ಬಾಗಲಕೋಟೆ | ಹಲವು ಬೆಳವಣಿಗೆಯ ನಡುವೆ ಮುಧೋಳ ನಗರಸಭೆ ಕಾಂಗ್ರೆಸ್ ತೆಕ್ಕೆಗೆ

Date:

ತೀವ್ರ ಪೈಪೋಟಿಯಿಂದ ಕೂಡಿದ್ದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡನ್ನೂ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ಗಮನಾರ್ಹ ಗೆಲುವು ಸಾಧಿಸಿದೆ. ಒಟ್ಟು 31 ಸ್ಥಾನಗಳನ್ನು ಹೊಂದಿರುವ ಮುಧೋಳ ನಗರಸಭೆಗೆ ನಡೆದ ಚುನಾವಣೆಯಲ್ಲಿ ಗೆಲ್ಲಲು ಮ್ಯಾಜಿಕ್ ಸಂಖ್ಯೆ 17 ಬೇಕಾಗಿತ್ತು.

ಶಾಸಕ, ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದ ಕಾಂಗ್ರೆಸ್ ಪಕ್ಷವು 14 ಸದಸ್ಯರನ್ನು ಹೊಂದಿದ್ದು, ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಕಾಂಗ್ರೆಸ್‌ ನ 3 ಸದಸ್ಯರನ್ನು ತನ್ನತ್ತ ಸೆಳೆದದ್ದು, ಕಾಂಗ್ರೆಸ್‌ಗೆ ಆತಂಕದ ಸ್ಥಿತಿ ತಂದೊಡ್ಡಿತ್ತು. ಆದರೂ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವೂ ತಂತ್ರಗಾರಿಕೆ ನಡೆಸಿ, ಆಪರೇಷನ್ ಹಸ್ತ ಮಾಡುವ ಮೂಲಕ ಬಿಜೆಪಿಯ 4 ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಆ ಮೂಲಕ ಬಿಜೆಪಿಗೆ ತಿರುಗೇಟು ನೀಡಿ 1 ಪಕ್ಷೇತರ ಸದಸ್ಯರ ಬೆಂಬಲ ಗಳಿಸುವ ಮೂಲಕ ಮ್ಯಾಜಿಕ್ ಸಂಖ್ಯೆ 17 ತಲುಪುವಲ್ಲಿ ಯಶಸ್ವಿಯಾಯಿತು. ಈ ತಂತ್ರಗಾರಿಕೆಯ ಫಲವಾಗಿ ಬಿಜೆಪಿ 16 ಸ್ಥಾನ ತಲುಪಿ 1 ಸ್ಥಾನದ ಅಂತರದಿಂದ ಸೋಲು ಅನುಭವಿಸುವಂತಾಯಿತು.

WhatsApp Image 2024 08 26 at 7.06.16 PM

ಮುಧೋಳ ನಗರಸಭೆಗೆ ಕಾಂಗ್ರೆಸ್ ಪಕ್ಷದ ಸುನಂದಾ ಹನಮಂತ ತೇಲಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಸ್ವತಂತ್ರ ಅಭ್ಯರ್ಥಿ ಮೆಹಬೂಬ ಸಾಬ್ ಬಾಗವಾನ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪೂರ ಅವರ ತವರು ಕ್ಷೇತ್ರವಾಗಿದ್ದರಿಂದ ಈ ಗೆಲುವು ತುಂಬಾ ಮಹತ್ವ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಇಬ್ಬರು ಶಾಸಕರಿದ್ದರೂ ದುರಸ್ತಿ ಕಾಣದ ಹಾಗರಗಾ ಮುಖ್ಯ ಹೆದ್ದಾರಿ; ಸ್ಥಳೀಯರಿಂದ ಹಿಡಿಶಾಪ

ಮುಧೋಳ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವುದು ಬಾಗಲಕೋಟೆ ಜಿಲ್ಲೆಯಲ್ಲಿ ತುಂಬಾ ಮಹತ್ವ ಕಂಡುಕೊಂಡಿದೆ. ಚುನಾವಣೆಯಲ್ಲಿ ಎರಡೂ ಪಕ್ಷಗಳು ಸ್ಪರ್ಧಿಸಿದ್ದು, ಅತ್ಯಂತ ನಿಕಟ ಸಂಖ್ಯೆಯ ಬಲ ಹೊಂದಿದ್ದರೂ ಕೆಲ ಕಾಂಗ್ರೆಸ್ ಪಕ್ಷದ ನಾಯಕರು ಸಚಿವ ತಿಮ್ಮಾಪೂರ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಜಿದ್ದಾಜಿದ್ದಿಗೆ ಬಿದ್ದು ಅಂತಿಮವಾಗಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯಿಂದ ಅಂತಿಮವಾಗಿ ಕಾಂಗ್ರೆಸ್ ಗೆಲುವಿಗೆ ಕಾರಣವಾಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಸಚಿವ ಆರ್.ಬಿ.ತಿಮ್ಮಾಪೂರ, ಸಹಕರಿಸಿದ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಮುಖಂಡ ಸಂಜಯ ತಳೇವಾಡ ಹಾಗೂ ಅವಿರತವಾಗಿ ಶ್ರಮಿಸಿದ ಇನ್ನಿತರ ಕಾಂಗ್ರೆಸ್ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...