ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುತ್ತವೆ” ಎಂದು ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...