ವಿಜಯಪುರ | ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವಂತೆ ಕೆಇಎ ಆದೇಶ; ಎಐಡಿಎಸ್‌ಒ ಖಂಡನೆ

Date:

ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಹೇಳಿದ್ದಾರೆ.

ವಿಜಯಪುರ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಎಂಜಿನಿಯರಿಂಗ್ ಪ್ರವೇಶ ಪಡೆಯಲು ಡಿಪ್ಲೊಮಾ ವಿದ್ಯಾರ್ಥಿಗಳು ಬರೆಯಬೇಕಿರುವ ಡಿಪ್ಲೊಮಾ ಸಿಇಟಿ(DCET) ಪರೀಕ್ಷೆಗಳನ್ನು ಈ ಬಾರಿಯಿಂದ ಆನ್‌ಲೈನ್‌ ಮೂಲಕ ನಡೆಸಲು ನಿರ್ಧರಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ನಿಲುವು ಅತ್ಯಂತ ಖಂಡನಾರ್ಹ. ಬಹುಪಾಲು, ಬಡ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳು ಡಿಪ್ಲೊಮಾ ಕೋರ್ಸ್ ಸೇರುತ್ತಾರೆ. ಈ ಬಡ ವಿದ್ಯಾರ್ಥಿಗಳೂ ಕೂಡಾ ಡಿಪ್ಲೊಮಾ ಮೂಲಕ ಎಂಜಿನಿಯರಿಂಗ್ ಪಡೆಯುವುದು ಸುಲಭವೆಂಬ ಕಾರಣಕ್ಕೆ ಪ್ರವೇಶ ಪಡೆದಿರುತ್ತಾರೆ. ಈ ಪ್ರವೇಶ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ಮಾತ್ರ ನಡೆಸಿದರೆ ಈ ಮಕ್ಕಳಿಗೆ, ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತದೆ” ಎಂದರು.

“ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕರು, ಕೇವಲ 18,000 ಮಂದಿ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯುವುದರಿಂದ ಆನ್‌ಲೈನ್‌ ಡಿಸಿಇಟಿ ನಡೆಸುವುದಾಗಿ ಹೇಳಿದ್ದಾರೆ. 18,000 ಕಡಿಮೆ ಸಂಖ್ಯೆಯಲ್ಲ. ಇದು ಈ ವಿದ್ಯಾರ್ಥಿಗಳ ಕುರಿತು ಸರ್ಕಾರದ ನಿಲುವನ್ನು ತೋರಿಸುತ್ತದೆ. ಅದರಲ್ಲೂ, ಪರೀಕ್ಷೆಗೆ ಒಂದು ತಿಂಗಳು ಬಾಕಿ ಇರುವಾಗ, ಯಾವುದೇ ಪ್ರಜಾತಾಂತ್ರಿಕ ಪ್ರಕ್ರಿಯೆಯನ್ನು ಪಾಲಿಸದೇ ಹಠಾತ್ತನೆ ಇಂತಹ ಮೂಲಭೂತ ಬದಲಾವಣೆಗೆ ಕೈಹಾಕಿರುವುದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ನೆಮ್ಮದಿಯ ಬದುಕು ಬೇಕೋ ಬಿಜೆಪಿಯ ಸುಳ್ಳು ಬೇಕೊ ನೀವೇ ನಿರ್ಧರಿಸಿ: ಅಪ್ಪಾಜಿ ನಾಡಗೌಡ

“ಎಂಜಿನಿಯರಿಂಗ್‌ ಪ್ರವೇಶಾತಿಗೆ ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಸುವ ಆದೇಶವನ್ನು ರಾಜ್ಯ ಸರ್ಕಾರ ಹಾಗೂ ಪ್ರಾಧಿಕಾರ ಕೂಡಲೇ ಹಿಂಪಡೆಯಬೇಕು. ಹಿಂದಿನ ರೀತಿಯಲ್ಲಿಯೇ ಪ್ರವೇಶ ಪರೀಕ್ಷೆಗಳನ್ನು ನಡೆಸಬೇಕು” ಎಂದು ಕಾವೇರಿ ರಜಪೂತ ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...