ವಿಜಯಪುರ ವೈದ್ಯಕೀಯ ಕಾಲೇಜು ಪ್ರಕರಣ; ಸಚಿವ ಶಿವಾನಂದ ಪಾಟೀಲರ ಹೇಳಿಕೆಗೆ ಕಿಸಾನ್ ಸಂಘ ಖಂಡನೆ

Date:

ವಿಜಯಪುರಕ್ಕೆ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದರೆ ಅದಕ್ಕೆ ವಿರೋಧ ಇದೆಯೆಂದು ಹೇಳಿದ ಅವರು ಬಾಗಲಕೋಟೆಗೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಮಾಡಿದರೂ ನಡೆಯುತ್ತಿದೆಯೆಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಬಾಗಲಕೋಟೆ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪ.ಹಿರೇಮಠ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೀಳಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಸರ್ಕಾರ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯು‌ತ್ತೇವೆಂದು ಹೇಳಿದ ಪ್ರಕಾರ ಬಾಗಲಕೋಟೆಗೆ ಈಗಾಗಲೇ ಮಂಜೂರಾತಿ ದೊರೆತು ಪ್ರಾರಂಭದ ಪ್ರಕ್ರಿಯೆಗಳು ನಡೆದಿದ್ದು, ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲರು ಬಾಗಲಕೋಟೆಗೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ತೆರೆಯುವ ಹೇಳಿಕೆ ನೀಡಿರುವುದು ಸಮಂಜಸವಲ್ಲ. ಕೂಡಲೇ ನಿಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಬೆಣ್ಣೆ ಹೊಳೆ ಜಲಪಾತದಲ್ಲಿ ದುರಂತ: ಒಬ್ಬ ವಿದ್ಯಾರ್ಥಿ ನೀರು ಪಾಲು; ಮತ್ತೊಬ್ಬನ ರಕ್ಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ವೇಳೆ ಸರ್ಕಾರ ಬಾಗಲಕೋಟೆಗೆ ಪಿಪಿಪಿ ಮಾದರಿಯ ಕಾಲೇಜು ಸಂಶೋಧನಾ ಆಸ್ಪತ್ರೆ ತೆರೆದರೆ ಬಡ ಹಾಗೂ ಮಧ್ಯಮ ವರ್ಗದ ಜನಾಂಗಕ್ಕೆ ಆರ್ಥಿಕ ಹೊರೆಯಾಗಲಿದ್ದು, ತಕ್ಷಣ ಕೃಷಿ ಮಾರುಕಟ್ಟೆ ಸಚಿವರ ಹೇಳಿಕೆಯಂತೆ ಸರ್ಕಾರ ಯಾವುದೇ ಆಲೋಚನೆ ಮಾಡಬಾರದು. ಹಾಗೆ ಮಾಡಿದ್ದೇ ಆದಲ್ಲಿ ಜಿಲ್ಲೆಯ ಜನರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...