ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

Date:

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.

ವಿಜಯಪುರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಡಿವಿಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಮುಖಂಡ ಅಕ್ಷಯ ಕುಮಾರ, “ದೇಶದಲ್ಲಿರುವ ಶೋಷಿತ ಸಮಾಜದ ಜನರು ತಮ್ಮ ಮಕ್ಕಳ ವಿದ್ಯಾಭ್ಯಸಕ್ಕಾಗಿ ಜೀವನವನ್ನೇ ಮುಡುಪಿಡುತ್ತಿದ್ದಾರೆ. ಶಿಕ್ಷಣದ ವ್ಯಾಪಾರೀಕರಣದ ವ್ಯವಸ್ಥೆಯ ಮಧ್ಯೆಯೂ ತಮ್ಮ ಮಕ್ಕಳು ಒಳ್ಳೆಯ ಶಿಕ್ಷಣ ಪಡೆಯಬೇಕೆಂದು ಕಷ್ಟಪಟ್ಟು ದುಡಿದು, ಶಿಕ್ಷಣ ಸಂಸ್ಥೆಗಳಿಗೆ ಹಣ ಸುರಿಯುತ್ತಿದ್ದಾರೆ. ಆದರೆ, ಇಂತಹ ಅಕ್ರಮಗಳಿಂದ ಅವರ ಶ್ರಮ, ಕನಸುಗಳಿಗೆ ಎಳ್ಳು-ನೀರು ಬಿಟ್ಟಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀಟ್ ಫಲಿತಾಂಶದ ಭ್ರಷ್ಟಾಚಾರದ ಫಾರದರ್ಶಕತೆ ಕುರಿತೂ ದೇಶವ್ಯಾಪ್ತಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರಿಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೋಂದಾಣಿಕೆ ಆಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುಹುದಾಗಿ ಎನ್‌ಟಿಎ ಸಮಜಾಯಸಿ ನೀಡಿದೆ. ಆದರೆ, ಗ್ರೇಸ್‌ ಅಂಕ ನೀಡಿರುವ ಮಾನದಂಡವು ಸಂಪುರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ವಿಧ್ಯಾರ್ಥಿ ಪರಿಷತ್ ಮುಖಂಡ ಮಾದೇಶ, ಯುವರಾಜ್, ಯಾಶಿನ್, ಪ್ರಜ್ವಲ್, ಗೌಡಪ್ಪ ಗೌಡಾ, ಸಂದೇಶ, ಮುಂತಾದ ಸಾವಿರಾರು ವಿಧ್ಯಾರ್ಥಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...