ವಿಜಯಪುರ | ಶಿಕ್ಷಣ ಕ್ಷೇತ್ರಕ್ಕೆ ಮೌಲಾನ ಆಜಾದ್ ಅವರ ಕೊಡುಗೆ ಅಪ್ರತಿಮ: ರಾಮು ಸಜ್ಜನ

Date:

ಮೌಲಾನಾ ಆಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಎಂಜಿವಿಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಆಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಮೌಲಾನಾ ಆಜಾದ್ ಅವರ ಜನ್ಮದಿನದ ಅಂಗವಾಗಿ ʼರಾಷ್ಟ್ರೀಯ ಶಿಕ್ಷಣ ದಿನಾಚರಣೆʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಹಿಳೆಯರು ಶಿಕ್ಷಣ ಪಡೆಯುವುದರ ಮೂಲಕ ಸಮಾಜದ ಪ್ರಗತಿಗೆ ಪೂರಕವಾಗಬೇಕು. ಶಿಕ್ಷಣವು ಕೇವಲ ಜ್ಞಾನವಲ್ಲ, ಅದು ಸಾಮಾಜಿಕ ಬದಲಾವಣೆಗೆ ದಾರಿ ತೋರಿಸುವ ಅತ್ಯಂತ ಮಹತ್ವದ ಅಂಶವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ವಿದ್ಯಾರ್ಥಿನಿಯರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮೌಲಾನಾ ಆಜಾದ್ ಅವರ ಜೀವನಾಧಾರಿತ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿನಿಯರು ಇಂತಹ ಚಟುವಟಿಕೆಗಳ ಮೂಲಕ ಹೆಚ್ಚಿನ ಜ್ಞಾನವನ್ನು ಪಡೆದುಕೊಂಡು, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಹಾಗೂ ಮಹಿಳಾ ವಿವಿಯ ವಿವಿಧ ವಿಭಾಗಗಳ ವಿಧ್ಯಾರ್ಥಿನಿಯರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...