ವಿಜಯಪುರ | ಎಚ್‌ಐವಿ ಸೋಂಕಿನ ಕುರಿತು ಯುವಕರಲ್ಲಿ ಜಾಗೃತಿ ಅಗತ್ಯ: ಬಾಬುರಾವ ತಳವಾರ

Date:

ಎಚ್‌ಐವಿ ಸೋಂಕಿನ ಕುರಿತು ವಿದ್ಯಾರ್ಥಿಗಳು ಮತ್ತು ಯುವ ಸಮೂಹದಲ್ಲಿ ಅರಿವು ಅಗತ್ಯ. ಸೋಂಕಿನ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು ಎಂದು ವಿಜಯಪುರ ಜಿಲ್ಲಾಸ್ಪತ್ರೆ ಏಡ್ಸ್ ನಿಯಂತ್ರಣ ಕಚೇರಿ ಜಿಲ್ಲಾ ಮೇಲ್ವಿಚಾರಕ ಬಾಬುರಾವ ತಳವಾರ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕೋಶ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಏಡ್ಸ್ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಎಚ್‌ಐವಿ ಸೋಂಕಿತ ವ್ಯಕ್ತಿಗಳೊಂದಿಗೆ ತಾರತಮ್ಯ ಮತ್ತು ಅವರ ಮೇಲಿನ ಕಳಂಕ ಹೋಗಲಾಡಿಸಲು ಸಮುದಾಯದ ಪಾತ್ರ ಅತ್ಯಂತ ಮುಖ್ಯವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಮಗ್ರ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರಗಳು ಲಭ್ಯವಿದ್ದು, ಸೋಂಕಿತರಿಗೆ ಉಚಿತ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಜನರು ಈ ಸೌಲಭ್ಯಗಳ ಬಗ್ಗೆ ಹೆಚ್ಚು ಜಾಗೃತರಾಗಬೇಕಾಗಿದೆ” ಎಂದರು.

WhatsApp Image 2025 02 04 at 11.19.48 AM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಇದು ಒಂದು ಗಂಭೀರವಾದ ಕಾಯಿಲೆ ಇದರ ಬಗ್ಗೆ ಯುವಜನತೆ ಎಚ್ಚರಿಕೆಯಿಂದ ಇರಬೇಕು ಎಂದರು. ಸೋಂಕು ತಗುಲಿದ ವ್ಯಕ್ತಿಗಳ ಜೊತೆ ಸಾಮಾನ್ಯವಾಗಿ ವರ್ತಿಸುವುದು, ಅವರಿಗೂ ಗೌರವ ನೀಡುವುದು ಸೇರಿದಂತೆ ಅವರನ್ನು ಎಲ್ಲರಂತೆಯೇ ಪರಿಗಣಿಸುವುದರಿಂದ ಅವರಲ್ಲಿ ಕೀಳರಿಮೆ ಹೋಗಲಾಡಿಸುವಲ್ಲಿ ಯುವಕರು, ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸೂಕ್ತ ಕ್ರಮಕ್ಕೆ ಕರಾಸ ಆಗ್ರಹ

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕ‌ ಕುಮಾರ ಸುರಪುರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...