ವಿಜಯಪುರ | ಮಹಾನಗರ ಪಾಲಿಕೆ; ವಾರ್ಡ್ ಸಮಿತಿ ರಚನೆಗೆ ಅರ್ಜಿ ಆಹ್ವಾನಕ್ಕೆ ಸಾರ್ವಜನಿಕರ ಒತ್ತಾಯ

Date:

ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವಂತೆ ಹಲವು ಸಂಘಟನೆಗಳು ಒತ್ತಾಯ ಮಾಡಿವೆ.

ವಿಜಯಪುರದ ವಾರ್ಡ್ ಸಮಿತಿ ಬಳಗ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಜನ ವೇದಿಕೆ(ಸಿಸಿಎಫ್‌ಎಫ್), ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ ಹಾಗೂ ಕಾರ್ಪೊರೇಷನ್ ಆ್ಯಂಡ್ ಇಂಟಿಗ್ರೇಟೆಡ್ ಆರ್ಗನೈಜೇಷನ್(ಸಿಆರಐಓ) ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

“ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಹಾನಗರ ಪಾಲಿಕೆಯಲ್ಲಿ ಈಗಾಗಲೇ ಆಯುಕ್ತರು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಿ ವಾರ್ಡ್ ಸಮಿತಿ ರಚನೆ ಮಾಡಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ ವಿಜಯಪುರದಲ್ಲಿ ಯಾವುದೇ ಪ್ರಕ್ರಿಯೆಗಳು ನಡೆಯುತ್ತಿಲ್ಲ. ವಿಜಯಪುರ ಆಯುಕ್ತರು ತಡ ಮಾಡದೆ ಕೂಡಲೇ ಅರ್ಜಿ ಆಹ್ವಾನಿಸಿ ಮುಂದಿನ ಪ್ರಕ್ರಿಯೆಗೆ ಚಾಲನೆ ನೀಡಬೇಕು” ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜನ ವೇದಿಕೆ ಹಾಗೂ ಬಿಜಾಪುರ ನಗರ ಸ್ಲಂ ಅಭಿವೃದ್ದಿ ಸಮಿತಿ ಒಕ್ಕೂಟದ ಅಧ್ಯಕ್ಷ ಮುತ್ತಣ್ಣ ಭೋವಿ ಮಾತನಾಡಿ, “ಪ್ರಸ್ತುತ ದಿನದಲ್ಲಿ ವಿಜಯಪುರ ನಗರದ ಪ್ರತಿಯೊಂದು ವಾರ್ಡ್‌ಗಳಲ್ಲಿ ನೀರು, ರಸ್ತೆ, ಒಳಚರಂಡಿ, ಬೀದಿ ದೀಪದಂತಹ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸಾರ್ವಜನಿಕರು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆಯ್ಕೆಯಾದ ಕಾರ್ಪೊರೇಟರ್‌ಗಳು ಅನುದಾನ ತಂದು ಸಮಸ್ಯೆಗಳನ್ನು ಬಗೆಹರಿಸಲು ಹೆಣಗಾಡುತ್ತಿದ್ದಾರೆ” ಎಂದು ಹೇಳಿದರು.

“ವಾರ್ಡ್‌ನಲ್ಲಿ ಸಾರ್ವಜನಿಕರ ಸಹಕಾರವೂ ಅತ್ಯವಶ್ಯ. ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಮಹಾನಗರ ಪಾಲಿಕೆ ವಿವಿಧ ಸ್ಥರದ ಹತ್ತು ಮಂದಿ ಮಹಿಳೆಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ವಾರ್ಡ್ ಸಮಿತಿಯಲ್ಲಿ ಅವಕಾಶ ನೀಡಿ, ಪ್ರತಿ ತಿಂಗಳು ವಾರ್ಡ್‌ನಲ್ಲಿಯೇ ಸಾರ್ವಜನಿಕರ ಸಭೆ ಕರೆದು ಅಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಾಯವಾಗುತ್ತದೆ. ಹಾಗಾಗಿ ವಿಜಯಪುರ ನಗರ ವಾರ್ಡ್ ಸಮಿತಿ ರಚನೆ ಅತ್ಯವಶ್ಯವಾಗಿದೆ” ಎಂದರು.

ವಿಜಯಪುರ ವಾರ್ಡ್ ಸಮಿತಿ ಬಳಗ ಸಂಚಾಲಕ ನ್ಯಾಯವಾದಿ ದಾನೇಶ ಅವಟಿ ಮಾತನಾಡಿ, “ಕಳೆದ ಒಂದು ವರ್ಷದಿಂದ ಮಹಾನಗರ ಪಾಲಿಕೆಯ ಆಯುಕ್ತರು, ಮೇಯರ್ ಅವರಿಗೆ ಅನೇಕೆ ಸಲ ಮನವಿ ಪತ್ರ ಸಲ್ಲಿಸಿ ವಿನಂತಿಸಲಾಗಿದ್ದರೂ ಮಹಾನಗರ ಪಾಲಿಕೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ವಾರ್ಡ್ ಸಮಿತಿ ರಚನೆ ಕುರಿತು ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಎಚ್ಚೆತ್ತುಕೊಂಡು ಬೀದಿಗಿಳಿದು ಹೋರಾಟ ಮಾಡುವ ಮೊದಲೇ ಮಹಾನಗರ ಪಾಲಿಕೆಯ ಆಯುಕ್ತರು ಕೂಡಲೇ ಅರ್ಜಿ ಆಹ್ವಾನಿಸಿ ವಾರ್ಡ್ ಸಮಿತಿ ರಚನೆಯ ಪ್ರಕ್ರಿಯೆ ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಅರಣ್ಯ ಕಾಯ್ದೆಯಿಂದ ಮಲೆನಾಡಿನ ಜನತೆ ಬದುಕಿನಲ್ಲಿ ಅತಂತ್ರ

ಕಾರ್ಪೋರೇಷನ್ ಆ್ಯಂಡ್ ರೂರಲ್ ಇಂಟಿಗ್ರೇಟೆಡ್ ಆರ್ಗನೈಜೇಷನ್ ಕಾರ್ಯದರ್ಶಿ ಮಹಾಂತೇಶ ಮಠಪತಿ ಮನವಿ ಪತ್ರ ಓದಿ ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಚಿದಾನಂದ ತೇರದಾಳ ಅವರಿಗೆ ಮನವಿ ಅರ್ಪಿಸಿದರು.

ಈ ಸಂದರ್ಭದಲ್ಲಿ ವಿಜು ಕಲಶಟ್ಟಿ, ದಸ್ತಗೀರ ಉಕ್ಕಲಿ, ಶ್ರೀಧರ, ಕೊಣ್ಣೂರ, ವಿಜಯಕುಮಾರ್ ಜಾಬಾ, ರವಿ ದೊಡ್ಡಮನಿ, ಎ ಡಿ ಮಕಾನದಾರ, ಬಾವಾಸಾಬ್ ಹತ್ತರ್ಕಿಹಾಳ, ಮಶಾಕ್ ಕರಜಗಿ, ಮಾಳಪ್ಪ ಹಾಲಕ್ಕನವರ, ಸಂಸ್ಥಾನಿಕ್ ಬಾಬು ಭಜಂತ್ರಿ, ಲಾಳೆಮಶಾಕ ಕುಂಟೋಜಿ, ರಮೇಶ ಬಿದರಿ, ಯಂಕಪ್ಪ ನಾಗಠಾಣ, ಮೈರುನ್ ಜಮಾದಾರ, ಮಹಾಂತೇಶ ಬಗಲಿ, ರುಕ್ಮುದ್ದೀನ್ ತೊರವಿ, ರಾಜೇಸಾಬ್ ಸುತಾರ, ಹುಸೇನ್ ನದಾಫ. ಕೃಷ್ಣ ಜಾಧವ, ರೇಷ್ಮಾ ಬಂಡಿವಡ್ಡರ, ಗೀತಾ ಕಟ್ಟಿಮನಿ, ಸುನೀತಾ ಮೋರೆ, ಕಾಮಿನಿ ಕಸಬಿ, ಮೀನಾಕ್ಷಿ ಸಿಂಗೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...