ವಿಜಯಪುರ | ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರೀಯ ಪ್ರಶಸ್ತಿ

Date:

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ವತಿಯಿಂದ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ಗೋವಾದಲ್ಲಿ ನಡೆದ 19ನೇ ಗ್ಲೋಬಲ್ ಕಮ್ಯುನಿಕೇಶನ್ ಸಮ್ಮೇಳನದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಹಾಗೂ ಸಹಾಯಕ ಪ್ರಾಧ್ಯಾಪಕ ಸಂದೀಪ್ ಅವರಿಗೆ ಸ್ವಿಡ್ಜರ್‌ಲೆಂಡ್‌ನ ಡೆಲ್ಲಾ ವಿಶ್ವವಿದ್ಯಾನಿಲಯದ ಮಾಧ್ಯಮ ತಜ್ಞ ಹಾಗೂ ಮಾಧ್ಯಮ ಅಧ್ಯಯನ ವಿಭಾಗದ ಡೀನ್ ಪ್ರೊ.ಮ್ಯಾಥ್ ಹಿಬರ್ಡ್ ಮತ್ತು ನಿರ್ದೇಶಕ, ನಟ ಪ್ರಮೋದ್ ಶೆಟ್ಟಿ ಅವರು ಜಂಟಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.

ದೇಶದ ವಿವಿಧ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿ ಮಾರ್ಗದರ್ಶನ ಮತ್ತು ಬೆಂಬಲ ನೀಡುವ ಶ್ರೇಷ್ಠ ಸಾಧನೆಗಾಗಿ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಅಬಕಾರಿ ಬಾಕಿ ಪಾವತಿಸದ ರೈತನ ಜಮೀನು ಹರಾಜು ಕ್ರಮಕ್ಕೆ ಗ್ರಾಮಸ್ಥರ ವಿರೋಧ

ರಾಷ್ಟ್ರ ಮಟ್ಟದ ಈ ಶ್ರೇಷ್ಠ ಪ್ರಶಸ್ತಿಗೆ ಕಾರಣಕರ್ತರಾಗಿರುವ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕ ಡಾ.ತಹಮೀನಾ ಕೋಲಾರ, ಸಂದೀಪ್ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರನ್ನು ಅಭಿನಂದಿಸುವುದಾಗಿ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...