ವಿಜಯಪುರ | ಕರ್ನಾಟಕ ಶಾಂತಿಯ ತೋಟ, ಕನ್ನಡ ನಮ್ಮ ಉಸಿರು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

Date:

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಎಲ್ಲರೂ ಜಾತಿ, ಮತ, ಧರ್ಮ ಮೀರಿ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದೇವೆ. ಕನ್ನಡ ಕೇವಲ ಭಾಷೆಯಾಗಿರದೆ ಪ್ರತಿಯೊಬ್ಬರ ಉಸಿರಾಗಿದೆ ಎಂದು ವಿಜಯಪುರದ ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು.

ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆ, ವಿಜಯಪುರ ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಲ್ಲಿ ಧರ್ಮ, ಜಾತಿಗಳನ್ನೂ ಮೀರಿದ ಬಂಧವೊಂದಿದೆ. ಅದೇ ಬಂಧದ ಆಧಾರದಲ್ಲಿ ಎಲ್ಲರೂ ಪ್ರೀತಿ ವಾತ್ಸಲ್ಯದಿಂದ ಬದುಕೋಣ” ಎಂದರು.

ಟಿನಾ ಝವಿಯರ್ ಮಾತನಾಡಿ, “ನಾನು ಬೇರೆ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕಳೆದ 20 ವರ್ಷದಿಂದ ಜೀವನ ನಡೆಸುತ್ತಿದ್ದೇನೆ. ಕನ್ನಡ ಭಾಷೆ ಮತ್ತು ಸಂಸ್ಕೃತಿ ಮೇಲೆ ಅಪಾರವಾದ ಪ್ರೀತಿ ಇದೆ. ನನ್ನ ರಕ್ತದಲ್ಲಿ ಸೇರಿಕೊಂಡಿದೆ ಎಲ್ಲರು ಸೇರಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ ಕೆವಿನ ಸಸಿಕ್ವೇರಾ ಮಾತನಾಡಿ, “ಕನ್ನಡ ಭಾಷೆ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಕರ್ನಾಟಕದಲ್ಲಿ ಕನ್ನಡವನ್ನು ಬೇರೆ ಬೇರೆ ರೀತಿಯಲ್ಲಿ ಮಾತನಾಡುತ್ತಾರೆ. ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಹಿರಿಯರನ್ನು ಸ್ವರಿಸಬೇಕಾಗಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಕನ್ನಡ ಭಾಷೆ ಇನ್ನು ಶ್ರೀಮಂತವಾಗಿ ಬೆಳೆಯಲಿ” ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಶೋಭಾ ವಾಲಿಕಾರ,ರವಿ ಕಟ್ಟಿಮನಿ, ಶ್ರೀಕಾಂತ ಕಾಠೋಡ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...