ವಿಜಯಪುರ | ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎನ್‌ಎಸ್ಎಸ್‌ ಪಾತ್ರ‌ ಅಪಾರ: ಕುಲಪತಿ ಶಾಂತಾದೇವಿ ಟಿ

Date:

ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್‌ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿಜಯಪುರದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶ ಮತ್ತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ಮತ್ತು ಕ್ರೀಡೆ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ “ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಗಾಂಧೀಜಿ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಹೊಣೆಗಾರಿಕೆಯನ್ನು ಬೆಳೆಸುವುದು ಮಾತ್ರವಲ್ಲದೆ, ಯುವಕರಲ್ಲಿ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವುದಕ್ಕೂ ಸಹಾಯಕವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡಿ ಪಿ ಕೃಷ್ಣ ಮಾತನಾಡಿ, “ಗಾಂಧೀಜಿಯವರು ರಾಜಕೀಯ ಕಾರ್ಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದರು. ಸಂಸದೀಯ ಕೆಲಸ ಮತ್ತು ರಚನಾತ್ಮಕ ಕೆಲಸ, ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಯುವಪೀಳಿಗೆ ದಾರಿ ತಪ್ಪುತ್ತಿರುವುದು ಸತ್ಯ. ಇದರಿಂದ ತಪ್ಪಿಸಿಕೊಳ್ಳಲು ಗಾಂಧೀಜಿಯವರ ವಿಚಾರಗಳ ಬಗ್ಗೆ ಚಿಂತನೆ ಮಾಡುವುದು, ಅವರನ್ನು ಓದಿ ಅರ್ಥೈಸಿಕೊಳ್ಳುವುದು ಮತ್ತು ಪ್ರಶ್ನೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ʼಮೌಲ್ಯಗಳು ಉಳಿಯದೆ ಹೋದರೆ, ದೇಶ ಉಳಿಯುವುದಿಲ್ಲʼ ಎಂಬ ಗಾಂಧೀಜಿಯವರ ಮಾತು ಇಂದಿಗೂ ಪ್ರಸ್ತುತ” ಎಂದರು.

ಮೂರು ಗೋಷ್ಠಿಗಳನ್ನು ನಡೆಸಲಾಯಿತು. ಮೊದಲನೆ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ.ಎಸ್ ಜಿ ಸಿದ್ದರಾಮಯ್ಯ ‘ಕಾಯಕ ನಿಷ್ಠೆ’ ಎಂಬ ವಿಷಯದ ಕುರಿತು ವಿಷಯವನ್ನು ಮಂಡಿಸಿದರು. ಅಧ್ಯಕ್ಷತೆಯನ್ನು ಪ್ರೊ.ಪಿ ಜಿ ತಡಸದ ವಹಿಸಿದ್ದರು. ಎರಡನೆಯ ಗೋಷ್ಠಿಯನ್ನು ಡಾ.ಅಬೀದಾ ಬೇಗಂ ‘ಗಾಂಧೀಜಿಯವರ ಪ್ರಸ್ತುತ ಸಮಸ್ಯೆಗಳು ಮತ್ತು ಎನ್ ಎಸ್ ಎಸ್ ಅಧಿಕಾರಿಯ ಜವಾಬ್ದಾರಿ’ ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ.ಓಂಕಾರ ಕಾಕಡೆ ವಹಿಸಿದ್ದರು. ಮೂರನೇ ಗೋಷ್ಠಿಯಲ್ಲಿ ಲಕ್ಷ್ಮೀದೇವಿ ವೈ ‘ಮಹಿಳೆಯರ ವ್ಯಕ್ತಿತ್ವ ವಿಕಸನದಲ್ಲಿ ಎನ್ ಎಸ್ ಎಸ್‌ನ ಪಾತ್ರ’ ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ.ಸಕ್ಸಾಲ್ ಹೂವಣ್ಣ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು: ಅಶೋಕ್ ಮಣಿ

ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ ವಹಿಸಿ ಮಾತನಾಡಿದರು. ಸಮಾರಂಭದಲ್ಲಿ ಅಮರನಾಥ ಪ್ರಜಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷರು ಪ್ರೊ. ಎಸ್‌ ಜಿ ಸಿದ್ದರಾಮಯ್ಯ, ಡಾ. ಅಬಿದಾ ಬೇಗಂ, ಎನ್‌ಎಸ್‌ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ವಿವಿಧ ಜಿಲ್ಲೆಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...