ವಿಜಯಪುರ ಲೋಕಸಭಾ ಬಿಎಸ್‌ಪಿ ಅಭ್ಯರ್ಥಿ ಕಲ್ಲಪ್ಪ ರಾಮಚಂದ್ರ ತೊರವಿ ನಾಮಪತ್ರ ಸಲ್ಲಿಕೆ

Date:

ಭಾರತ ದೇಶದ ಪ್ರಜೆಗಳು ಇದೀಗ ನಡೆಯಲಿರುವ 17ನೇ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಮುಂದಿನ ಐದು ವರ್ಷ ಕಾಲ ಆಳಲಿರುವ ಸರ್ಕಾರವನ್ನು ಆಯ್ಕೆ ಮಾಡಲು ಸಜ್ಜಾಗಿ ನಿಂತಿದ್ದಾರೆ. ಕಳೆದ 77 ವರ್ಷ ಕಾಲದಲ್ಲಿ, 16 ಬಾರಿ ವೋಟು ಹಾಕಿ ಸರ್ಕಾರಗಳನ್ನು ರಚಿಸಿರುವ ನಾವು ಇಂದು ಎಲ್ಲಿದ್ದೇವೆ? ನಮ್ಮ ಬದುಕಿನಲ್ಲಿ ಏನಾದರೂ ಪ್ರಗತಿ ಆಗಿದೆಯೇ? ಎಂಬುದನ್ನು ಅರಿಯಬೇಕಿದೆ ಎಂದು ವಿಜಯಪುರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಕಲ್ಲಪ್ಪ ರಾಮಚಂದ್ರ ತೊರವಿ ಹೇಳಿದರು.

ವಿಜಯಪುರದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿ, “ದೇಶದ ಯುವಜನತೆಯು ಹಿಂದೆಂದಿಗಿಂತಲೂ ಇಲ್ಲದಂತಹ ಹೆಚ್ಚಿನ ನಿರುದ್ಯೋಗವನ್ನು ಇಂದು ಎದುರಿಸುತ್ತಿದೆ. ಇಂಟರ್ ನ್ಯಾಷನಲ್ ಲೇಬರ್ ಆರ್ಗನೈಸೇಷನ್ ನೀಡಿರುವ ‘ದಿ ಇಂಡಿಯ ಎಂಪ್ಲಾಯ್‌ಮೆಂಟ್ ರಿಪೋರ್ಟ್ 2024ರ ಪ್ರಕಾರ ‘ಭಾರತದ 83% ಯುವಜನತೆಯು (7.8 ದಶಲಕ್ಷ) ನಿರುದ್ಯೋಗಿಗಳಾಗಿದ್ದಾರೆ. ಕಾಂಗ್ರೆಸ್ ಸರ್ಕಾರವು ಆರಂಭಿಸಿದ ಖಾಸಗೀಕರಣವನ್ನು ತೀವ್ರಗೊಳಿಸಿದ ಬಿಜೆಪಿಯಿಂದಾಗಿ ಸಾರ್ವಜನಿಕ ಉದ್ದಿಮೆಗಳು ಬಂದ್ ಆದುದರ ಪರಿಣಾಮವಿದು. ಅಂತೆಯೇ, ಶಿಕ್ಷಣವು ಶೇ.70ಕ್ಕಿಂತ ಹೆಚ್ಚಾಗಿ, ಶ್ರೀಮಂತರ ಹಿಡಿತದಲ್ಲಿ ಸಿಕ್ಕಿಬಿದ್ದಿದೆ” ಎಂದು ಹೇಳಿದರು.

“ಸರ್ಕಾರಿ ಶಾಲೆ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳೂ ಕೂಡ ಖಾಸಗಿ ಸಂಸ್ಥೆಗಳಂತೆ ವ್ಯಾಪಾರಿ ಕೇಂದ್ರಗಳಾಗುತ್ತಿವೆ. ವಿದ್ಯಾರ್ಥಿ ನಿಲಯಗಳು ಸರ್ಕಾರದ ಅನುದಾನವಿಲ್ಲದೆ ಸೊರಗಿವೆ. ಎಸ್‌ಸಿ/ಎಸ್‌ಟಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಇಳಿಮುಖವಾಗಿಲ್ಲ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯವೂ ಎಗ್ಗಿಲ್ಲದೆ ನಡೆಯುತ್ತಲಿದೆ. ದೌರ್ಜನ್ಯಕೋರ ದುರುಳರು ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ರಾಜಾರೋಷದಿಂದ ತಿರುಗಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಆಸ್ಪತ್ರೆಗಳು ಕನಿಷ್ಟ ಸೌಲಭ್ಯಗಳಿಲ್ಲದೆ ಬಡರೋಗಿಗಳ ಪಾಲಿಗೆ ಮೃತ್ಯುಕೂಪಗಳಾಗಿದ್ದರೆ, ಖಾಸಗಿ ಆಸ್ಪತ್ರೆಗಳು ಎಲ್ಲೆಡೆ ನಾಯಿಕೊಡೆಗಳಂತೆ ಹಬ್ಬಿರುವ ವ್ಯಾಪಾರದ ಅಂಗಡಿಗಳಾಗಿವೆ. ಸಣ್ಣಪುಟ್ಟ ರೈತರು ತಮ್ಮ ಬೆಳೆಗಳಿಗೆ ಕನಿಷ್ಟ ಬೆಲೆ ಕೋರಿ, ಬೀದಿಯಲ್ಲಿ ನಿಂತು ಹೋರಾಡುತ್ತಿದ್ದರೆ, ಕೃಷಿಕಾರ್ಮಿಕರು ಭೂಹೀನರಾಗಿ ಕೂಲಿಗಾಗಿ, ಕೂಳಿಗಾಗಿ ಹತಾಶೆಯಿಂದ ಊರೂರು ಅಲೆಯುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆಗಳೂ ಕೂಡಾ ಗಗನಕ್ಕೇರಿರುವ ಕಾರಣ ಮೇಲ್ಜಾತಿಯವರನ್ನೂ ಒಳಗೊಂಡಂತೆ ಎಲ್ಲ ಬಡವರು ಒಪ್ಪತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ” ಎಂದರು.

“ಅಪೌಷ್ಟಿಕತೆಯಿಂದ ನರಳುವ ಮತ್ತು ಸಾಯುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಹಾಗಾದರೆ, ಇಲ್ಲಿಯತನಕ ಈ ಸರ್ಕಾರಗಳು ಮಾಡಿದ್ದಾದರೂ ಏನು? ಮನುವಾದಿಗಳ ಈ ರಾಜಕೀಯವನ್ನು ಅರ್ಥಮಾಡಿಕೊಳ್ಳಲು ನಮಗೆ ವಿಶೇಷ ಜ್ಞಾನವೇನು ಬೇಕಿಲ್ಲ. ಆದಕಾರಣ ಎಲ್ಲ ಭಾರತೀಯರೂ ಸ್ವಾಭಿಮಾನ ಮತ್ತು ಸ್ವಾವಲಂಬನೆಯಿಂದ ಬದುಕಲು ತಾವೆಲ್ಲರೂ ಬಿಎಸ್‌ಪಿಯ ಅಭ್ಯರ್ಥಿಯಾದ ತನ್ನನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಲೋಕಸಭಾ ಕ್ಷೇತ್ರ | ಮೊದಲ ದಿನ ಐದು ಮಂದಿ ಅಭ್ಯರ್ಥಿಗಳಿಂದ ಆರು ನಾಮಪತ್ರ ಸಲ್ಲಿಕೆ

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಮುನಿಯಪ್ಪ, ಡಾ. ದಸ್ತಗಿರಿ ಮುಲ್ಲಾ, ಯಶವಂತ ಪೂಜಾರಿ, ಸುರೇಶ್ ಚೋರಿ, ಜಿಲ್ಲಾಧ್ಯಕ್ಷ ಬೊಮ್ಮನಜೋಗಿ, ರಾಜು ಗುಬ್ಬೇವಾಡ, ಕಾಶಿನಾಥ್ ದೊಡ್ಡಮನಿ, ಚಂದ್ರಶೇಖರ ಜೇವೂರ, ಸಂಜಯ್ ಚಲವಾದಿ, ರಮೇಶ ಅರಗೋಳಿ, ಚಂದ್ರಕಾಂತ ಕಾಂಬಳೆ , ದಯಾನಂದ ಪಿರಾಗ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...