ವಿಜಯಪುರ | ಡಿ.6ರಂದು ಅಂಬೇಡ್ಕರ್‌ ಪರಿನಿಬ್ಬಾಣ ದಿನದ ಪ್ರಯುಕ್ತ ಬೃಹತ್‌ ಕ್ಯಾಂಡಲ್‌ ಮಾರ್ಚ್

Date:

ವಿಜಯಪುರ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಡಿ.6ರಂದು ನಡೆಯಲಿರುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೋತದಾರ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಪರಿಷತ್ ಮುಖಂಡರಾದ ಅಕ್ಷಯ ಕುಮಾರ್ ಅಜಮನಿ ಹಾಗೂ ಮಾದೇಶ ಚಲವಾದಿ ಇಂದು ಕಾರ್ಯಕ್ರಮದ ಪೋಸ್ಟರ್‌ ಬಿಡುಗಡೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೋತದಾರ ಮಾತನಾಡಿ, “ಡಿ.6ರಂದು ಜಿಲ್ಲೆಯ ವಿದ್ಯಾರ್ಥಿ ಮತ್ತು ಯುವಜನರ ನೇತೃತ್ವದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಯಲಿದೆ. ವಿಜಯಪುರ ನಗರದ ಶಿವಾಜಿ ಸರ್ಕಲ್‌ನಿಂದ ಅಂಬೇಡ್ಕರ್ ಸರ್ಕಲ್ ವರೆಗೆ ಸಾವಿರಾರು ವಿದ್ಯಾರ್ಥಿಗಳು ಕ್ಯಾಂಡಲ್ ಹಿಡಿದು ಶಾಂತಿಯುತ ರ್ಯಾಲಿಯಲ್ಲಿ ಭಾಗವಹಿಸಲಿದ್ದು, ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್; ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ

ಈ ವಿನೂತನ ಕಾರ್ಯಕ್ರಮದಲ್ಲಿ ಜಿಲ್ಲೆಯ ಉನ್ನತಾಧಿಕಾರಿಗಳು, ಚಿಂತಕರು, ಬರಹಗಾರರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಎಲ್ಲಾ ಅನುಯಾಯಿಗಳು, ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು, ವಿದ್ಯಾರ್ಥಿ–ಯುವಜನರು, ಮಹಿಳೆಯರು, ಹಿರಿಯರು ಮತ್ತು ನಗರದ ಶೋಷಿತ ಸಮುದಾಯದ ಎಲ್ಲ ವರ್ಗದ ಜನರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ವಿನಂತಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...