ವಿಜಯಪುರ | ವಕೀಲನ ಸಾವು ಅಪಘಾತವಲ್ಲ, ಹತ್ಯೆ: ಎಸ್‌ಪಿ ಋಷಿಕೇಶ್‌ ಸೋನಾವಾಣೆ

Date:

ವಿಜಯಪುರ ನಗರದಲ್ಲಿ ಆಗಸ್ಟ್ 8ರಂದು ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ್ದದ್ದಲ್ಲ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಹತ್ಯೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಐವರನ್ನು ಬಂಧಿಸಿರುವ ಪೊಲೀಸರು, ತಲೆ ಮರೆಸಿಕೊಂಡಿರುವ ಇತರರ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್‌ ಸೋನಾವಾಣೆ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಗರದಲ್ಲಿ ಆಗಸ್ಟ್‌ 8ರಂದು ಸಂಜೆ 5-30ರ ಸುಮಾರಿಗೆ ನಡೆದಿದ್ದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿ ಸಿಲುಕಿ ಸುಮಾರು ಎರಡೂವರೆ ಕಿಮೀ ದೂರಕ್ಕೆ ಎಳೆದೊಯ್ದ ಘಟನೆಯಲ್ಲಿ ನಗರದ ಯುವವಕೀಲ ರವಿ ಮೇಲಿನಕೇರಿ ಮೃತಪಟ್ಟಿದ್ದ” ಎಂದು ತಿಳಿಸಿದರು.

“ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಇದು ಅಪಘಾತದಿಂದ ಆಗಿರುವ ಸಾವಲ್ಲ, ಬೆಚ್ಚಿಬೀಳುವಂತ ಸಂಚು ರೂಪಿಸಿ ಹತ್ಯೆ ನಡೆಸಿದ್ದಾರೆಂಬುದು ತಿಳಿದುಬಂದಿದೆ. ಪ್ರಕರಣಕ್ಕೆ ಕುರಿತಂತೆ ಲಭ್ಯವಾದ ಸುಳಿವುಗಳನ್ನು ಆಧರಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಧಿತರನ್ನು ತುಳಸಿರಾಮ ಹರಿಜನ, ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಎಲ್ಲರೂ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದಾರೆ. ಎಲ್ಲರ ಮೇಲೂ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹತ್ಯೆ, ಹತ್ಯೆ ಯತ್ನ, ದರೋಡೆ, ಜೀವ ಬೆದರಿಕೆಯಂಥ ಪ್ರಕರಣ ದಾಖಲಾಗಿವೆ.

“ಬಂಧಿತ ಆರೋಪಿಗಳು ಇತರರೊಂದಿಗೆ ಸೇರಿ ವಕೀಲ ರವಿ ಕೋರ್ಟ್‌ ನಿಂದ ಮನೆಗೆ ಹೊರಟಿದ್ದಾಗ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ವಾಹನದಲ್ಲಿ ಬಂದು ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ಬಳಿಕ ಸುಮಾರು ಎರಡೂವರೆ ಕಿ.ಮೀ. ವರೆಗೆ ರವಿಯನ್ನು ರಸ್ತೆಯಲ್ಲೇ ಎಳೆದೊಯ್ದ ಕಾರಣ ರವಿ ಸ್ಥಳದಲ್ಲೇ ಮೃತಪಟ್ಟಿದ್ದ” ಎಂದು ಮಾಹಿತಿ ನೀಡಿದರು.

“ವಕೀಲ ರವಿ ತನ್ನ ಸಹೋದರರ ಜೊತೆ ಸೇರಿ ಸುಮಾರು 4-5 ತಿಂಗಳ ಹಿಂದೆ ತುಳಸಿರಾಮ ಹರಿಜನ ಎಂಬವನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದಲ್ಲದೇ ಸುಮಾರು 20 ದಿನಗಳ ಹಿಂದೆ ಇದೇ ಅಲೆಕ್ಸ್ ಗೊಲ್ಲರ ಎಂಬವನನ್ನು ಅಪಹರಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದ. ಇದರಿಂದ ದ್ವೇಷ ಸಾಧಿಸುತ್ತಿದ್ದ ಈ ಹತ್ಯೆ ಸಂಚಿನ ಸೂತ್ರದಾರ ತುಳಸಿರಾಮ. ತನ್ನ ಸ್ನೇಹಿತರಾದ ಪ್ರಕರಣದ ಬಂಧಿತ ಆರೋಪಿಗಳೊಂದಿಗೆ ಸೇರಿ ಅಪಘಾತ ಎಂಬಂತೆ ಬಿಂಬಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ” ಎಂದು ಎಸ್‌ಪಿ ವಿವರಿಸಿದರು.

“ಹತ್ಯೆಗೆ ಬಳಸಿರುವ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರು ಕೂಡ ಜೂಜಾಟದಲ್ಲಿ 1 ಲಕ್ಷ ರೂ.ಗೆ ಸಚಿನ್ ಎಂಬವನಿಂದ ಆರೋಪಿಗಳು ಕಿತ್ತುಕೊಂಡಿದ್ದ ಕಾರು ಎಂಬುದು ಪತ್ತೆಯಾಗಿದೆ. ಇದಲ್ಲದೇ ವಕೀಲ ರವಿ ಕೋರ್ಟ್‍ನಿಂದ ಮನೆಗೆ ಮರಳುವ ಕುರಿತು ನಿಗಾ ಇರಿಸಿ ಮಾಹಿತಿ ನೀಡಲು ಇಬ್ಬರು ಬೈಕ್‍ನಲ್ಲಿ ತಿರುಗುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಹೊರಬಿದ್ದಿದೆ.
ಪ್ರಾಥಮಿಕ ಹಂತದ ತನಿಖೆಯಲ್ಲಿ ಇಡೀ ಪ್ರಕರಣದಲ್ಲಿ ಇನ್ನೂ ಕೆಲವರು ಈ ಸಂಚಿನಲ್ಲಿ ಪಾಲ್ಗೊಂಡಿರುವ ಮಾಹಿತಿ ಇದೆ. ಅವರೆಲ್ಲ ತಲೆ ಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವನ್ನು ತ್ವರಿತವಾಗಿ ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

“ಹೀಗಾಗಿ ಡಿಎಸ್‌ಪಿ ಬಸವರಾಜ ಎಲಿಗಾರ ನೇತೃತ್ವದಲ್ಲಿದ್ದ ಗೋಲಗುಂಬಜ್ ಸಿಪಿಐ ಮಹಾಂತೇಶ ಮಠಪತಿ, ಗಾಂಧಿಚೌಕ ಠಾಣೆ ಸಿಪಿಐ ಪ್ರದೀಪ ತಳಕೇರಿ ಹಾಗೂ ತಂಡದ ಪೊಲೀಸರ ಕಾರ್ಯಕ್ಕೆ ಬಹುಮಾನ ಘೋಷಿಸಲಾಗಿದೆ. ಸ್ವಾತಂತ್ರ್ಯೋತ್ಸವ ದಿನದಂದು ನಡೆಯುವ ಪರೇಡ್ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು” ಎಂದು ಹೇಳಿದರು.

ಎಎಸ್‌ಪಿ ಶಂಕರ ಮಾರಿಹಾಳ, ಡಿಎಸ್‌ಪಿ ಬಸವರಾಜ ಎಲಿಗಾರ, ಸಿಪಿಐ ಪ್ರದೀಪ ತಳಕೇರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...