ಸೆಪ್ಟೆಂಬರ್ 9ರಂದು ವಿಜಯಪುರ ನಗರದಲ್ಲಿ ಬೃಹತ್ ಜನಜಾಗೃತಿ ರ‍್ಯಾಲಿ ನಡೆಸಲು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮುಂದಾಗಿದ್ದು, ಈ ಮೂಲಕ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ.
ನಗರದ ಬಿ.ಆರ್. ಅಂಬೇಡ್ಕರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಜಿಲ್ಲೆಯ ವಿವಿಧ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕ ಸಭೆಯಲ್ಲಿ, ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಈ ಕುರಿತು ಮಾತನಾಡಿದ ಬಿ. ಭಗವಾನ್ ರೆಡ್ಡಿ, “ಹೋರಾಟ ಸಮಿತಿಯಿಂದ ಇಲ್ಲಿಯವರೆಗೆ ಹಲವು ಚಟುವಟಿಕೆಗಳು ನಡೆದಿವೆ. ಅದರಂತೆ ಈ ಬಾರಿ ಬೃಹತ್ ರ‍್ಯಾಲಿ ನಡೆಸಲಾಗುವುದು” ಎಂದರು.
ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ
ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ, ಹಿರಿಯ ಪತ್ರಕರ್ತ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಲಲಿತಾ ಬಿಜ್ಜರಗಿ, ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನ ಬಟಗಿ, ಅಣ್ಣಾರಾಯ ಇಳಿಗೇರಾ, ಭರತ್ ಕುಮಾರ ಎಚ್ ಟಿ, ಲಕ್ಷ್ಮಣ ಹಂದ್ರಾಳ, ಜಿ ಜಿ ಗಾಂಧಿ, ಚಂದ್ರಶೇಖರ ಘಂಟೆಪ್ಪಗೋಳ, ಶುಭಾಶ ಯಾದವಾಡ, ಎ ಐ ಡಿ ಎಸ್ ಒ ನಾ ಕಾವೇರಿ ರಜಪೊತ, ಯುವಜನ ಸಂಘಟನೆ ಸಿದ್ದರಾಮ ಹಿರೇಮಠ ಹಾಗೂ ಜಿಲ್ಲೆಯ ಪ್ರಗತಿಪರ ಸಂಘಟನೆ ಮುಖಂಡರು ಭಾಗವಹಿಸಿದ್ದರು.





