ವಿಜಯಪುರ | ದಲಿತರು, ಅಲ್ಪಸಂಖ್ಯಾತರ ಮೇಲಿನ ನಿರಂತರ ದೌರ್ಜನ್ಯಕ್ಕೆ ಹಲವು ಸಂಘಟನೆಗಳ ಖಂಡನೆ

Date:

ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಿರಂತರವಾಗಿ ಆಗುತ್ತಿರುವ ದೌರ್ಜನ್ಯಗಳು ಹಾಗೂ ಅವರ ಮೇಲಿನ ಸುಳ್ಳು ಆರೋಪಗಳನ್ನು ಖಂಡಿಸಿ ವಿಜಯಪುರ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ವಿಜಯಪುರ ಜನರ ವೇದಿಕೆ, ಬಿಜಾಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ, ಬಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ, ವಿಜಯಪುರ ನಗರ ಗೃಹ ಕಾರ್ಮಿಕರ ಯೂನಿಯನ್ ಹಾಗೂ ಸಹ ಸಂಘಟನೆಗಳ ಕಾರ್ಯಕರ್ತರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

“ಛತ್ತೀಸ್‌ಗಢದಲ್ಲಿ ಕಳೆದ ತಿಂಗಳು ರೈಲಿನಲ್ಲಿ ಪ್ರಯಾಣಿಸಿದ್ದ ಕ್ರೈಸ್ತ ಸಮುದಾಯದ ಇಬ್ಬರು ಸಿಸ್ಟರ್‌ಗಳನ್ನು ಮತಾಂತರಕ್ಕೆ ಯತ್ನ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಎರಡ್ಮೂರು ದಿನ ಜೈಲಿನಲ್ಲಿಟ್ಟು ಅವರಿಗೆ ಕಿರುಕುಳ ನೀಡಲಾಗಿತ್ತು. ಆದರೆ, ಯಾವುದೇ ಪುರಾವೆಗಳು ಇಲ್ಲ ಮತ್ತು ಸುಳ್ಳು ದೂರಿನಡಿ ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಬಂಧನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಸುಳ್ಳು ದೂರ ನೀಡಿದ ದುಷ್ಟಶಕ್ತಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರೇಬಿಕ್ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಬೋಧನೆ: ಅಭಿಯಾನಕ್ಕೆ ಚಾಲನೆ

“ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರು, ದಲಿತ, ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ಹಾಗೂ ಪದೇ ಪದೆ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಇವುಗಳನ್ನು ಸಹಿಸಲಾಗುವುದಿಲ್ಲ. ಮುಂದಿನ ದಿನದಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸುನೀಲ ಫರ್ನಾಂಡಿಸ್, ಕೇವಿನ್ ಸಿಕ್ವೆರಾ, ನಿರ್ಮಲಾ ಹೊಸಮನಿ, ಅಕ್ರಂ ಮಾಶ್ಯಾಳಕರ, ಸುನೀಲ ಅಂದ್ರಾದೆ, ಪೀಠರ್ ಅಲೆಕ್ಸಾಂಡರ್, ಫರ್ಜಾನಾ ಜಮಾದಾರ, ರಾಜೇಶ್ವರಿ ಮಠಪತಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...